- ಬಿಜೆಪಿ ಭ್ರಷ್ಟಾಚಾರ ವಿರುದ್ಧ ಕಾಂಗ್ರೆಸ್ ಹೋರಾಟ
- ಎಲ್ಲಾ ವ್ಯಾಪಾರಿಗಳಲ್ಲಿ ಮನವಿ ಮಾಡಿದ ಡಿಕೆಶಿ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ದ ಮಾರ್ಚ್ 9 ರಂದು ಕರ್ನಾಟಕ ಬಂದ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. ಈ ಮೂಲಕ ಮಾ.9ಕ್ಕೆ ಕರುನಾಡು ಸ್ತಬ್ದವಾಗಲಿದೆ.
ಬಿಜೆಪಿ ಭ್ರಷ್ಟಾಚಾರ ಖಂಡಿಸಿ ಮಾರ್ಚ್ 9ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 11 ಗಂಟೆವರೆಗೆ ಎಲ್ಲಾ ವ್ಯಾಪಾರಿಗಳು ಬಂದ್ಗೆ ಬೆಂಬಲ ನೀಡುವಂತೆ ಕೋರಿದ್ದಾರೆ.
ಇತ್ತೀಚಿಗೆ ಬಿಜೆಪಿ ಶಾಸಕನ ಮಗ ಕೋಟಿ ಕೋಟಿ ಹಣದ ಜತೆ ಸಿಕ್ಕಿಬಿದ್ದಿರುವ ನಡುವೆ ಎಲ್ಲೆಡೆ 40% ಕಮಿಷನ್ ಮೂಲಕ ಸರಕಾರ ಸಂಪೂರ್ಣ ಭ್ರಷ್ಟಾಚಾರ ಮಾಡುತ್ತಿದೆ ಎಂದು ಆರೋಪಿಸಿ ಬಂದ್ ಮಾಡಲಾಗುತ್ತಿದೆ.
ಯಾರಿಗೂ ತೊಂದರೆ ಆಗಬಾರದು!: ಬಂದ್ ವೇಳೆ ಯಾವುದೇ ಶಾಲೆ, ಕಾಲೇಜು ಆಸ್ಪತ್ರೆ ಸಾರ್ವಜನಿಕರಿಗೆ ತೊಂದರೆಯಾಗಬಾರದು, ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಯಾರೂ ಮಾಡಬಾರದು. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತಮಾಡಲು ನಿಮ್ಮ ಸಹಕಾರ ಬೇಕು. ಅದಕ್ಕಾಗಿ ಎಲ್ಲ ಸಂಘ, ಸಂಸ್ಥೆಗಳು ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದಾರೆ.