- ಎಪಿಎಲ್, ಬಿಪಿಎಲ್ ಕುಟುಂಬಗಳಿಗೆ ವಿದ್ಯುತ್
- ಗೃಹ ಲಕ್ಷ್ಮಿ ಯೋಜನೆ: ಜೂನ್ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಸಮಯಾವಕಾಶ
NAMMUR EXPRESS NEWS
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಘೋಷಿಸಿದ ಐದು ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜುಲೈ 1ರಿಂದ 200 ಯೂನಿಟ್ ವಿದ್ಯುತ್ ಉಚಿತ ಘೋಷಣೆ ಮಾಡಿದ್ದು ಎಪಿಎಲ್, ಬಿಪಿಎಲ್ ಕುಟುಂಬಗಳಿಗೆ ವಿದ್ಯುತ್ಸಿಗಲಿದೆ.
ಇನ್ನು ಗೃಹ ಲಕ್ಷ್ಮಿ ಯೋಜನೆಯಡಿ ಜೂನ್ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ನೀಡಲಾಗಿದೆ.
ಗೃಹಜೋತಿ ಯೋಜನೆ ಅಡಿ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಯಾರು 200 ಯೂನಿಟ್ ಒಳಗಡೆ ವಿದ್ಯುತ್ ಬಳಸುತ್ತಾರೆ ಅವರು ಬಿಲ್ ಕಟ್ಟಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜುಲೈ ಒಂದರಿಂದ 200 ಯೂನಿಟ್ ಫ್ರೀ ನೀಡಲಿದ್ದೇವೆ ಎಂದು ಘೋಷಿಸಿದ್ದಾರೆ.
ಗೃಹ ಲಕ್ಷ್ಮಿ ಯೋಜನೆ!: ಕಾಂಗ್ರೆಸ್ ನೀಡಿದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2,000 ವಿಚಾರವಾಗಿ ಮಾತನಾಡಿ ಮನೆ ಯಜಮಾನಿಯ ಅಕೌಂಟಿಗೆ ತಿಂಗಳಿಗೆ 2000 ಹಾಕುತ್ತೇವೆ ಹೀಗಾಗಿ ಅವರು ಅರ್ಜಿ ಸಲ್ಲಿಸಬೇಕು ಜೂನ್ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ನೀಡಲಾಗುವುದು. ಮನೆಯ ಜಮಾನಿ ಕಡ್ಡಾಯವಾಗಿ ಆಧಾರ್ ಕಾರ್ಡ್ ಬ್ಯಾಂಕ್ ಅಕೌಂಟ್ ಪಾಸ್ ಬುಕ್ ಜೆರಾಕ್ಸ್ ನೀಡಬೇಕು. ಎಪಿಎಲ್ ಮತ್ತು ಬಿಪಿಎಲ್ ಕಾರ್ಡುದಾರರಿಗೂ ಕೂಡ ಈ ಯೋಜನೆ ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಗೃಹಲಕ್ಷ್ಮಿ ಅನ್ನಭಾಗ್ಯ ಗೃಹಜೋತಿ ಯುವನಿದಿ ಮಹಿಳೆಯರಿಗೆ ಉಚಿತ ಬಸ್ ಪಾಸ್ ಯೋಜನೆ ಜಾರಿ ಬಗ್ಗೆ ವಿವರಿಸಿದರು. ಐದು ಗ್ಯಾರಂಟಿಗಳನ್ನ ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಬೇಕು ಎಂದು ತೀರ್ಮಾನ ಮಾಡಲಾಗಿದ್ದು ಯಾವುದೇ ಜಾತಿ ಧರ್ಮ ಭಾಷೆ ಭೇದವಿಲ್ಲದೆ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಹೇಗೆ?
ಮನೆ ಯಜಮಾನಿಗೆ ತಿಂಗಳಿಗೆ 2,000 ಜಮಾ ಮಾಡುತ್ತೇವೆ. ಹಾಗಾಗಿ ಅವರು ಅಕೌಂಟ್ ನಂಬರ್ ಆಧಾರ್ ಕಾರ್ಡ್ ಕೊಡಬೇಕು ಅಲ್ಲದೆ ಅದಕ್ಕೆ ಆನ್ಲೈನ್ ಅರ್ಜಿ ಸಲ್ಲಿಸಬೇಕು ಜೂನ್ 15ರಿಂದ ಜುಲೈ 15ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಬಳಿಕ ದಾಖಲೆಗಳನ್ನು ಪರಿಶೀಲಿಸಿ ಆಗಸ್ಟ್ 15 ರಿಂದ ಮನೆ ಯಜಮಾನಿ ಬ್ಯಾಂಕ್ ಖಾತೆಗೆ ಹಣ ಹಾಕಲಾಗುವುದು ಇದು ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರಿಗೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
ವಿಧವಾ ವೇತನ ವೃದ್ಧಾಪ್ಯ ವೇತನ ಅಂಗವಿಕಲರಿಗೆ ಈಗಾಗಲೇ ಬರುತ್ತಿರುವ ಪಿಂಚಣಿ ಜೊತೆಗೆ ಈ ಎರಡು ಸಾವಿರ ರೂಪಾಯಿ ಮನೆ ಯಜಮಾನಿಗೆ ಸಿಗಲಿದೆ.
ಈಗಾಗಲೇ ತಿಳಿಸಿರುವಂತೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ಶಕ್ತಿ ಯೋಜನೆಯನ್ನು ಜೂನ್ 11 ರಿಂದ ಆರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದವರು ವಿದ್ಯಾರ್ಥಿನಿಯರು ಸೇರಿ ಎಲ್ಲ ಮಹಿಳೆಯರಿಗೆ ಶಕ್ತಿ ಯೋಜನೆ ಅನ್ವಯವಾಗಲಿದೆ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದ್ದಾರೆ.
ಯಾವೆಲ್ಲ ಬಸ್ಗಳಲ್ಲಿ ಉಚಿತ ಪ್ರಯಾಣ?
- ಕೆಎಸ್ಆರ್ಟಿಸಿ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ
- ಎಸಿ ನಾನ್ ಸಿ ಸ್ಲೀಪರ್ ಬಸ್ಗಳಲ್ಲಿ ಉಚಿತ ಪ್ರಯಾಣವಿಲ್ಲ
- ಎಸಿ ಮತ್ತು ಐಷಾರಾಮಿ ಬಸ್ಗಳಲ್ಲಿ ಉಚಿತ ಪ್ರಯಾಣವಿಲ್ಲ
- ಅಂತ ರಾಜ್ಯ ಪ್ರಯಾಣಕಿಲ್ಲ ಉಚಿತ ಸೌಲ