ಮೇ.7ರಂದು 2ನೇ ಹಂತದ ಮತ: ಸರ್ಕಾರಿ ರಜೆ ಘೋಷಣೆ
– ಯಾವ ಯಾವ ಜಿಲ್ಲೆಗಳಿಗೆ ಮತದಾನ: ಯಾರಿಗೆ ರಜೆ?
– ಇನ್ನೇನಿದ್ದರೂ ಎರಡನೇ ಹಂತದ ಮತ ಸಮರಕ್ಕೆ ಸಜ್ಜು!
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಮತದಾನ ಯಶಸ್ವಿಯಾಗಿ ನಡೆದ ಬೆನ್ನಲ್ಲೇ ಎರಡನೇ ಹಂತದ ಮತದಾನಕ್ಕೆ ಸಿದ್ಧತೆ ನಡೆಸಲಾಗಿದೆ. ಕರ್ನಾಟಕ ಸೇರಿ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾರರು ಮತ ಚಲಾಯಿಸಲಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಒಂದು ಹಂತದ ಮತದಾನ ಮುಗಿದಿದೆ. ಈಗ ಎರಡನೇ ಹಂತದ ಮತದಾನಕ್ಕೆ ಸಿದ್ಧತೆ ನಡೆದಿದೆ.
ಎರಡನೇ ಹಂತದ ಮತದಾನ ಪ್ರಕ್ರಿಯೇ ಮುಂದಿನ ತಿಂಗಳು ಅಂದರೆ ಮೇ 7 ರಂದು ನಡೆಯಲಿದೆ. ಇದಕ್ಕಾಗಿ ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಲೇ ಇದೆ. ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆ ಇದೀಗ ಮತದಾನದ ದಿನದಂದು ಸಾರ್ವತ್ರಿಕ ರಜೆ ಘೋಷಿಸಲು ಆದೇಶ ಹೊರಡಿಸಲಾಗಿದೆ.
ಯಾವ ಯಾವ ಜಿಲ್ಲೆಗೆ ರಜೆ?
ರಾಜ್ಯದಲ್ಲಿ ಮೇ 7ರಂದು ಲೋಕಸಭೆ ಚುನಾವಣೆ 14 ಕ್ಷೇತ್ರಗಳಲ್ಲಿ ನಡೆಯಲಿದೆ. ಇದರಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳು ಸೇರಿವೆ.
ಎಲ್ಲಾ ಕಡೆ ರಜೆ ಘೋಷಣೆ
ಸರಕಾರಿ ಕಚೇರಿ, ಶಾಲಾ ಕಾಲೇಜ್, ಸರಕಾರಿ ಸ್ವಾಮ್ಯದ ಸಂಸ್ಥೆ ಜೊತೆಗೆ ವ್ಯವಹಾರಿಕ ಸಂಸ್ಥೆಗಳಿಗೂ ರಜೆ ಘೋಷಣೆಯಾಗಲಿದೆ. ಈ ಆದೇಶ ಜಿಲ್ಲೆಯ ಜನಸಾಮಾನ್ಯರಿಗೆ ಮತದಾನ ಮಾಡಲು ಅನುಕೂಲವಾಗುವ ದೃಷ್ಟಿಯಿಂದ ಮಾಡಲಾಗಿದೆ.