ರಾಜ್ಯದಲ್ಲಿ 4 ದಿನ ಭಾರೀ ಮಳೆ..!
– ಹವಾಮಾನ ಇಲಾಖೆ ಮಾಹಿತಿ: ಎಲ್ಲೆಲ್ಲಿ ಮಳೆ..?
– ಮಲೆನಾಡು, ಕರಾವಳಿಯಲ್ಲೂ ಮಳೆ ಅಲರ್ಟ್
NAMMUR EXPRESS NEWS
ಬೆಂಗಳೂರು: ಮುಂದಿನ 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಯಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ರಾಮನಗರ, ಮೈಸೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರದ ಅಲ್ಲಲ್ಲಿ ಮಳೆಯಾಗಬಹುದು. ಕೆಲವು ಕಡೆ ಮೋಡ ಕವಿದ ವಾತಾವರಣ ಇರಬಹುದು. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯಾವುದೇ ಮಳೆ ಸೂಚನೆ ಇಲ್ಲ.
ಬದಲಿಗೆ ಒಣಹವೆಯೇ ಇರಲಿದೆ. ಇತ್ತ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ, ಯಾದಗಿರಿಯಲ್ಲೂ ಒಣಹವೆ ಇರಲಿದೆ.
ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲೆ ಗಾಳಿ ಬೀಸಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.