ರಾಜ್ಯೋತ್ಸವ ದಿನ ಹಾಡಬೇಕಾದ 5 ಹಾಡುಗಳು!
– ರಾಜ್ಯೋತ್ಸವ ಸಂಭ್ರಮದಲ್ಲಿ ಗಾಯನ ಕಡ್ಡಾಯ
– ರಾಜ್ಯದ ಎಲ್ಲೆಡೆ ರಾಜ್ಯೋತ್ಸವದ ಸಂಭ್ರಮ
NAMMUR EXPRESS NEWS
ಬೆಂಗಳೂರು: ನವೆಂಬರ್ 1. ಕನ್ನಡ ರಾಜ್ಯೋತ್ಸವ ನಾಡಿನೆಲ್ಲೆಡೆ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ನಡೆದಿದೆ. ರಾಜ್ಯ ಸರ್ಕಾರ ಅಧಿಕೃತ ಕಾರ್ಯಕ್ರಮಗಳಲ್ಲಿ ಐದು ಕನ್ನಡ ಗೀತೆಗಳ ಗಾಯನವನ್ನು ಕಡ್ಡಾಯಗೊಳಿಸಿದೆ.
ಕರ್ನಾಟಕ ಸಂಭ್ರಮ 50ನೇ ವರ್ಷಾಚರಣೆ ನಡೆಯುತ್ತಿದೆ. ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣಗೊಂಡು ಈ ವರ್ಷದ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಈ ಶುಭ ಸಂದರ್ಭದಲ್ಲಿ ಐದು ಕನ್ನಡಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸಬೇಕು ಎನ್ನುವುದು ರಾಜ್ಯ ಸರ್ಕಾರದ ಮನವಿ.
ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕ ಅರಿವು ಮೂಡಿಸುವ ಯೋಜನೆ ಹಮ್ಮಿಕೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ.
ನ.1ರಂದು ರಾಜ್ಯದೆಲ್ಲೆಡೆ ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಭ್ರಮ 50 ಅಭಿಯಾನದ ಅಂಗವಾಗಿ ಆಯ್ಕೆ ಮಾಡಿರುವ ನಾಡಿನ ಹೆಸರಾಂತ ಕವಿಗಳ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ಸಮಸ್ತ ಕನ್ನಡಿಗರು ಕನ್ನಡಾಂಬೆಗೆ ನುಡಿ ನಮನ (ಗೀತೆ ಗಾಯನ) ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಹಾಡಬೇಕಾಗಿರುವ ಹಾಡುಗಳು ಇವು
1. ಹುಯಿಲಗೋಳ ನಾರಾಯಣ ರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು
2. ಕುವೆಂಪು ವಿರಚಿತ ಎಲ್ಲಾದರೂ ಇರು ಎಂತಾದರು ಇರು
3. ದ. ರಾ. ಬೇಂದ್ರೆ ಅವರ ಒಂದೇ ಒಂದೇ ಕರ್ನಾಟಕ ಒಂದೇ
4. ಸಿದ್ದಯ್ಯ ಪುರಾಣಿಕ ಅವರ ಹೊತ್ತಿತೋ ಹೊತ್ತಿತು ಕನ್ನಡ ದೀಪ
5. ಚನ್ನವೀರ ಕಣವಿ ಅವರ ಹೆಸರಾಯಿತು ಕರ್ನಾಟಕ