12 ಕಾಲು ಬೆರಳು, 13 ಕೈಬೆರಳಿರುವ ಮಗು!
– ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ಘಟನೆ
– ಮಗು ನೋಡಲು ಜನವೋ ಜನ..!
NAMMUR EXPRESS NEWS
ಬಾಗಲಕೋಟೆ : ರಾಜ್ಯದಲ್ಲಿ ಅಚ್ಚರಿ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು 12 ಕಾಲ್ಪೆರಳು, 13 ಕೈಬೆರಳಿರುವ ಮಗುವಿಗೆ ಜನ್ಮ ನೀಡಿದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ನಡೆದಿದೆ. ಮಗುವಿನ ಬಲಗೈಗೆ 6, ಎಡಗೈಗೆ 7 ಮತ್ತು ಎರಡು ಕಾಲಿನಲ್ಲಿ ಕೂಡ 6 ಬೆರಳುಗಳಿವೆ.
ಸದ್ಯ ತಾಯಿ ಮಗು ಆರೋಗ್ಯವಾಗಿದ್ದು, ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಕ್ರೋಮೋಸೋಮ್ ಗಳಿಂದ ಇಂತಹ ಮಗು ಹುಟ್ಟುತ್ತದೆ ಎಂದು ವೈದ್ಯರು ಹೇಳಿದ್ದಾರೆ.
ನನ್ನ ಹೆಂಡತಿ ಮಕ್ಕಳ ಭಾಗ್ಯ ಕರುಣಿಸುವಂತೆ ಕುಂದರಗಿಯ ಭುವನೇಶ್ವರಿ ದೇವಿಗೆ ಹರಕ್ಕೆ ಹೊತ್ತಿದ್ದಳು. ಹರಕ್ಕೆ ಹೊತ್ತ 4ನೇ ವಾರದಲ್ಲಿಯೇ ಗರ್ಭಿಣಿಯಾಗುವ ಅವಕಾಶ ದೊರೆಯಿತು ಎಂದು ಮಗುವಿನ ತಂದೆ ಗುರಪ್ಪ ಸಂತಸ ಹಂಚಿಕೊಂಡಿದ್ದಾರೆ