ಸಾರ್ವಜನಿಕ ಪ್ರಕಟಣೆ
– ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ
– ಅಧಿಕೃತ ವೆಬ್ ಸೈಟ್ ನಲ್ಲಿ ಲಿಂಕ್ ಮಾಡಿಸಬೇಕು
NAMMUR EXPRESS NEWS
ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿಯನ್ನು ನೀಡಲಾಗಿದ್ದು, ಜಿಲ್ಲೆಯ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್ಸೈಟ್(ಜಾಲತಾಣ) https://landrecords.karnataka.gov.in/service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕಛೇರಿ ಪ್ರಕಟಣೆ ತಿಳಿಸಿದೆ.