ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಬದಲು!
– ಕಾಂಗ್ರೆಸ್ 15 ರಿಂದ 20 ಸ್ಥಾನಗಳನ್ನು ಗೆಲ್ಲುತ್ತೇವೆ: ಸಿಎಂ ಸಿದ್ದರಾಮಯ್ಯ
– ಕಾಂಗ್ರೆಸ್ ಸರ್ಕಾರ ಇರುವಷ್ಟೂ ದಿನ ಗ್ಯಾರಂಟಿ ಯೋಜನೆ ಇರುತ್ತೆ
NAMMUR EXPRESS NEWS
ಬೆಂಗಳೂರು: ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆಯ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಸ್ಪಷ್ಟನೆ ನೀಡಿದ್ದಾರೆ. ‘ಲೋಕಸಭೆ ಚುನಾವಣೆ ನಂತರ ಯಾವುದೇ ಸಚಿವ ಸಂಪುಟ ಪುನಾರಚನೆ ಸುದ್ದಿಗಳಲ್ಲಿ ಹುರುಳಿಲ್ಲ. ಆ ಬಗ್ಗೆ ನಾವಿನ್ನೂ ಯೋಚಿಸಿಲ್ಲ ಎಂದರು. ಸಚಿವ ಸಂಪುಟ ಪುನಾರಚನೆ ಮಾಡುವ ಯೋಚನೆ ಸದ್ಯಕ್ಕಿಲ್ಲ. ಯಾವುದೇ ಕಾರಣಕ್ಕೂ ನಾವು ಯಾವುದೇ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ. ಕಾಂಗ್ರೆಸ್ ಸರ್ಕಾರ ಇರವಷ್ಟೂ ದಿನ ಗ್ಯಾರಂಟಿ ಯೋಜನೆ ಮುಂದುವರೆಯುತ್ತದೆ ಎಂದರು. ಅಂತೆಯೇ ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ ಕಾಂಗ್ರೆಸ್ 15 ರಿಂದ 20 ಸ್ಥಾನಗಳನ್ನು ಪಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು.