ರಾಜ್ಯಕ್ಕೆ ಮತ್ತೆ ವರುಣನ ಕಾಟ?!
– ಡಿ.9ರಿಂದ 4 ದಿನ ಮಳೆ ಬರುವ ಸಾಧ್ಯತೆ
– ರೈತರಿಗೆ ಆತಂಕ: ರೋಗ ಭೀತಿ
NAMMUR EXPRESS NEWS
ಬೆಂಗಳೂರು: ಒಂದು ಕಡೆ ಚಳಿ, ಮತ್ತೊಂದು ಕಡೆ ಮಳೆ.. ಒಟ್ಟಿನಲ್ಲಿ ತಂಡಿ ವಾತಾವರಣ ಇದೀಗ ಜನರನ್ನು ಕಾಡುತ್ತಿದೆ. ಇದಲ್ಲದೆ ಇದೀಗ ಎಲ್ಲಾ ರೈತರಿಗೂ ಕೃಷಿ ಸ. ಸಮಯವಾದ್ದರಿಂದ ಮತ್ತಷ್ಟು ಆತಂಕ ಸೃಷ್ಟಿ ಮಾಡಿದೆ. ಡಿ.9ರಿಂದ ನಾಲ್ಕು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ ಹಾಗೂ ವಿಜಯಪುರ. ಕಲ್ಯಾಣ ಕರ್ನಾಟಕದ ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಜೊತೆಗೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ,ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದೆ.