ಶುಕ್ರವಾರ ಅಖಂಡ ಕರ್ನಾಟಕ ಬಂದ್..!
– ಅಗತ್ಯ ಸೇವೆಗಳು ಹೊರತುಪಡಿಸಿ ಎಲ್ಲವು ಬಂದ್!
– ಏನಿರುತ್ತೆ? ಏನಿರಲ್ಲ! ಇಲ್ಲಿದೆ ಸಂಪೂರ್ಣ ಮಾಹಿತಿ
– ಶಾಲಾ, ಕಾಲೇಜು ಆಯಾ ಜಿಲ್ಲಾಧಿಕಾರಿಗಳ ಹೊಣೆ
– ಶಿವಣ್ಣ ನೇತೃತ್ವದಲ್ಲಿ ಕರ್ನಾಟಕ ಚಿತ್ರರಂಗ ಸಾಥ್
NAMMUR EXPRESS NEWS
ಬೆಂಗಳೂರು : ಶುಕ್ರವಾರ ಅಖಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರ್ವಜನಿಕರಿಗೆ ಅಗತ್ಯವಿರುವ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳು ಬಂದ್ ಅಗಲಿವೆ. ಯಾವ ಯಾವ ಸೇವೆಗಳು ಇರಲಿದ್ದು, ಯಾವ ಸೇವೆಗಳು ಬಂದ್ ಆಗುವುದರ ಮಾಹಿತಿ ಇಲ್ಲಿದೆ. ಅಖಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರ ಸಂಘ ಬೆಂಬಲ ಸೂಚಿಸಿದ್ದರಿಂದ ಎಲ್ಲ ಹೋಟೆಲ್ ಗಳು ಬಂದ್ ಇರಲಿವೆ, ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ನಾಳಿನ ಬಂದ್ ಗೆ ಬೆಂಬಲ ನೀಡಿರುವುದರಿಂದ ಚಿತ್ರಮಂದಿರಗಳು ಬಂದ್ ಇರಲಿವೆ. ಶಾಪಿಂಗ್ ಮಾಲ್ ಗಳು ಬಂದಾಗಲಿವೆ, ಆಟೋ, ಕ್ಯಾಬ್ ಓಲಾ, ಉಬರ್ಗಳು ಸೇರಿದಂತೆ ಖಾಸಗಿ ಸಾರಿಗೆ ವಾಹನಗಳು ಶುಕ್ರವಾರ ರಸ್ತೆಗೆ ಇಳಿವುದಿಲ್ಲ ಅಲ್ಲದೆ ಬೇಕರಿಗಳು ಸಹ ಕ್ಲೋಸ್ ಆಗಿರಲಿವೆ.
ಇನ್ನೂ ಅಗತ್ಯ ಸೇವೆಗಳು ಅಂದರೆ ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್ ಶಾಪ್ ಗಳು, ಅಂಬುಲೆನ್ಸ್ ಸೇವೆಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ನಂದಿನಿ ಹಾಲಿನ ಅಂಗಡಿಗಳು ತೆರೆದಿರುತ್ತವೆ.ಅದರಂತೆ ಶಾಲಾ ಕಾಲೇಜುಗಳು, ಮೆಟ್ರೋ ಸೇವೆಗಳ ಬಗ್ಗೆ, ಬಿಎಂಟಿಸಿ, ಕೆಎಸ್ಆರ್ಟಿಸಿ ಸಂಚಾರ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಕಾವೇರಿ ನೀರು ತಮಿಳುನಾಡಿಗೆ ಹಾರೈಸುತ್ತಿರುವುದನ್ನು ವಿರೋಧಿಸಿ ನಾಳೆ ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು, ಕರ್ನಾಟಕ ಬಂದ್ ಗೆ ಕರೆ ನೀಡಿವೆ ಅದರಂತೆ ಗುರುವಾರ ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ಸಿಟಿ ರೌಂಡ್ಸ್ ಹಾಕಲಿದ್ದಾರೆ.
ಕರ್ನಾಟಕ ಬಂದ್ ಗೆ ಬೆಂಬಲಿಸಲು ರಾಜ್ಯದ ಜನತೆಗೆ ಮನವಿ ಮಾಡಲಿದ್ದಾರೆ. ಮಧ್ಯಾಹ್ನ 12 ರಿಂದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಿಟಿ ರೌಂಡ್ಸ್ ನಡೆಯಲಿದೆ. ಮೈಸೂರು ಬ್ಯಾಂಕ್ ವೃತ್ತದಿಂದ ಸಿಟಿ ರೌಂಡ್ಸ್ ಆರಂಭವಾಗಲಿದ್ದು, ತೆರೆದ ವಾಹನದಲ್ಲಿ ಇಡೀ ಬೆಂಗಳೂರು ನಗರದಾದ್ಯಂತ ಸಂಚರಿಸಿ ಜನರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಲಿದ್ದಾರೆ. ಎನ್ನಲಾಗುತ್ತಿದೆ. ಹೋಟೆಲ್ ಮಾಲೀಕರು, ಥಿಯೇಟರ್ ಮಾಲೀಕರು, ಮಾಲ್ ಮಾಲೀಕರು, ಅಂಗಡಿ ಮಾಲೀಕರು, ಕ್ಯಾಬ್, ಆಟೋ, ಬಿಎಂಟಿಸಿ, ಕೆ ಎಸ್ ಆರ್ ಟಿ ಸಿ, ಖಾಸಗಿ ಬಸ್ ಚಾಲಕರು, ಎಪಿಎಂಸಿಯ ಮಾಲೀಕರು, ಕಾರ್ಮಿಕರು, ಬೀದಿ ವ್ಯಾಪಾರಿಗಳನ್ನು ಭೇಟಿ ಮಾಡಿ ಕರ್ನಾಟಕ ಬಂದ್ ಗೆ ಬೆಂಬಲಿಸುವಂತೆ ಮನವಿ ಮಾಡಲಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲೂ ಬಂದ್ ಮಾಡಲು ಮನವಿ ಮಾಡಲಾಗಿದೆ.
ಕರ್ನಾಟಕ ಬಂದ್ಗೆ ಕನ್ನಡ ಚಿತ್ರರಂಗ ಬೆಂಬಲ
ಕನ್ನಡಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ಈ ಹೋರಾಟಕ್ಕೆ ಕನ್ನಡ ಚಿತ್ರರಂಗ ಕೂಡ ಬೆಂಬಲ ಸೂಚಿಸಿತ್ತು. ಚಿತ್ರೋದ್ಯಮ ಬಂದ್ ಮಾಡುವ ಮೂಲಕ ಹೋರಾಟಕ್ಕೆ ಇಳಿಯುವುದಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬುಧವಾರ ಹೇಳಿಕೆ ನೀಡಿತ್ತು. ಆದರೆ, ಈ ಹೋರಾಟದ ನೇತೃತ್ವವನ್ನು ವಹಿಸುವವರು ಯಾರು ಎನ್ನುವ ಪ್ರಶ್ನೆ ಕೂಡ ಮೂಡಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿ, ಶುಕ್ರವಾರದ ಹೋರಾಟಕ್ಕೆ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಹೀಗಾಗಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಶುಕ್ರವಾರ ಗುರುರಾಜ್ ಕಲ್ಯಾಣ ಮಂಟಪದ ಬಳಿ ಚಿತ್ರೋದ್ಯಮ ಹೋರಾಟಕ್ಕೆ ಇಳಿಯಲಿದೆ. ಸಾಕಷ್ಟು ವರ್ಷಗಳಿಂದ ಕಾವೇರಿ ನೀರಿಗಾಗಿ ಹೋರಾಟ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸೆ.29ರಂದು ಕರ್ನಾಟಕ ಬಂದ್ ಕರೆ ನೀಡಿದ್ದು, ಸೀರಿಯಲ್, ಸಿನಿಮಾ ಚಿತ್ರೀಕರಣ, ಚಿತ್ರ ಪ್ರದರ್ಶನ ಸೇರಿದಂತೆ ಎಲ್ಲಾ ಚಟುವಟಿಕೆಗಳು ಬಂದ್ ಮೂಲಕ ಚಿತ್ರೋದ್ಯಮ ಸಾಥ್ ನೀಡುತ್ತಿದೆ.
ಶುಕ್ರವಾರ ಪ್ರತಿಭಟನೆಯಲ್ಲಿ ಶಿವಣ್ಣ, ಉಪೇಂದ್ರ, ರಾಘಣ್ಣ, ನೆನಪಿರಲಿ ಪ್ರೇಮ್, ಅಜಯ್ ರಾವ್, ಪ್ರಜ್ವಲ್ ದೇವರಾಜ್, ರಂಗಾಯಣ ರಘು, ಸಾಧು ಕೋಕಿಲಾ ಸೇರಿದಂತೆ ಕಿರುತೆರೆ ನಟ ನಟಿಯರು ಭಾಗಿಯಾಗುವ ಸಾಧ್ಯತೆ ಇದೆ.
ಫಿಲ್ಡ್ ಚೇಂಬರ್ ಅಂಗ ಸಂಸ್ಥೆಗಳಾದ, ನಿರ್ಮಾಪಕರ ಸಂಘ, ಕಲಾವಿದರ ಸಂಘ, ನಿರ್ದೇಶಕರ ಸಂಘದಿಂದ, ಒಕ್ಕೂಟದಿಂದಲೂ ಕರ್ನಾಟಕ ಬೆಂಬಲಿಸಲಿದ್ದಾರೆ.