ಬೆಳಕಿನ ಹಬ್ಬದ ಜತೆಗೆ ಎಲ್ಲೆಲ್ಲೂ ಕನ್ನಡ ಹಬ್ಬ!
– ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು
– ಕನ್ನಡ ರಾಜ್ಯೋತ್ಸವ ಆಗಲಿ ಪ್ರತಿ ಮನೆಯ ಉತ್ಸವ
– ಕನ್ನಡ ರಾಜ್ಯೋತ್ಸವದ ಆಚರಣೆ ನವೆಂಬರ್ ಸೀಮಿತ ಬೇಡ!
ಮನದೊಳಗೆ ಕನ್ನಡ ಮನಸ್ಸೊಳಗೂ ಕನ್ನಡ
ಕನ್ನಡವೇ ಎಲ್ಲಾ ಕನ್ನಡವಿಲ್ಲದೇ ಬೇರೇನೂ ಇಲ್ಲ
ನಮ್ಮ ತಾಯಿ ಭಾಷೆ ಕನ್ನಡ..!
ಸರ್ವರಿಗೂ 69ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಇಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ರಾಜ್ಯ ಸರ್ಕಾರವು ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಆಚರಣೆಗೆ ಮಾಡುತ್ತಿದೆ. ಈಗಾಗಲೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಇನ್ನು ಎಲ್ಲಾ ಸಂಸ್ಥೆಗಳಲ್ಲೂ ಈ ಭಾರಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲು ಕರೆ ಕೊಡಲಾಗಿದೆ.
ಕನ್ನಡ ನಾಡು ಹಲವು ವೈವಿಧ್ಯಗಳ ಬೀಡು, ಕವಿ ಸಾಹಿತಿಗಳ ಸೂರು. ಕರ್ನಾಟಕ ರಾಜ್ಯ ಉದಯವಾದ ದಿನವಾಗಿದ್ದು, ನಮ್ಮ ಕನ್ನಡ ನಾಡು ಎಂಬುದು ನಮ್ಮಲ್ಲಿ ರಾಷ್ಟ್ರಾಭಿಮಾನ ಉಕ್ಕುವಂತೆ ಮಾಡುತ್ತದೆ. ಇಂತಹ ಅದ್ಭುತ ಕನ್ನಡ ನಾಡು ಉದಯವಾಗಲು ಶ್ರಮಿಸಿದವರು ಅನೇಕರು. ಕನ್ನಡ ನಾಡನ್ನು ಏಕೀಕರಣ ಮಾಡಿದ ಕೀರ್ತಿ ಹಲವು ಹೋರಾಟಗಾರರದ್ದು.
ನವೆಂಬರ್ 1 ರಂದು ಎಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ಹೊತ್ತಿನಲ್ಲಿ ಕರ್ನಾಟಕ ಏಕೀಕರಣದ ಬಗ್ಗೆ ನೆನಪು ಮಾಡಿಕೊಳ್ಳಲೇಬೇಕು. ಕನ್ನಡ ಭಾಷಿಗರ ನಾಡನ್ನು ಒಗ್ಗೂಡಿಸಬೇಕು ಎಂದು ಕನಸು ಕಂಡವರು ನೂರಾರು ಮಂದಿ. ಭಾರತ ಸ್ವಾತಂತ್ರ್ಯ ಹೋರಾಟಕ್ಕೂ ಮುನ್ನ ಕರ್ನಾಟಕ ಏಕೀಕರಣಕ್ಕಾಗಿ ಹೋರಾಟ ನಡೆಸಲಾಗಿತ್ತು. ಈ ಹೋರಾಟದಲ್ಲಿ ಹಲವು ಚಳವಳಿಗಾರರು ಭಾಗವಹಿಸಿದ್ದರು. ಇವರೆಲ್ಲರೂ ಕನ್ನಡ ನಾಡು ಉದಯವಾಗಬೇಕು ಎಂದು ಒಮ್ಮನಸ್ಸಿನಿಂದ ಹೋರಾಡಿದ್ದರು. ಈ ಎಲ್ಲರ ಹೋರಾಟದ ಶ್ರಮದ ಫಲವಾಗಿ 1956, ನವೆಂಬರ್ 1ರಂದು ಮೈಸೂರು ರಾಜ್ಯ ಉದಯವಾಯಿತು. ಕನ್ನಡ ಭಾಷೆ ಮಾತನಾಡುವ ಜನರ ಪ್ರಾಂತ್ಯಗಳನ್ನು ಒಗ್ಗೂಡಿಸಿ ಒಂದು ರಾಜ್ಯವನ್ನಾಗಿ ಮಾಡಲಾಯಿತು.
ಅಂದಹಾಗೆ ಈಗ ನವೆಂಬರ್ 01 ರಂದು ಮಾತ್ರವಲ್ಲದೇ ಇಡೀ ತಿಂಗಳು ರಾಜ್ಯದ ಎಲ್ಲೆಡೆ ಮಾತ್ರವಲ್ಲದೇ ವಿದೇಶಗಳಲ್ಲು ಸಹ ಕನ್ನಡಿಗರು ಕನ್ನಡ ಭಾಷೆಯ ಹಬ್ಬ ಆಚರಿಸುವುದು, ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ನೆನೆದು ಮೆಲುಕುಹಾಕುವುದು ಸಾಮಾನ್ಯ. ಇದೊಂದು ಸಡಗರದ ಹಬ್ಬ ಸಹ ಎಲ್ಲಿರಿಗೂ. ಇನ್ನು ಶಾಲಾ, ಕಾಲೇಜುಗಳಲ್ಲಿ ಈ ಹಬ್ಬವನ್ನು ಹಲವು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕವೇ ನಡೆಸಲಾಗುತ್ತದೆ.
ಕನ್ನಡಕ್ಕೆ ಅನೇಕ ಮಹನೀಯರ ಕೊಡುಗೆ
ಆಲೂರು ವೆಂಕಟರಾವ್ ರವರು 1905 ರಲ್ಲಿ ಕರ್ನಾಟಕ ಏಕೀಕರಣ ಚಟುವಳಿಯೊಂದಿಗೆ ರಾಜ್ಯವನ್ನು ಏಕೀಕರಿಸುವ ಕನಸು ಕಂಡ ಮೊದಲ ವ್ಯಕ್ತಿ. ರಾಜ್ಯದ ಏಕೀಕರಣಕ್ಕೆ ಕೀರ್ತಿ ಗಳಿಸಿದ ಇತರ ವ್ಯಕ್ತಿಗಳಲ್ಲಿ ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಕೆ ಶಿವರಾಮ ಕಾರಂತ, ಎ ಎನ್ ಕೃಷ್ಣ ರಾವ್ ಮತ್ತು ಬಿ ಎಂ ಶ್ರೀಕಂಠಯ್ಯ ರವರು ಪ್ರಮುಖರು.
ನಮ್ಮ ಕನ್ನಡ ರಾಜ್ಯೋತ್ಸವದ ಆಚರಣೆ ಕೇವಲ ನವೆಂಬರ್ ಗೆ ಸೀಮಿತವಾಗದೇ ‘ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಅನು ಕ್ಷಣವು ನಮ್ಮಲ್ಲಿ ಕನ್ನಡದ ಅಭಿಮಾನವಿರಬೇಕು. ಕನ್ನಡದಲ್ಲೇ ಮಾತನಾಡುತ್ತೇನೆ, ಬರೆಯುತ್ತೇನೆ, ನಿತ್ಯ ವ್ಯವಹಾರ ದಲ್ಲಿ ಕನ್ನಡವನ್ನೇ ಬಳಸುತ್ತೇನೆ, ಕನ್ನಡೇತರರಿಗೆ ಕನ್ನಡ ಕಲಿಸುತ್ತೇನೆ, ಕನ್ನಡ ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಸಿದ್ದರಾಗುತ್ತೇವೆ ಎಂಬುದು ನಮ್ಮ ದೃಢನಿರ್ಧಾರವಾಗಿರಬೇಕು.
ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಶ್ವದಾದ್ಯಂತ ಹಮ್ಮಿಕೊಳ್ಳಲಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಸಾಧಕರಿಗೆ ಈ ಪ್ರಶಸ್ತಿಯನ್ನು ವಿತರಿಸುತ್ತಾರೆ.