Categories
ರಾಜ್ಯ

ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ!

ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ!

– ಖ್ಯಾತ ಪರಮಾಣು ವಿಜ್ಞಾನಿ ಎಂ. ಆರ್. ಶ್ರೀನಿವಾಸನ್ ಇನ್ನಿಲ್ಲ!
– ಖ್ಯಾತ ಭೌತಶಾಸ್ತ್ರಜ್ಞ ಮತ್ತು ಬರಹಗಾರ ಜಯಂತ್ ನಾರ್ಲಿಕರ್ ನಿಧನ

NAMMUR EXPRESS NEWS
ಚೆನ್ನೈ: ಖ್ಯಾತ ಪರಮಾಣು ವಿಜ್ಞಾನಿ ಮತ್ತು ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷರಾಗಿದ್ದ ಎಂ. ಆರ್. ಶ್ರೀನಿವಾಸನ್ ಮೇ. 20ರಂದು (ಇಂದು) ನಿಧನರಾಗಿದ್ದಾರೆ. 95 ವರ್ಷದ ಅವರು ತಮಿಳುನಾಡಿನ ಉದಕಮಂಡಲದಲ್ಲಿ ಅಂತಿಮ ದಿನಗಳನ್ನು ಕಳೆಯುತ್ತಿದ್ದರು.
ಪರಮಾಣು ವಿಜ್ಞಾನ ಮತ್ತು ಇಂಜಿನಿಯರಿಂಗ್​ನಲ್ಲಿ ಇವರ ಕೊಡುಗೆ ಅಪಾರವಾಗಿದೆ. ಭಾರತದ ಎರಡನೇ ಅತ್ಯುತ್ತಮ ನಾಗರಿಕ ಪ್ರಶಸ್ತ್ರಿ ಪದ್ಮ ವಿಭೂಷಣಕ್ಕೆ ಭಾಜನರಾಗಿರುವ ಶ್ರೀನಿವಾಸನ್ ಅವರ ದೂರದೃಷ್ಟಿಯ ನಾಯಕತ್ವ, ತಾಂತ್ರಿಕ ನೈಪುಣ್ಯತೆ ಮತ್ತು ದೇಶಕ್ಕೆ ಅವಿರಹಿತ ಸೇವೆಯು ಭವಿಷ್ಯದ ಪೀಳಿಗೆಗೆ ಮಾರ್ಗದರ್ಶನವಾಗಲಿದೆ.

– ಖ್ಯಾತ ಭೌತಶಾಸ್ತ್ರಜ್ಞ ಮತ್ತು ಬರಹಗಾರ ಜಯಂತ್ ನಾರ್ಲಿಕರ್ ನಿಧನ

ಮುಂಬೈ: ಖ್ಯಾತ ಭೌತಶಾಸ್ತ್ರಜ್ಞ ಮತ್ತು ಬರಹಗಾರ ಜಯಂತ್ ನಾರ್ಲಿಕರ್ ಅವರು ಪುಣೆಯಲ್ಲಿ ನಿಧನರಾಗಿದ್ದಾರೆ. ಜಯಂತ್‌ ನಾರ್ಲಿಕ‌ರ್ ಅವರಿಗೆ 86 ವರ್ಷ ವಯಸ್ಸಾಗಿತ್ತು.
‘ಬಿಗ್ ಬ್ಯಾಂಗ್’ ಮಾದರಿಗೆ ಪರ್ಯಾಯ ಮಾದರಿಗಳನ್ನು ಪ್ರತಿಪಾದಿಸಿದ್ದಕ್ಕಾಗಿ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯಿಂದಾಗಿ ನಾರ್ಲಿಕರ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದ್ದಾರೆ.
ಜಯಂತ್‌ ಅವರು 1994ರಿಂದ 1997ರವರೆಗೆ ಅಂತರರಾಷ್ಟ್ರೀಯ ಖಗೋಳ ಒಕ್ಕೂಟದ ವಿಶ್ವವಿಜ್ಞಾನ ಆಯೋಗದ ಅಧ್ಯಕ್ಷರಾಗಿದ್ದರು. ನಾರ್ಲಿಕರ್ ಅಂತರ ವಿಶ್ವವಿದ್ಯಾನಿಲಯ ಖಗೋಳ ವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರ ಕೇಂದ್ರದಲ್ಲಿ (IUCAA) ಪ್ರೊಫೆಸರ್ ಆಗಿದ್ದರು.
ಭೌತಶಾಸ್ತ್ರದಲ್ಲಿ ಪರಿಣತಿ ಹೊಂದಿದ್ದ ನಾರ್ಲಿಕರ್‌ಗೆ 1962ರಲ್ಲಿ ಸ್ಮಿತ್ ಪ್ರಶಸ್ತಿ ಮತ್ತು 1967ರಲ್ಲಿ ಆಡಮ್ಸ್ ಪ್ರಶಸ್ತಿ ಲಭಿಸಿತ್ತು.
ನಾರ್ಲಿಕರ್ ಅವರು ಟಾಟಾ ಇನ್ಸಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‌ಗೆ (1972-1989) ಸೇರುವ ಉದ್ದೇಶದಿಂದ ಭಾರತಕ್ಕೆ ಮರಳಿದ್ದರು. 1988ರಿಂದ 2003ರವರೆಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಪ್ರಸ್ತಾವಿತ ಅಂತರ ವಿಶ್ವವಿದ್ಯಾಲಯ ಖಗೋಳವಿಜ್ಞಾನ ಮತ್ತು ಅಸ್ಟೋಫಿಸಿಕ್ಸ್ ಕೇಂದ್ರದ (IUCAA) ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು.
ನಾರ್ಲಿಕರ್ ಅವರು 2021ರ ಜನವರಿಯಲ್ಲಿ ನಾಸಿಕ್‌ನಲ್ಲಿ ನಡೆದ 94ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ನಾರ್ಲಿಕ‌ರ್ ಅವರಿಗೆ ಪದ್ಮಭೂಷಣ, ಪದ್ಮವಿಭೂಷಣ ಸೇರಿದಂತೆ ಮಹಾರಾಷ್ಟ್ರ ಭೂಷಣ ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.