ಟಾಪ್ 5 ನ್ಯೂಸ್ ಕರ್ನಾಟಕ
ಬೆಳಗಾವಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರ ಸಾವು..!!
– ಕಲಬುರಗಿ: ಪತ್ನಿ ಜೊತೆ ಅಕ್ರಮ ಸಂಬಂಧದಿಂದ ಪ್ರಾಣ ಸ್ನೇಹಿತನ ಪ್ರಾಣವನ್ನೇ ತೆಗೆದ ಗೆಳೆಯ..!!
– ಚಾಮರಾಜನಗರ: ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ..!!
– ಮಂಡ್ಯ : ವೃದ್ಧನಿಂದ 11 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ
– ಶಿವಮೊಗ್ಗ: ಸಾಗರದಲ್ಲಿ ನೈತಿಕ ಪೊಲೀಸ್‌ಗಿರಿ ಮೂವರು ಆರೋಪಿಗಳ ಬಂಧನ…!!
NAMMUR EXPRESS NEWS
ಬೆಳಗಾವಿ: ಬೆಳಗಾವಿಯ ಜೋಷಿಮಾಳ್ ಎಂಬಲ್ಲಿ ಮನಕಲಕುವ ಘಟನೆ ನಡೆದಿದ್ದು, ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಒಬ್ಬಾಕೆ ಯುವತಿ ಬದುಕುಳಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತೋಷ ಕುರಡೇಕರ್, ಸುವರ್ಣ ಕುರಡೇಕರ್, ಮಂಗಳಾ ಕುರಡೇಕರ್ ಮೃತಪಟ್ಟಿದ್ದು, ಸುನಂದಾ ಕುರಡೇಕರ್ ಸ್ಥಿತಿ ಚಿಂತಾಜನಕವಾಗಿದೆ. ತಾಯಿ, ಮಗ, ಮಗಳು ಸಾವಿಗೀಡಾದವರು. ಮತ್ತೊಬ್ಬ ಮಗಳು ಸುನಂದಾ ಕುರಡೇಕರ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧುವಾರ ಬೆಳಗ್ಗೆ 9 ಗಂಟೆಗೆ ಕುಟುಂಬಸ್ಥರು ವಿಷ ಸೇವಿಸಿದ್ದಾರೆ. ಗಂಭೀರವಾಗಿರುವ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
– ಕಲಬುರಗಿ: ಪತ್ನಿ ಜೊತೆ ಅಕ್ರಮ ಸಂಬಂಧದಿಂದ ಪ್ರಾಣ ಸ್ನೇಹಿತನ ಪ್ರಾಣವನ್ನೇ ತೆಗೆದ ಗೆಳೆಯ..!!
ಕಲಬುರಗಿ: ತನ್ನ ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನ ಪ್ರಾಣವನ್ನೇ ಗೆಳೆಯ ತೆಗೆದಿರುವಂತಹ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಮುರಡಿಯಲ್ಲಿ ನಡೆದಿದೆ. ವೈರ್ನಿಂದ ಕತ್ತಿಗೆ ಬಿಗಿದು ಅಂಬರೀಶ್(28) ನನ್ನ ಅಜಯ್ ಹತ್ಯೆಗೈದಿದ್ದಾನೆ. ಕೊಲೆ ಮಾಡಿದ ಅಜಯ್ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಸದ್ಯ ಘಟನೆ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ದಾಖಲಾಗಿದೆ. ಅಂಬರೀಶ್ ಹಾಗೂ ಅಜಯ್ ಇಬ್ಬರು ಕುಚಿಕು ಗೆಳೆಯರು. ಆದರೆ ಅಜಯ್ ಪತ್ನಿ ಜೊತೆ ಅಂಬರೀಶ್ ಅಕ್ರಮ ಸಂಬಂಧ ಹೊಂದಿದ್ದ. ಹೀಗಾಗಿ ಕೆಲ ದಿನಗಳ ಹಿಂದೆ ಅಜಯ್ ಪತ್ನಿ ಮನೆ ತೊರೆದಿದ್ದಳು. ನನ್ನ ಪತ್ನಿ ನಿನ್ನ ಮಾತು ಕೇಳುತ್ತಾಳೆ. ನನ್ನ ಜೊತೆ ಇರುವುದಕ್ಕೆ ಹೇಳುವಂತೆ ಬಾ ಎಂದು ಅಂಬರೀಶ್ ನನ್ನ ಅಜಯ್ ಬೆಂಗಳೂರಿನಿಂದ ಮುರಡಿ ಬಂದಿದ್ದಾನೆ. ಈ ವೇಳೆ ತನ್ನ ಮನೆಯಲ್ಲಿ ವೈರ್ನಿಂದ ಕತ್ತಿಗೆ ಬಿಗಿದು ಅಂಬರೀಶ್ನನ್ನ ಅಜಯ್ ಹತ್ಯೆ ಮಾಡಿದ್ದಾನೆ. ಸ್ನೇಹಿತ ನನ್ನು ಕೊಲೆ ಮಾಡುವುದಷ್ಟೆ ಅಲ್ಲದೆ ಅಜಯ್ ಸ್ವತಃ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.
– ಚಾಮರಾಜನಗರ: ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ..!!
ಚಾಮರಾಜನಗರ : ತರಗತಿಯಲ್ಲಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತಕ್ಕೀಡಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 4ನೇ ತರಗತಿಯ ಮನೋಜ್ ಕುಮಾರ್ (10) ಮೃತ ದುರ್ದೈವಿ. ಮನೋಜ್ ಕುಮಾರ್ ಪಾಠ ಕೇಳುತ್ತಿದ್ದಾಗ ಕುಸಿದು ಬಿದ್ದಿದ್ದು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಮೃತ ಮನೋಜ್ ಕುಮಾರ್‌ಗೆ ಹೃದಯಸಂಬಂಧಿ ಕಾಯಿಲೆಯಿದ್ದು, ಜಯದೇವ, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಎಂದು ತಿಳಿದು ಬಂದಿದೆ.
– ಮಂಡ್ಯ : ವೃದ್ಧನಿಂದ 11 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ
ಮಂಡ್ಯ: 11 ವರ್ಷದ ಬಾಲಕಿಯ ಮೇಲೆ 65 ವರ್ಷದ ವೃದ್ಧ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಮಂಡ್ಯದ ಮದ್ದೂರು ತಾಲೂಕಿನ ತೈಲೂರು ಗ್ರಾಮದಲ್ಲಿ ನಡೆದಿದ್ದು, ಪೋಕೋ ಪ್ರಕರಣ ದಾಖಲಾಗಿದೆ. ತೈಲೂರು ನಿವಾಸಿ ಟಿ.ಜಿ.ರಾಮಯ್ಯ (65) ಆರೋಪಿ. ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಿಗನ ಸಹಾಯಕನಾಗಿ ನಿವೃತ್ತಗೊಂಡಿದ್ದು, ಪಕ್ಕದ ಮನೆಯಲ್ಲಿದ್ದ 6ನೇ ತರಗತಿ ವಿದ್ಯಾರ್ಥಿನಿಯನ್ನು ಆಟವಾಡುವ ನೆಪದಲ್ಲಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಕೇಸ್ ದಾಖಲಾದ ಬಳಿಕ ರಾಮಯ್ಯ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.
– ಶಿವಮೊಗ್ಗ: ಸಾಗರದಲ್ಲಿ ನೈತಿಕ ಪೊಲೀಸ್‌ಗಿರಿ ಮೂವರು ಆರೋಪಿಗಳ ಬಂಧನ…!!
ಶಿವಮೊಗ್ಗ: ಮುಸ್ಲಿಂ ಯುವತಿಯನ್ನು ತನ್ನ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಹಿಂದೂ ಯುವಕನ ಬೈಕ್ ಅಡ್ಡಗಟ್ಟಿ, ನೈತಿಕ ಪೊಲೀಸ್‌ಗಿರಿ ಮೆರೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಈ ಸಂಬಂಧ ಸಾಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಬ್ಬಿರ್ (65), ಅರ್ಬಾಸ್ (24), ಅಫ್ರಾಜ್ (25) ಬಂಧಿತರು. ಸೊರಬದ ಕಾನುಕೇರಿ ಗ್ರಾಮದ 19 ವರ್ಷದ ಯುವತಿಯೊಬ್ಬಳು ಜು.7ರಂದು ಹಿಂದು ಯುವಕನ ಬೈಕಿನಲ್ಲಿ ತೆರಳುತ್ತಿದ್ದಾಗ ಅಡ್ಡಗಟ್ಟಿ, ಹಿಂದು ಹುಡುಗನ ಜೊತೆಗೆ ಹೋಗುತ್ತೀಯ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಆಕೆಯ ಕೈಬೆರಳುಗಳನ್ನು ಹಿಡಿದು ತಿರುವಿ ಹಲ್ಲೆ ಮಾಡಿದ್ದಾರೆ. ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ” ಮೂವರನ್ನು ಪೊಲೀಸರು ಬಂಧಿಸಿದ್ದಾರೆ.