Categories
ರಾಜ್ಯ

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್!

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್!
– ಹುಲಿ ಉಗುರು ಧರಿಸಿದ್ದ ಕಾರಣಕ್ಕೆ ಕೇಸ್
– ಬಿಗ್ ಬಾಸ್ ಮನೆಯಿಂದಲೇ ಬಂಧಿಸಿದ ಅಧಿಕಾರಿಗಳು
– ಏನಿದು ಕೇಸ್…? ಬಂಧಿಸಿದ್ದು ಏಕೆ..?

NAMMUR EXPRESS NEWS
ಹುಲಿ ಉಗುರು ಧರಿಸಿದ್ದ ಕಾರಣಕ್ಕೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್‌ನನ್ನು ಅರಣ್ಯಾಧಿಕಾರಿಗಳು ಬಂಧಿಸಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ವರ್ತೂರು ಸಂತೋಷ್ ವಿರುದ್ಧ ಹುಲಿ ಉಗುರು ಧರಿಸಿರುವ ಆರೋಪ ಇದೆ. ಬಿಗ್‌ಬಾಸ್ ಮನೆಗೆ ಏಕಾಏಕಿಯಾಗಿ ಎಂಟ್ರಿಕೊಟ್ಟ ಅರಣ್ಯಾಧಿಕಾರಿಗಳು ಸಂತೋಷ್‌ನನ್ನು ಬಂಧಿಸಿದ್ದಾರೆ. ಸದ್ಯ ಬಿಗ್ ಬಾಸ್ ಮನೆಯಿಂದ ಆರೋಪಿಯನ್ನು ಕರೆದುಕೊಂಡು ಹೋಗಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ರಾಮೋಹಳ್ಳಿ ಅರಣ್ಯಾಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ಸಂತೋಷ್‌ನನ್ನು ಬಂಧಿಸಿದ್ದಾರೆ. ವರದಿಗಳ ಪ್ರಕಾರ ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಬಂಧಿಸಲಾಗಿದೆ. ಸಂತೋಷ್ ಅವರು ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕುರಿತು ವ್ಯಕ್ತಿಯೊಬ್ಬರು ಎಫ್‌ಐಆರ್ ದಾಖಲಿಸಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.