ಕರ್ನಾಟಕ ಮತ್ತೆ ಬಿಜೆಪಿ ಪಾಲು!?
– ಬಿಜೆಪಿಗೆ 20ಕ್ಕೂ ಹೆಚ್ಚು ಸ್ಥಾನ: ಸಮೀಕ್ಷೆ
– ನರೇಂದ್ರ ಮೋದಿ ಮತ್ತೊಮ್ಮೆ ದೇಶದಲ್ಲಿ ಕಿಂಗ್
– ಕಾಂಗ್ರೆಸ್ ಗಳಿಕೆ ಕಳೆದ ಸಲಕ್ಕಿಂತ ಏರಿಕೆ, ಆದರೆ ಗರಿಷ್ಠ 8 ಸ್ಥಾನ
NAMMUR EXPRESS NEWS
ಭಾರತ ಪ್ರಜಾಪ್ರಭುತ್ವದ ದೇಗುಲ, ಭಾರತವೇ ಈ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಪ್ರಧಾನಿ ಮೋದಿ ನೇತೃತ್ವದಲ್ಲಿ ಭರ್ಜರಿ ಹ್ಯಾಟ್ರಿಕ್ ಬಾರಿಸಿ, ಕೇಂದ್ರದ ಅಧಿಕಾರ ಹಿಡಿಯೋದಕ್ಕೆ ಎನ್ಡಿಎ ಒಕ್ಕೂಟ ಸಜ್ಜಾಗಿದೆ. ಈ ಬಾರಿ ಕನಿಷ್ಠ 400 ಸ್ಥಾನ ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡಿತ್ತು. ಆದ್ರೆ ಎಲ್ಲಾ ಸಮೀಕ್ಷೆಗಳು 350-380 ಸ್ಥಾನ ಗೆಲ್ಲಲಿವೆ ಎಂದು ಹೇಳಿವೆ. ಕರ್ನಾಟಕದಲ್ಲಿ ಕಳೆದ ಅವಧಿಗಿಂತ ಕಡಿಮೆ ಸ್ಥಾನ ಬಿಜೆಪಿ ಗೆಲ್ಲಲಿದೆ. ಆದರೆ ಈ ಬಾರಿ ಬಿಜೆಪಿ ಕರ್ನಾಟಕದಲ್ಲಿ ಗೆಲ್ಲಲ್ಲಿರುವ ಸ್ಥಾನಗಳು ಎಷ್ಟು? ಎನ್ನುವುದಾದ್ರೆ 20-23 ಎಂದು ಸಮೀಕ್ಷೆಗಳು ಹೇಳಿವೆ. ಜೆಡಿಎಸ್ ಕೂಡ ಮೂರು ಸ್ಥಾನ ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ.
2024ರ ಲೋಕಸಭೆ ಚುನಾವಣೆ ಏಪ್ರಿಲ್ 19 ರಿಂದ ಜೂನ್ 1 ರವರೆಗೆ ನಡೆಯಿತು. ಹೀಗೆ ಒಟ್ಟು 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತಗಳಲ್ಲಿ ಮತದಾನ ನಡೆಸಲಾಗಿತ್ತು. ಇಂದು ಅಂತಿಮ ಹಂತದ ಮತದಾನ ಮುಕ್ತಾಯವಾಗಿದ್ದು, ಚುನಾವಣೋತ್ತರ ಫಲಿತಾಂಶ ಹೊರಬಿದ್ದಿದೆ. ಈ ಪೈಕಿ ‘ನ್ಯೂಸ್18 ಪೋಲ್ ಹಬ್’ ಎಕ್ಸಿಟ್ ಪೋಲ್ ಪ್ರಕಾರ ಬಿಜೆಪಿಗೆ ಪ್ರಚಂಡ ಗೆಲುವು ಪಕ್ಕಾ ಆಗಿದೆ. ಅದರಲ್ಲೂ ಕರ್ನಾಟಕದಲ್ಲಿ ಬಿಜೆಪಿ 20ಕ್ಕೂ ಹೆಚ್ಚು ಸ್ಥಾನಗಳನ್ನ ಗೆದ್ದು ಬೀಗಲಿದೆ ಎಂದಿದೆ ‘ನ್ಯೂಸ್18 ಪೋಲ್ ಹಬ್’ ಎಕ್ಸಿಟ್ ಪೋಲ್ ಫಲಿತಾಂಶ.
ಬಿಜೆಪಿ ಹೈಕಮಾಂಡ್ ಮತ್ತು ಬಿ.ವೈ. ವಿಜಯೇಂದ್ರ ಅವರ ತಂತ್ರಗಾರಿಕೆ ಈಗ ಫಲ ನೀಡಿ ಬಿಜೆಪಿ ಪಕ್ಷದ ಪ್ರಚಂಡ ಗೆಲುವು ಪಕ್ಕಾ ಆಗಿದೆ. ಕರ್ನಾಟಕದಲ್ಲಿ ಬಿಜೆಪಿ & ಜೆಡಿಎಸ್ 23 ರಿಂದ 26 ಸ್ಥಾನ ಗೆಲ್ಲಬಹುದು ಎನ್ನಲಾಗಿದ್ದು, ಅದೇ ರೀತಿ ಕಾಂಗ್ರೆಸ್ ಕರ್ನಾಟಕದಲ್ಲಿ 3 ರಿಂದ 7 ಸ್ಥಾನ ಗೆಲ್ಲಬಹುದು ಎನ್ನುತ್ತಿದೆ ‘ನ್ಯೂಸ್18 ಪೋಲ್ ಹಬ್’ ಸಮೀಕ್ಷೆ.
ಕಾಂಗ್ರೆಸ್ ಗಳಿಕೆ ಕಳೆದ ಸಲಕ್ಕಿಂತ ಏರಿಕೆ, ಆದರೆ ಗರಿಷ್ಠ 8 ಸ್ಥಾನ
ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಕರ್ನಾಟಕದಲ್ಲಿ ಬಿಜೆಪಿ ಜೆಡಿಎಸ್ ಪಕ್ಷಗಳ ಎನ್ಡಿಎ ಮೈತ್ರಿಕೂಟ ಭರ್ಜರಿ ಜಯ ಸಾಧಿಸಲಿದೆ ಎಂದು ಹೇಳಿವೆ. ರಾಜ್ಯದ ಆಡಳಿತಾರೂಡ ಕಾಂಗ್ರೆಸ್ ಭಾರಿ ಹಿನ್ನಡೆ ಕಾಣಲಿದೆ, ಆದರೆ ಕಳೆದ ಚುನಾವಣೆಗಿಂತ ಕಾಂಗ್ರೆಸ್ ಪಕ್ಷದ ಗಳಿಕೆ ಹೆಚ್ಚಲಿದೆ ಎಂದು ಅಭಿಪ್ರಾಯ ಪಟ್ಟಿವೆ. ರಾಜ್ಯದ ಒಟ್ಟು 28 ಕ್ಷೇತ್ರಗಳಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ 23-26 ಸ್ಥಾನ ಬರಲಿದೆ. ಕಾಂಗ್ರೆಸ್ ಕೇವಲ 3-7 ಸ್ಥಾನಗಳಲ್ಲಿ ಕಾಂಗ್ರೆಸ್ ತನ್ನ ಗೆಲುವು ದಾಖಲಿಸಬಹುದು ಎಂದು ಹೇಳಿದೆ. ರಿಪಬ್ಲಿಕ್ ಟಿವಿ ಸಮೀಕ್ಷೆ ಪ್ರಕಾರ ಬಿಜೆಪಿ ಜೆಡಿಎಸ್ 22, ಕಾಂಗ್ರೆಸ್ ಆರು ಸ್ಥಾನ ಗೆಲ್ಲಲಿವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25, ಜೆಡಿಎಸ್ 1, ಕಾಂಗ್ರೆಸ್ ಒಂದು ಹಾಗೂ ಪಕ್ಷೇತರರು ಒಂದು ಸ್ಥಾನದಲ್ಲಿ ಗೆದ್ದಿದ್ದರು.
ಕಳೆದ ಸಲಕಿಂತಲೂ ಈ ಸಲ ಹೆಚ್ಚು ಸ್ಥಾನ :
ಎಲ್ಲಾ ಏಳು ಹಂತಗಳ ಸುದೀರ್ಘ ಲೋಕಸಭಾ ಚುನಾವಣೆ ಶನಿವಾರ ಮುಗಿದಿದೆ. ಇದರ ಬೆನ್ನಲ್ಲೇ ಸತತ ಮೂರನೇ ಬಾರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಹಾಗೂ ಎನ್ಡಿಎ ಕೂಟಗಳು ಗೆಲುವು ಕಾಣಲಿವೆ. ಈ ಮೂಲಕ ಕೇಂದ್ರದಲ್ಲಿ ಹ್ಯಾಟ್ರಿಕ್ ಅವದಿಗೆ ಎನ್.ಡಿ.ಎ ಸರ್ಕಾರ ಪ್ರತಿಷ್ಠಾಪಿತವಾಗಲಿದೆ ಎಂದು ಬಹುತೇಕ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಈ ಸಮೀಕ್ಷೆಗಳು ನಿಜವಾಗುತ್ತವೆಯೇ ಎಂಬುದು ಜೂ.4 ರ ಮತ ಎಣಿಕೆಯಲ್ಲಿ ಸ್ಪಷ್ಟವಾಗಲಿದೆ. ಕರ್ನಾಟಕ ಉತ್ತರ ಪ್ರದೇಶ, ಬಿಹಾರ, ಗುಜರಾತ್, ಮಧ್ಯ ಪ್ರದೇಶ, ಹಿಮಾಚಲ ಪ್ರದೇಶ, ರಾಜಸ್ಥಾನದಂತ ತನ್ನ ಸಾಂಪ್ರದಾಯಿಕ ರಾಜ್ಯಗಳಲ್ಲಿ ಬಿಜೆಪಿ ಬಹುತೇಕ ಎಲ್ಲಾ ಸೀಟುಗಳಲ್ಲಿ ಕಳೆದ ಸಲದಂತೆ ಜಯಿಸಲಿದೆ. ಇದಕ್ಕೆ ಹೆಚ್ಚುವರಿಯಾಗಿ ಪ. ಬಂಗಾಳ, ಒಡಿಶಾ, ಆಂಧ್ರಪ್ರದೇಶದಂತ ತನಗೆ ಅಷ್ಟಾಗಿ ನೆಲೆ ಇಲ್ಲದ ರಾಜ್ಯಗಳಲ್ಲೂ ಬಿಜೆಪಿ ಸ್ವಂತ ಬಲದಿಂದ ಹಾಗೂ ಟಿಡಿಪಿಯಂತ ಮಿತ್ರರ ಬಲದಿಂದ ಉತ್ತಮ ಸ್ಥಾನ ಸಂಪಾದಿಸಲಿದೆ.