ಸಿಎಂ, ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಇ -ಮೇಲ್
– ಅರ್ನಾ ಅಶ್ವಿನ್ ಶೇಖರ್ ಎಂಬ ಇಮೇಲ್ ಐಡಿಯಿಂದ ಬೆದರಿಕೆ
– ಹುಸಿ ಬಾಂಬ್ ಕರೆ ಬಂದ ಹಿನ್ನೆಲೆಯಲ್ಲಿ ಕೇಸ್ ದಾಖಲು.!
NAMMUR EXPRESS NEWS
ಬೆಂಗಳೂರು : ಸಿಎಂ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಾಂಬ್ ಬೆದರಿಕೆ ಇ -ಮೇಲ್ ಬಂದಿದ್ದು, ಕೇಸ್ ದಾಖಲಾಗಿದೆ. ನಿಮ್ಮ ಮನೆಗೆ ಆರ್ ಡಿ ಎಕ್ಸ್ ಬಾಂಬ್ ಇಟ್ಟಿದ್ದೇವೆ, ಅದು ಸ್ಪೋಟಗೊಳ್ಳುತ್ತದೆ ಎಂದು ಇ-ಮೇಲ್ ಕಳುಹಿಸಲಾಗಿದೆ. ಅರ್ನಾ ಅಶ್ವಿನ್ ಶೇಖರ್ ಎಂಬ ಇಮೇಲ್ ಐಡಿಯಿಂದ ಬೆದರಿಕೆ ಬಂದಿದೆ. ನಂತರ ಪೊಲೀಸರು ನಿವಾಸಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.
ಹುಸಿ ಬಾಂಬ್ ಕರೆ ಬಂದ ಹಿನ್ನೆಲೆ ಅಶ್ವತ್ ನಾರಾಯಣ ಸ್ವಾಮಿ ಎಂಬುವವರು ನೀಡಿದ ದೂರಿನ ಮೇರೆಗೆ ಹಲಸೂರು ಗೇಟ್ ಠಾಣೆಯಲ್ಲಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.







