ದೀಪಾವಳಿಗೆ ಬಸ್ ದುಬಾರಿ: ಈಗ್ಲೇ ಬುಕ್ ಮಾಡ್ಕೊಳ್ಳಿ..!
– ದುಬಾರಿ ದರ: ಕಡಿವಾಣ ಹಾಕಲು ಮುಂದಾದ ಸರ್ಕಾರ
– ಭಾರೀ ಟ್ರಾಫಿಕ್ ಸಾಧ್ಯತೆ: ಈಗಲೇ ಪ್ಲಾನ್ ಮಾಡಿಕೊಳ್ಳಿ..!
NAMMUR EXPRESS NEWS
ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ತಿಂಗಳಾಂತ್ಯ ಹಾಗೂ ನವೆಂಬರ್ ಮೊದಲ ವಾರದಲ್ಲಿ ಸಾಲು ಸಾಲು ರಜೆಗಳಿದ್ದು, ಖಾಸಗಿ ಬಸ್ ಮಾಲೀಕರಿಗೆ ಹಬ್ಬವೋ ಹಬ್ಬ. ಯಾಕಂದ್ರೆ ಸಾಲು ಸಾಲು ರಜೆ ಇರುವುರಿಂದ ಟಿಕೆಟ್ ದರ ಹೆಚ್ಚಳದ ಚಿಂತನೆ ನಡೆಸಿದ್ದಾರೆ, ಇದೀಗ ಇದಕ್ಕೆ ರಾಜ್ಯ ಸಾರಿಗೆ ಇಲಾಖೆ ಕಡಿವಾಣ ಹಾಕಲು ಮುಂದಾಗಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ ಆನ್ ಲೈನ್ ಮೂಲಕ ಟಿಕೆಟ್ ದರವನ್ನು ಹೆಚ್ಚಿಸಿದ್ರೆ ಕಠಿಣ ಕ್ರಮಕೈಗೊಳ್ಳುವುದಾಗಿ ಖಾಸ್ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದೆ.
ಅಲ್ಲದೇ ಸಾರ್ವಜನಿಕ ಸೇವಾ ವಾಹನಗಳಲ್ಲಿ ಸ್ಪೋಟಕ ಸಾಮಗ್ರಿಗಳ ಸಾಗಾಣಿಕೆಗೆ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿರುವ ಸಾರಿಗೆ ಇಲಾಖೆ, ಖಾಸಗಿ ಬಸ್ ಗಳು ಹೆಚ್ಚಿನ ಟಿಕೆಟ್ ದರ ಸಂಗ್ರಹಿಸಿದ್ರೆ ಸಾರ್ವಜನಿಕರು ದೂರು ನೀಡುವಂತೆ ಮನವಿ ಮಾಡಿದೆ. ನಿಯಂತ್ರಣ ಕೊಠಡಿ ಸಂಖ್ಯೆ-9449863429,9449863426 ಕರೆ ಮಾಡಿ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ರಾಜ್ಯ ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲೂ ಮಾಮೂಲಿಗಿಂತ ಮೂರು ಪಟ್ಟು ಹೆಚ್ಚಿನ ಪ್ರಯಾಣ ದರ ವಸೂಲಿಗೆ ಮುಂದಾಗಿವೆ.
ದೀಪಾವಳಿ ಭಾರೀ ಟ್ರಾಫಿಕ್ ಜಾಮ್ ಸಾಧ್ಯತೆ
ದೀಪಾವಳಿ ಹಬ್ಬ ವಾರದ ಅಂತ್ಯದಲ್ಲಿ ಬಂದಿರುವುದರಿಂದ ಬೆಂಗಳೂರು ಸೇರಿ ಬಹುತೇಕ ಕಡೆಗಳಿಂದ ತಮ್ಮ ಊರುಗಳಿಗೆ ಜನ ಹೋಗುವುದರಿಂದ ಭಾರೀ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ. ಬಸ್ ಅಥವಾ ರೈಲು ಟಿಕೆಟ್ ಈಗಲೇ ಬುಕ್ ಮಾಡಿ ದೃಡೀಕರಣ ಮಾಡಿಕೊಳ್ಳಿ.