ಅನರ್ಹ ಬಿ.ಪಿ.ಎಲ್ ಕಾರ್ಡ್ ರದ್ದು!
– ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ವಿತರಣೆ
– ಶೇ.80 ಬಿಪಿಎಲ್ ಕಾರ್ಡ್ ಕಡಿತ ಮಾಡಲು ಸಿಎಂ ಸೂಚನೆ
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡುದಾರರ ಸಂಖ್ಯೆ ಮಿತಿ ಮೀರಿದೆ. ಅನರ್ಹರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿ ಅರ್ಹರಿಗೆ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ ಈ ಸೂಚನೆ ನೀಡಿ, ರಾಜ್ಯದಲ್ಲಿ ಶೇ. 80ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ.
ಜನರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ…!
ಜನರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ, ಅವರ ದೂರುಗಳನ್ನು ಆಲಿಸಿ, ಅಗತ್ಯ ಪರಿಹಾರ ಒದಗಿಸಬೇಕು. ರಾಜ್ಯದಲ್ಲಿ ಈ ಬಾರಿ ಬರ ನಿರ್ವಹಣೆಯನ್ನು ಉತ್ತಮವಾಗಿ ಮಾಡಿದ್ದೇವೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಮೊದಲೇ ಗುರುತಿಸಿ. ಪರ್ಯಾಯ ವ್ಯವಸ್ಥೆ ಮಾಡಿದ ಕಾರಣ ಎಲ್ಲೂ ಹೆಚ್ಚು ತೊಂದರೆಯಾಗಿಲ್ಲ. ಪ್ರತಿಯೊಂದು ಗ್ರಾಂ ಪಂಚಾಯತ್ನಲ್ಲಿ ಟಾಸ್ಕ್ ಪೋಸ್ಟ್ ರಚನೆ ಮಾಡಿ ಕಂದಾಯ ಇಲಾಖೆ, ಪಂಚಾಯತ್, ಪೋಲಿಸ್, ಅಗ್ನಿಶಾಮಕ, ಆರೋಗ್ಯ ಸೇರಿದಂತೆ ತಾಲೂಕು ಒಬ್ಬರಂತೆ ನೋಡಲ್ ಅಧಿಕಾರಿ ನೇಮಕಕ್ಕೆ ಸೂಚನೆ ನೀಡಲಾಗಿದೆ. ಎಲ್ಲಾ ಕಡೆ ಅಣಕುಪ್ರದರ್ಶನ ಮಾಡಲಾಗುತ್ತಿದೆ. ಬೆಳೆ ಹಾನಿ, ಮನೆ ಹಾನಿ ಎಸ್ಡಿಆರ್ಎಫ್ ಪ್ರಕಾರ ನೀಡಲು, ಜಿಲ್ಲಾಡಳಿತ ಮುಂಜಾಗರೂಕತೆ ವಹಿಸಲು ಸೂಚನೆ ನೀಡಲಾಗಿದೆ ಎಂದರು.