ಫೈನಾನ್ಸ್ ಕಂಪನಿಗಳ ವಿರುದ್ಧ ಸಿಎಂ ಫುಲ್ ಗರಂ!
– ಸಾಲಗಾರರಿಗೆ ಮೇಲಿಂದ ಮೇಲೆ ಸಾಲ?
– ಸಭೆಯಲ್ಲಿ ಆರ್ ಬಿ ಐ ಅಧಿಕಾರಿಗಳಿಗೆ ಪ್ರಶ್ನಿಸಿದ ಸಿಎಂ!
– ಜನರ ರಕ್ಷಣೆಗೆ ಕಠಿಣ ಕ್ರಮ ಕೈಗೊಳ್ಳುತ್ತೇನೆ!- ಮುಖ್ಯಮಂತ್ರಿಯಿಂದ ಕಠಿಣ ಎಚ್ಚರಿಕೆ
NAMMUR EXPRESS NEWS
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಯುತ್ತಿದೆ.
ಈ ಸಭೆಯಲ್ಲಿ ಫೈನಾನ್ಸ್ ಕಂಪನಿಗಳ ಮೇಲೆ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ. ವ್ಯವಹಾರವನ್ನು ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದಾರೆ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗಿದೆ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಸಭೆಯಲ್ಲಿ ಸಿದ್ದರಾಮಯ್ಯ ವ್ಯಕ್ತಪಡಿಸಿ ಗರಂ ಆಗಿದ್ದಾರೆ. ಆರ್ ಬಿ ಮೈಕ್ರೋ ಐ ನಿಯಮಗಳ ಉಲ್ಲಂಘನೆ ಸಾಲ ನೀಡಿದ ಫೈನಾನ್ಸ್ ಕಂಪನಿಗಳ ಪರವಾನಿಗೆಯನ್ನು ರದ್ದುಗೊಳಿಸಲು ಏನು ಕ್ರಮ ಕೈಗೊಳ್ಳಲಾಗಿದೆ? ಎಂದು ಗಂಭೀರವಾಗಿ ಆರ್ ಬಿ ಐ ಅಧಿಕಾರಿಗಳಿಗೆ ಸಿಎಂ ಪ್ರಶ್ನಿಸಿದ್ದಾರೆ. ಒಬ್ಬರೇ ಸಾಲಗಾರರು ಬೇರೆ ಬೇರೆ ಗುರಿಯ ಚೀಟಿ ( ಐ ಡಿ ಕಾರ್ಡ್ ಗಳು) ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸುವುದನ್ನು ಯಾವ ಪದ್ಧತಿ ಪಾಲಿಸುತ್ತಿದ್ದೀರಿ ಎಂದು ಕಂಪನಿಗಳಿಗೆ ಸಿಎಂ ಪ್ರಶ್ನಿಸಿದ್ದಾರೆ. ಆರ್ ಬಿ ಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ, ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳ ಉತ್ತರ ಮೈಕ್ರೋ ಕಂಪನಿಯವರಿಂದ ಬಂದಿದ್ದು, ಇದಕ್ಕೆ ಸಚಿವ ಕೃಷ್ಣಬೈರೇಗೌಡರು, ಎಚ್.ಕೆ.ಪಾಟೀಲ್, ಡಿಸಿಎಂ ಡಿ.ಕೆ.ಶಿವಕುಮಾರ್ ತಕರಾರು ವ್ಯಕ್ತಪಡಿಸಿ, ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎಂದು ನಮಗೆ ಗ್ರೌಂಡ್ ರಿಪೋರ್ಟ್ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಾವು ನಿಯಮ ಉಲ್ಲಂಘಿಸುವ ಕಂಪನಿ ಎಂ.ಡಿ.ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಲ್ಲ ಎಂದು ಸಚಿವರು ಸಭೆಯಲ್ಲಿ ಗುಡುಗಿದರು. ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲೇ ಕಠಿಣ ಎಚ್ಚರಿಕೆ ನೀಡಿದ್ದಾರೆ.