- ಆಂಧ್ರ ಪ್ರದೇಶದಲ್ಲಿ ಒಂದು ವಿಚಿತ್ರ ದೂರು ದಾಖಲು
ಮುಖ್ಯಮಂತ್ರಿಗಳ ಪೋಸ್ಟರ್ ಅನ್ನು ಹರಿದಿದ್ದಕ್ಕಾಗಿ ನಾಯಿಯೊಂದರ ವಿರುದ್ಧ ಪೊಲೀಸ್ ಠಾಣೆಗೆ ದೂರು ದಾಖಲಾದ ವಿಚಿತ್ರ ಘಟನೆ ನಡೆದಿದೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಪೋಸ್ಟರ್ ಅನ್ನು ನಾಯಿ ಹರಿದ ಕಾರಣ ದೂರು ದಾಖಲಾಗಿದೆ. ಇನ್ನೂ ವಿಜಯವಾಡದಲ್ಲಿ ಈ ಘಟನೆ ನಡೆದಿದೆ. ಘಟನೆಯ ಬಗ್ಗೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆ ಬಳಿಕ ಮಹಿಳೆಯರ ಗುಂಪು ಪೊಲೀಸರಿಗೆ ದೂರು ನೀಡಿದೆ.
ಪ್ರತಿಪಕ್ಷ ತೆಲುಗು ದೇಶಂ ಪಕ್ಷದ (ಟಿಡಿಪಿ) ಕಾರ್ಯಕರ್ತೆ ಎನ್ನಲಾದ ದಾಸರಿ ಉದಯಶ್ರೀ ಎಂಬುವವರು ವ್ಯಂಗ್ಯವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಮುಖ್ಯಮಂತ್ರಿಗೆ ಅವಮಾನ ಮಾಡಿದ ನಾಯಿ ಹಾಗೂ ಅದರ ಹಿಂದಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹಿಳೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.
151 ವಿಧಾನಸಭಾ ಸ್ಥಾನಗಳನ್ನು ಗೆದ್ದಿರುವ ಜಗನ್ ಮೋಹನ್ ರೆಡ್ಡಿ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಅಂತಹ ನಾಯಕನನ್ನು ನಾಯಿಯೊಂದು ಅವಮಾನಿಸಿದ್ದು, ರಾಜ್ಯದ ಆರು ಕೋಟಿ ಜನರಿಗೆ ನೋವುಂಟು ಮಾಡಿದೆ ಎಂದು ಮಹಿಳೆ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.
ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ (ವೈಎಸ್ಆರ್ಸಿಪಿ) ರಾಜ್ಯದಾದ್ಯಂತ ನಡೆಯುತ್ತಿರುವ ಸಮೀಕ್ಷೆಯ ಭಾಗವಾಗಿ ಜಗನಣ್ಣ ಭವಿಷ್ಯತು (ಜಗನ್ ಅಣ್ಣ ನಮ್ಮ ಭವಿಷ್ಯ ಎಂಬ ಸ್ಟಿಕರ್ ಅನ್ನು ಮನೆಯೊಂದರ ಮೇಲೆ ಅಂಟಿಸಲಾಗಿದೆ.