ಬೆಳಗಾವಿಯಲ್ಲಿ ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ಸಜ್ಜು!
– ಡಿ.27ರಂದು ಬೆಳಗಾವಿಯಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ
– ರಾಜ್ಯದ ಮೂಲೆ ಮೂಲೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಜರ್
NAMMUR EXPRESS NEWS
ಬೆಳಗಾವಿ: ಬೆಳಗಾವಿ ಅಧಿವೇಶನ ಶತಮಾನೋತ್ಸವದ ಅಂಗವಾಗಿ ದಿನಾಂಕ 27-12-24 ರಂದು ಬೆಳಗಾವಿಯಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಸಿದ್ಧತೆ ನಡೆಯುತ್ತಿದೆ.
ಎಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲು ಮನವಿ ಮಾಡಿಕೊಂಡಿದ್ದಾರೆ. ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ದಿನಾಂಕ 26-12-1924 ರಂದು ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಎಐಸಿಸಿ ಅಧಿವೇಶನಕ್ಕೆ ಕರ್ನಾಟಕದ ಇತಿಹಾಸದಲ್ಲಿ ಒಂದು ವಿಶೇಷ ಸ್ಥಾನವಿದೆ. ಈ ಅಧಿವೇಶನದ ಶತಮಾನೋತ್ಸವದ ಆಂಗವಾಗಿ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಭ್ರಮಾಚರಣೆಯ ಸವಿನೆನಪಿಗಾಗಿ ದಿನಾಂಕ 27-12-2024ರ ಶುಕ್ರವಾರದಂದು ಬೆಳಗಾವಿಯ ಕ್ಲಬ್ ರಸ್ತೆಯ ಸಿ.ಪಿ.ಎಡ್. ಮೈದಾನದಲ್ಲಿ “ಬೃಹತ್ ಕಾಂಗ್ರೆಸ್ ಸಮಾವೇಶ”ವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶವನ್ನು ಅರ್ಥಪೂರ್ಣಗೊಳಿಸಲು ರಾಜ್ಯದಾದ್ಯಂತ ಎಲ್ಲಾ ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕೆಪಿಸಿಸಿ ಕೋರಿದೆ.