ಕರೋನಾ ಆಯ್ತು, ಈಗ ಮಂಕಿ ಪಾಕ್ಸ್!
– ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ ವ್ಯಕ್ತಿಗೆ ಮಂಕಿಪಾಕ್ಸ್!
– ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಮೊದಲ ಪ್ರಕರಣ
– ವ್ಯಕ್ತಿಯಲ್ಲಿ ಜ್ವರ, ಗುಳ್ಳೆ ಲಕ್ಷಣ: ಮಂಕಿಪಾಕ್ಸ್ ಲಕ್ಷಣಗಳು ಹೇಗಿರುತ್ತದೆ?
NAMMUR EXPRESS NEWS
ಬೆಂಗಳೂರು : ರಾಜ್ಯದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ವರದಿ ಆಗಿದೆ., 40 ವರ್ಷದ ವ್ಯಕ್ತಿಯಲ್ಲಿ ಈ ಒಂದು ಮಂಕಿಪಾಕ್ಸ್ ದೃಢಪಟ್ಟಿದೆ. ಆದರೆ ವೈದ್ಯರು, ವ್ಯಕ್ತಿಯ ಆರೋಗ್ಯವು ಶೀಘ್ರವಾಗಿ ಅವರನ್ನು ಆಸ್ಪತ್ರೆಯಿಂದ ಡಿಸ್ಚರ್ಜ್ ಮಾಡಲಾಗುವುದು. ಸೋಂಕಿತನ ಆರೋಗ್ಯ ಸ್ಥಿರವಾಗಿದ್ದು, ಸದ್ಯದಲ್ಲೇ ಆಸ್ಪತ್ರೆಯಿಂದ ಡಿಸ್ಚರ್ಜ್ ಆಗಲಿದ್ದಾರೆ.
ಇನ್ನು ಏರ್ಪೋರ್ಟ್ನಲ್ಲಿ ಸೋಂಕಿತ ಪತಿಯನ್ನು ನೋಡಲು ಬಂದಿದ್ದ ಪತ್ನಿಯನ್ನು ಐಸೋಲೇಷನ್ನಲ್ಲಿರಲು ಸೂಚನೆ ನೀಡಲಾಗಿದೆ. ಯಾವುದೇ ಗುಣಲಕ್ಷಣಗಳು ಕಂಡರೆ ತಕ್ಷಣ ತಿಳಿಸಲು ಸೂಚಿಸಿದ್ದು, ಸಾರ್ವಜನಿಕರು ಮಂಕಿಪಾಕ್ಸ್ ಬಗ್ಗೆ ಭಯಪಡುವ ಅವಶ್ಯಕತೆಯಿಲ್ಲ ಎಂದು ಸೂಚಿಸಲಾಗಿದೆ. ಪುಣೆಯ ಎನ್ಐವಿ ಲ್ಯಾಬ್ನಲ್ಲಿ ಸೋಂಕು ದೃಢಪಟ್ಟಿದ್ದು, ಕಳೆದ 14 ವರ್ಷಗಳಿಂದ ದುಬೈನಲ್ಲಿ ವಾಸವಿದ್ದ ಸೋಂಕಿತ, ಇತ್ತೀಚೆಗೆ ಅಂದರೆ ಜನವರಿ 17ರಂದು ಮಂಗಳೂರಿಗೆ ಭೇಟಿ ನೀಡಿದ್ದರು. ವ್ಯಕ್ತಿಯಲ್ಲಿ ಜ್ವರ, ಗುಳ್ಳೆ ಕಾಣಿಸಿಕೊಂಡಿತ್ತು. ತಕ್ಷಣ ಐಸೋಲೆಟ್ ಮಾಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ವ್ಯಕ್ತಿಯ ಸ್ಯಾಂಪಲ್ ಅನ್ನು ಬೆಂಗಳೂರು ಮೆಡಿಕಲ್ ಕಾಲೇಜು ಹಾಗೂ ಪುಣೆಯ ಐವಿ ಲ್ಯಾಬ್ಗೆ ರವಾನಿಸಲಾಗಿದೆ. ಇದೀಗ ಎನ್ಐವಿ ಲ್ಯಾಬ್ ರಿಪೋರ್ಟ್ನಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ. ದುಬೈಗೆ ಪ್ರಯಾಣಿಸಿದ ಹಿನ್ನೆಲೆಯುಳ್ಳ 40 ವರ್ಷದ ವ್ಯಕ್ತಿ ಸೋಂಕಿತರಾಗಿದ್ದು, ಸದ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಂಕಿತ ಪ್ರಕರಣದ ಬಗ್ಗೆ ದೃಢೀಕರಿಸಿಕೊಳ್ಳಲು ಹೆಚ್ಚಿನ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಕಳೆದ ವರ್ಷ ಕೆಲವು ಆಫ್ರಿಕನ್ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚಾಗಿದ್ದವು. ನಂತರ ಪಾಕಿಸ್ತಾನ ಮತ್ತು ಥಾಯ್ಲೆಂಡ್ ಸೇರಿದಂತೆ ಇತರ ದೇಶಗಳಲ್ಲಿ ಪ್ರಕರಣಗಳು ವರದಿಯಾಗಲು ಪ್ರಾರಂಭಿಸಿದಾಗ ಮಂಕಿಪಾಕ್ಸ್ ಬಗ್ಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಆತಂಕ ಸೃಷ್ಟಿಯಾಗಿತ್ತು. ವಿಶ್ವ ಆರೋಗ್ಯ ಸಂಸ್ಥೆಯು ಮಂಕಿಪಾಕ್ಸ್ ಅನ್ನು 2024 ರ ಆಗಸ್ಟ್ನಲ್ಲಿ ‘ಅಂತರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ’ ಎಂದು ಘೋಷಿಸಿತ್ತು. ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣವು 2024 ರ ಸೆಪ್ಟೆಂಬರ್ನಲ್ಲಿ ವರದಿಯಾಗಿದೆ. ಕಳೆದ ತಿಂಗಳು, ಕೇರಳದಲ್ಲಿ ಎರಡು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದವು.
ಮಂಕಿಪಾಕ್ಸ್ ಎಂದರೇನು?
ಆರ್ಥೋಪಾಕ್ಸ್ ವೈರಸ್ ಕುಲದ ಮಂಕಿಪಾಕ್ಸ್ ವೈರಸ್ನಿಂದ ಉಂಟಾಗುವ ವೈರಲ್ ಸೋಂಕೇ ಮಂಕಿಪಾಕ್ಸ್. ಇದನ್ನು ಈಗ ಎಂಪಾಕ್ಸ್ ಎಂದು ಕರೆಯಲಾಗುತ್ತದೆ. ಸೋಂಕಿತ ರೋಗಿಯ ಲಾಲಾರಸ, ಬೆವರು ಮತ್ತು ಸೋಂಕಿತ ವಸ್ತುಗಳ ಮೂಲಕ ವೈರಸ್ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ. ಇಲ್ಲಿಯವರೆಗೆ ಈ ರೋಗಕ್ಕೆ ಯಾವುದೇ ಲಸಿಕೆ ಅಥವಾ ಶಿಫಾರಸು ಮಾಡಿದ ಔಷಧಿ ಇಲ್ಲ. ಊದಿಕೊಂಡ ದುಗ್ಧರಸ ಗ್ರಂಥಿಗಳು, ಜ್ವರ, ಚಳಿಯ ಅನುಭವ, ಸ್ನಾಯು ನೋವು, ತಲೆನೋವು, ಸುಸ್ತು ಸೋಂಕಿನ ಪ್ರಮುಖ ಲಕ್ಷಣಗಳಾಗಿವೆ. ರೋಗಲಕ್ಷಣಗಳ ಆಧಾರದ ಮೇಲೆ ರೋಗಿಗೆ ಚಿಕಿತ್ಸೆ ನೀಡಲಾಗುತ್ತದೆ. ಮಂಕಿಪಾಕ್ಸ್ ವೈರಸ್ ರೋಗಿಯ ಚರ್ಮ ಮತ್ತು ಉಸಿರಾಟ ನಾಳದ ಮೇಲೆ ಪರಿಣಾಮ ಬೀರುತ್ತದೆ. ಕೆಲವು ರೋಗಿಗಳಲ್ಲಿ ಈ ವೈರಸ್ ನರಮಂಡಲದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದು ನರಮಂಡಲ ಮತ್ತು ಮೆದುಳಿನ ಜೀವಕೋಶಗಳಿಗೆ ಹಾನಿಯನ್ನು ಉಂಟು ಮಾಡುತ್ತದೆ ಎಂದು ತಜ್ಞ ವೈದ್ಯರು ಈಗಾಗಲೇ ತಿಳಿಸಿದ್ದಾರೆ.
ಮಂಕಿಪಾಕ್ಸ್ ಲಕ್ಷಣಗಳು ಹೇಗಿರುತ್ತದೆ?
1) ಊದಿಕೊಂಡ ದುಗ್ಧರಸ ಗ್ರಂಥಿಗಳು
2) ಜ್ವರ
3) ಚಳಿಯ ಅನುಭವ
4) ಸ್ನಾಯು ನೋವು
5) ತಲೆನೋವು
6) ಸುಸ್ತು