ಕರೋನಾ ಎಚ್ಚರಿಕೆ: ನೀವೂ ಏನೇನು ಪಾಲಿಸಬೇಕು?
– ಅರೋಗ್ಯ ಇಲಾಖೆಯಿಂದ 6 ಸೂಚನೆ
– ಏನೇನು ನಿಯಮ…ಏನು ಮಾಡಬೇಕು…?
NAMMUR EXPRESS NEWS
ಮತ್ತೆ ಕರೋನಾ ಭೂತ ಬಂದಿದೆ. ಅಲ್ಲಲ್ಲಿ ತನ್ನ ಆಟ ಶುರು ಮಾಡಿದೆ. ಈಗಲೇ ಅದನ್ನು ಹಿಮ್ಮೆಟ್ಟಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರಗಳ ನಿಖರ ಪ್ರಕ್ರಿಯೆ ಅಗತ್ಯ. ಜತೆಗೆ ಜನರು ಕೂಡ ಸಹಕಾರ ನೀಡಬೇಕು. ಹೌದು. ವಿವಿಧ ರಾಜ್ಯಗಳಲ್ಲಿ ಕೋವಿಡ್ ಸಮಸ್ಯೆ ಮತ್ತೆ ಕಾಣಿಸಿಕೊಂಡಿರುವ ಹಿನ್ನೆಲೆ ಆರೋಗ್ಯ ಇಲಾಖೆ ಕೆಲವೊಂದು ಸೂಚನೆಗಳನ್ನು ನೀಡಿದೆ. ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ಆದೇಶ ಮಾಡಲಾಗಿದೆ.
ಜನ ಪಾಲಿಸಬೇಕಾದ ಸೂಚನೆ ಏನೇನು?
1. 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರೂ ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ ತಾಯಂದಿರು ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು.
2. ಅಗತ್ಯ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.
3. ಜ್ವರ, ಕೆಮ್ಮು, ನೆಗಡಿ ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.
4. ಉತ್ತಮ ವೈದ್ಯಕೀಯ ಸ್ವಚ್ಛತೆ ಆಗ್ಗಾಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು ಇತ್ಯಾದಿಗಳ ಪಾಲನೆಗಳು ಅಗತ್ಯವಾಗಿದೆ.
5. ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ. ಹಿರಿಯ ನಾಗರೀಕರು/ದುರ್ಬಲರು/ ಆರೋಗ್ಯ ಸಮಸ್ಯೆಗಳನ್ನು ಹೊಂದಿದವರನ್ನು ಅವಶ್ಯವಿದ್ದರೆ ಮಾತ್ರ ಭೇಟಿ ನೀಡುವುದು. ಜನಸಂದಣಿ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ.
6. ಅಂತರಾಷ್ಟ್ರೀಯ ಪ್ರಯಾಣ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು, ಹೆಚ್ಚಿನ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೇರಿದಂತೆ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿ ಅಥವಾ 24/7 ಉಚಿತ ಸಹಾಯವಾಣಿ 104 ಕ್ಕೆ ಕರೆ ಮಾಡಬಹುದಾಗಿದೆ.
ಮೇಲ್ಕಂಡ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಒಗ್ಗಟ್ಟಿನಿಂದ ನಾವೆಲ್ಲರೂ ಕರ್ನಾಟಕವನ್ನು ಕೋವಿಡ್ ಮುಕ್ತಗೊಳಿಸೋಣ…!
ದಯವಿಟ್ಟು ಎಲ್ಲರಿಗೂ ಶೇರ್ ಮಾಡಿರಿ..!