ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್ ವಿರುದ್ದ ಕ್ರಿಮಿನಲ್ ಕೇಸ್?!
– ಎಸ್ಪಿಗಳಿಗೆ ರಾಜ್ಯ ಸರಕಾರ ಸೂಚನೆ: ಏನಿದು ಆರ್ಡರ್?
– ರಾಜ್ಯದಲ್ಲಿ ಮತ್ತೆ ಮೂವರು ನೇಣಿಗೆ ಶರಣು
NAMMUR EXPRESS NEWS
ಬೆಂಗಳೂರು: ರಾಜ್ಯ ಸರಕಾರ ಮೈಕ್ರೋ ಫೈನಾನ್ಸ್ ಕಿರುಕುಳ ನೀಡುವುದು ಕಂಡು ಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದ ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದೆ.
ಸಿಎಂ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು 59 ಸಾವಿರ ಕೋಟಿ ಸಾಲ ನೀಡಿದೆ. ಇವರು ಆರ್ಬಿಐ ಗೈಡ್ರೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿದ್ದು, ಸಾಲ ಪಡೆದವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಒಬ್ಬ ವ್ಯಕ್ತಿಗೆ ಎರಡು ಲಕ್ಷಕ್ಕಿಂತ ಜಾಸ್ತಿ ಸಾಲ ನೀಡಬಾರದು ಎಂದು ಆರ್ಬಿಐ ಗೈಡ್ಲೈನ್ಸ್. ಆದರೆ ಐದರಿಂದ ಆರು ಲಕ್ಷ ರೂ ಸಾಲ ನೀಡಲಾಗುತ್ತಿದ್ದು, ಯಾರೂ ನಿಯಮ ಪಾಲನೆ ಮಾಡುತ್ತಿಲ್ಲ. ಹೀಗಾಗಿ ಬಡವರನ್ನು ಸಾಲದ ಸುಳಿಗೆ ಸಿಲುಕಿಸುತ್ತಿದೆ. ಸಾಲ ಮರುಪಾವತಿ ಮಾಡದೇ ಹೋದರೆ ಮೈಕ್ರೋಫೈನಾನ್ಸ್ ಕಂಪನಿಗಳ ಅಸ್ತಿತ್ವಕ್ಕೆ ಕೂಡಾ ತೊಂದರೆ ಉಂಟಾಗಲಿದೆ. ಸಾಲ ವಸೂಲಾತಿಗೆ ಕೂಡಾ ಆರ್ಬಿಐ ನಿಗದಿ ಮಾಡಿರುವ ಮಾದರಿ ಕಾರ್ಯಚಾರಣೆ ಪಾಲನೆ ಮಾಡಲು ಸೂಚನೆ ನೀಡಿದರು. ಕೇಂದ್ರ ಸರಕಾರ ಈ ಕುರಿತು ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಅಧಿಕಾರ ನೀಡಿಲ್ಲ. ಆದರೆ ರಾಜ್ಯ ಸರಕಾರ ತನ್ನ ಅಧಿಕಾರದ ಮಿತಿಯಲ್ಲಿ ಬೇರೆ ಬೇರೆ ಕಾನೂನುಗಳ ಮೂಲಕ ಮೈಕ್ರೋ ಫೈನಾನ್ಸ್ಗಳ ಅಕ್ರಮಗಳಿಗೆ ಕಡಿವಾಣ ಹಾಕಲಿದೆ. ಇದನ್ನು ಹೀಗೆ ಬಿಟ್ಟರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಈ ಕಾರಣದಿಂದ ಈ ಘಟನೆಗಳಿಗೆ ರಾಜ್ಯ ಮಧ್ಯ ಪ್ರವೇಶಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಿದರು.
ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಮತ್ತೆ ಮೂವರು ಆತ್ಮಹತ್ಯೆ
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೆ ಮೂವರು ಬಲಿಯಾಗಿದ್ದಾರೆ. ಸಾಲಕ್ಕೆ ಹೆದರಿ ಮೈಸೂ ರು ಜಿಲ್ಲೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಜಯಶೀಲ (53) ಹಾಗೂಮಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ (32) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೇ ವೇಳೆ, ರಾಣೆಬೆನ್ನೂರು ತಾಲೂಕು ತುಮ್ಮಿನಕಟ್ಟೆಯ ಸರ್ಕಾರಿ ಶಾಲಾ ಶಿಕ್ಷಕಿ ಪುಷಲತಾ (46) ಎಂಬುವರು ಹೊನ್ನಾಳಿ ಸಮೀಪ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಯಶೀಲ ಅವರು ಐಐಎಫ್ಎಲ್, ಫೈವ್ ಸ್ಟಾರ್ಮೈಕ್ರೋ ಫೈನಾನ್ಸ್ಗಳಲ್ಲಿ ಮನೆ ಕಟ್ಟಲು, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ 5 ಲಕ್ಷ ರು. ಸಾಲ ಪಡೆದಿದ್ದರು. ಪ್ರತಿ ತಿಂಗಳು 20 ಸಾವಿರಕ್ಕೂ ಹೆಚ್ಚು ಇಎಂಐ ಕಟ್ಟಬೇಕಾಗಿತ್ತು. ಸಾಲ ಮಾಡಿ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು.