ಸಿ.ಟಿ ರವಿ ಪ್ರಕರಣ ಸಿಐಡಿಗೆ ಹಸ್ತಾಂತರ!
* ಪ್ರಕರಣದ ಸತ್ಯಾಸತ್ಯತೆ ತನಿಖೆಗೆ ಈ ನಿರ್ಧಾರ
* ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇವೆ – ಗೃಹ ಸಚಿವ ಪರಮೇಶ್ವರ್
NAMMUR EXPRESS NEWS
ಹುಬ್ಬಳ್ಳಿ: ವಿಧಾನ ಪರಿಷತ್ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅಶ್ಲೀಲ ಪದ ಬಳಕೆ ಆರೋಪಡಿ ಈಗಾಗಲೇ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರ ಮೇಲೆ ಕೇಸ್ ದಾಖಲಾಗಿದ್ದು, ಈಗ ರಾಜ್ಯ ಸರ್ಕಾರ ಈ ಕೇಸ್ನ್ನು ಸಿಐಡಿಗೆ ವಹಿಸಿರುವುದಾಗಿ ಗೃಹಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಗೃಹಸಚಿವರು ಪ್ರಕರಣದ ಬಗ್ಗೆ ಏನಂದ್ರೂ…
ಪ್ರಕರಣ ಸಂಬಂಧ ಈಗಾಗಲೇ ಸಿ.ಟಿ ರವಿಯವರ ಮೇಲೆ ಕೇಸ್ ದಾಖಲಾಗಿದೆ. ಇದೀಗ ರವಿ ಅವರು ನಾನು ಆ ರೀತಿ ಹೇಳಿಲ್ಲ ಎನ್ನುತ್ತಿದ್ದಾರೆ. ಸಚಿವೆ ಹೆಬ್ಬಾಳ್ಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಎಂದು ಹೇಳುತ್ತಾರೆ. ಈ ಎಲ್ಲ ವಿಚಾರಗಳ ಬಗ್ಗೆ ಸೂಕ್ತ ತನಿಖೆಯಾಗಲೆಂದೇ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಸಿ.ಟಿ ರವಿ ಪ್ರಕರಣದ ಬಗ್ಗೆ ಇನ್ನೂ ಹೆಚ್ಚು ಚರ್ಚೆ ಮಾಡಲ್ಲ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ.
ಸಿ.ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಸ್ಪೀಕರ್ ತಮ್ಮ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದರೆ ತನಿಖೆಯನ್ನು ಸರಿಯಾಗಿ ಮಾಡಬೇಕಾಗುತ್ತೆ. ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ. ಸಿ.ಟಿ ರವಿ ಪ್ರಕರಣವನ್ನ ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದರು. ಇನ್ನು ಸಿ.ಟಿ ರವಿಯವರ ಮೇಲೆ ಹಲ್ಲೆ ಮಾಡಿದವರ ಮೇಲೆ ಪ್ರಕರಣ ವಿಳಂಬ ವಿಚಾರವಾಗಿ ಮಾತನಾಡಿದ ಗೃಹಸಚಿವರು, ಕೆಲವೊಂದು ಕಾರಣಕ್ಕೆ ವಿಳಂಬವಾಗಿರಬಹುದು. ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ. ಸಿಎಂ ಅಥವಾ ಗೃಹ ಸಚಿವರ ಆದೇಶವನ್ನು ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ ಮಾಡಿದರೂ ಅದನ್ನು ಪಾಲನೆ ಮಾಡಲ್ಲ. ಅವರಿವರು ಆರೋಪ ಮಾಡುತ್ತಾರೆ ಎಂದು ನಾವು ಇಲಾಖೆ ನಡೆಸಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದಿದ್ದಾರೆ.