- ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಿಷೇಧಕ್ಕೆ ಸೇಡು
- ವ್ಯಕ್ತಿಗಳ ಖಾತೆಗಳಿಗೆ ವಿದೇಶದಿಂದ ಹಣ ಜಮೆ?
NAMMUR EXPRESS NEWS
ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಿಷೇಧಕ್ಕೆ ಸೇಡು ತೀರಿಸಿಕೊಳ್ಳಲು ಮತ್ತಷ್ಟು ಟೀಂಗಳು ತಯಾರಾಗುತ್ತಿರುವ ವಿಚಾರ ರಾಷ್ಟ್ರೀಯ ತನಿಖಾ ದಳದ ತನಿಖೆಯಿಂದ ಬೆಳಕಿಗೆ ಬಂದಿದೆ. ಇತ್ತೀಚಿಗೆ ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ನಡೆದ ದಾಳಿಗಳಲ್ಲಿ ಸಿಕ್ಕಿರುವ ಸಾಕ್ಷ್ಯಗಳು ಇದಕ್ಕೆ ಪುಷ್ಟಿ ನೀಡಿವೆ.
ಸಾಮಾಜಿಕ ಜಾಲತಾಣದಲ್ಲಿ ಬೇರೆ ಬೇರೆ ಗುಂಪುಗಳನ್ನು ತೆರೆದು ಪಿಎಫ್ಐ ಕಾರ್ಯಕರ್ತರು ಸಕ್ರೀಯವಾಗಿರುವ ವಿಚಾರ ಈಗ ಗೊತ್ತಾಗಿದೆ. ಪಿಎಫ್ಐ ನಿಷೇಧಕ್ಕೆ ಪ್ರತೀಕಾರವನ್ನು ತೀರಿಸಿಕೊಳ್ಳಲು ಪ್ಲ್ಯಾನಿಂಗ್ ಮಾಡಲಾಗಿತ್ತು. ಭಾರತದ ಹಲವು ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ತಯಾರಿ ನಡೆಸುತ್ತಿದ್ದ ವಿಚಾರ ತನಿಖೆಯ ವೇಳೆ ಪತ್ತೆಯಾಗಿದೆ.
ವಿಧ್ವಂಸಕ ಕೃತ್ಯಕ್ಕೆ ಶಿವಮೊಗ್ಗ ಮತ್ತು ದಕ್ಷಿಣ ಕನ್ನಡದಲ್ಲೇ ಪ್ರಮುಖವಾಗಿ ತಯಾರಿ ನಡೆದಿತ್ತು. ಎನ್ಐಎ ದಾಳಿ ವೇಳೆ ವ್ಯಕ್ತಿಗಳ ಖಾತೆಗಳಿಗೆ ವಿದೇಶದಿಂದ ಹಣ ಜಮೆ ಆಗಿದ್ದಕ್ಕೆ ಮಹತ್ವದ ಸಾಕ್ಷ್ಯಗಳು ಲಭ್ಯವಾಗಿದೆ.
ಡಿಕೆಶಿಗೆ ಮತ್ತೆ ರಿಲೀಫ್
ಬೆಂಗಳೂರು: ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ಗೆ ಮತ್ತೊಮ್ಮೆ ರಿಲೀಫ್ ಸಿಕ್ಕಿದೆ.
ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆ ಯನ್ನು ಹೈಕೋರ್ಟ್ ಮತ್ತೆ ವಿಸ್ತರಣೆ ಮಾಡಿದೆ. ಸಿಬಿಐ ತನಿಖೆ ರದ್ದು ಕೋರಿ ಶಿವಕುಮಾರ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನ್ಯಾ. ನಾಗಪ್ರಸನ್ನ ಅವರು ಸೂಚಿಸಿದರು
ಚೇತನ್ ಗಡಿಪಾರು ಭೀತಿ ಇಲ್ಲ!
ನಟ ಚೇತನ್ ಅವರ ಸಾಗರೋತ್ತರ ಭಾರತೀಯ ಪ್ರಜೆ (ಒಸಿಐ) ಕಾರ್ಡ್ ರದ್ದುಗೊಳಿಸಿದ್ದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಶುಕ್ರವಾರ ಮತ್ತೆ ವಿಸ್ತರಿಸಿದೆ. ಹಾಗಾಗಿ, ಗಡಿಪಾರು ಭೀತಿಯಲ್ಲಿದ್ದನಟ ಚೇತನ್ ಗೆ ಹೈಕೋರ್ಟ್ನಿಂದ ಮತ್ತೆ ರಿಲೀಫ್ ಸಿಕ್ಕಂತಾಗಿದೆ. ಚೇತನ್ ಕುಮಾರ್ ಸಲ್ಲಿಸಿದ್ದ ಅರ್ಜಿ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತು. ಕೆಲಕಾಲ ವಾದ ಆಲಿಸಿದ ನ್ಯಾಯಪೀಠ, ಕೇಂದ್ರ ಸರಕಾರ ಒಸಿಐ ರದ್ದು ಮಾಡಿ ಹೊರಡಿಸಿದ್ದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ್ದಲ್ಲದೆ, ಚೇತನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.
ಅರ್ಜಿದಾರರ ಪರ ವಕೀಲರು, ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಅರ್ಜಿದಾರರು ಪಾಲಿಸುತ್ತಿದ್ದಾರೆ. ಹಾಗಾಗಿ, ಹಿಂದೆ ನೀಡಿರುವ ತಡೆಯಾಜ್ಞೆಯನ್ನು ವಿಸ್ತರಿಸಬೇಕು,” ಎಂದು ಕೋರಿದರು