ದರ್ಶನ್ ಆಸ್ಪತ್ರೆಯಿಂದ ಮನೆಗೆ: ಅಭಿಮಾನಿಗಳ ಹಬ್ಬ!
– ಮನೆ ಮುಂದೆ ಬಾಸ್ ಅಭಿಮಾನಿಗಳ ಹಿಂಡು!
– ಬೇರೆ ಬೇರೆ ಭಾಗಗಳಿಂದ ಅಭಿಮಾನಿಗಳು ದರ್ಶನ್ ಅಭಿಮಾನಿ ಆಗಮನ
NAMMUR EXPRESS NEWS
ಬೆಂಗಳೂರು : ಬಿಜಿಎಸ್ ಆಸ್ಪತ್ರೆಯಿಂದ ಡಿ. 16ರಂದು ನಟ ದರ್ಶನ್ ಡಿಸ್ಟಾರ್ಜ್ ಆಗಿದ್ದಾರೆ. ಕಳೆದ ಒಂದುವರೆ ತಿಂಗಳಿನಿಂದ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ದರ್ಶನ್ ಡಿಸ್ಚರ್ಜ್ ಆಗಿದ್ದಾರೆ. ಮಧ್ಯಂತರ ಜಾಮಿನು ಮತ್ತು ನಟ ದರ್ಶನ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಿದ್ದರು. ಫಿಜಿಯೋಥೆರಫಿ ಮಾಡಿಸಿ ಬೇಲ್ ಸಿಗುತ್ತಿದ್ದಂತೆ ದರ್ಶನ್ ಅವರು ಆಸ್ಪತ್ರೆಯಿಂದ ಡಿಸ್ಚರ್ಜ್ ಆಗಿದ್ದಾರೆ. ಯಾವಾಗ ಬೇಕಾದರೂ ಸರ್ಜರಿ ಮಾಡಿಸಿಕೊಳ್ಳಬಹುದು ಎಂಬ ಅಭಿಪ್ರಾಯ ವ್ಯಕ್ತವಾದ, ಆಸ್ಪತ್ರೆಯಿಂದ ಡಿಸ್ಚರ್ಜ್ ಆಗಿ ಮನೆಗೆ ತೆರಳುವ ಸಾಧ್ಯತೆ ಇದೆ. ವೈದ್ಯರ ಸಲಹೆ ಸೂಚನೆ ದರ್ಶನ ಡಿಸ್ಚರ್ಜ್ ಮಾಡಲಾಗಿದೆ. ನಟ ದರ್ಶನ್ ಅವರು ಬಿಜಿಎಸ್ ಆಸ್ಪತ್ರೆಯಿಂದ ಬಿಡುಗಡೆ ಆಗುತ್ತಾರೆ ಎಂಬ ಸುದ್ದಿ ತಿಳಿದ ತಕ್ಷಣ ರಾಜ್ಯದ ಬೇರೆ ಬೇರೆ ಭಾಗಗಳಿಂದ ನಟ ದರ್ಶನ್ ಅವರ ಅಭಿಮಾನಿಗಳು ಇದೀಗ ಅವರ ನಿವಾಸದ ಮುಂದೆ ಆಗಮಿಸುತ್ತಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಮನೆಯ ಬಳಿ ಬೇರೆ ಬೇರೆ ಭಾಗಗಳಿಂದ ಅಭಿಮಾನಿಗಳು ದರ್ಶನ್ ಮನೆ ಎದುರು ಜಮಾಯಿಸುತ್ತಿದ್ದಾರೆ.