ರೇಷನ್ ಕಾರ್ಡ್ ತಿದ್ದುಪಡಿಗೆ ಡಿ.31 ಕೊನೆ ದಿನ
* 10:00 ಗಂಟೆಯಿಂದ 4:30 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ
* ಆನ್ಲೈನ್ ಸೆಂಟರ್ ಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಬಹುದು
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ನಕಲಿ ಬಿಪಿಎಲ್ ಕಾರ್ಡ್ ರದ್ದಾದ ಬೆನ್ನಲ್ಲೇ ರೇಷನ್ ಕಾರ್ಡ್ ದಾರರಿಗೆ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ. ರಾಜ್ಯ ಸರ್ಕಾರ ಡಿಸೆಂಬರ್ 12ನೇ ತಾರೀಖಿನಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿದ್ದು, ಕೊನೆಯ ದಿನಾಂಕ ಡಿ 31/ 2024 ಆಗಿದೆ. 10:00 ಗಂಟೆಯಿಂದ 4:30 ಗಂಟೆಯವರೆಗೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಈ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು.