ದೀಪಾವಳಿ ಹಬ್ಬಕ್ಕೆ ಬಂತು ನಿಯಮ!
– ದಿನಕ್ಕೆ 2 ಗಂಟೆ ಮಾತ್ರ ಪಟಾಕಿ ಸಿಡಿಸಿಸಲು ಅವಕಾಶ
– ರಾತ್ರಿ 8ರಿಂದ 10 ಗಂಟೆಯವರೆಗೆ ಅವಕಾಶ
– ಪಟಾಕಿ ಸಿಡಿಸಲು ನಿಯಮಗಳು ಏನೇನು..?
NAMMUR EXPRESS NEWS
ದೀಪಾವಳಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಿದ್ದು, ದಿನಕ್ಕೆ 2 ಗಂಟೆ ಮಾತ್ರ ಸುಡುಮದ್ದು ಸಿಡಿಸಲು ಅವಕಾಶ ನೀಡಲಾಗಿದೆ. ರಾಜ್ಯಾದ್ಯಂತ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಿದ್ದು, ಉಳಿದ ಸಮಯದಲ್ಲಿ ಸುಡುಮದ್ದು ಸಿಡಿಸಲು ಅವಕಾಶವಿಲ್ಲ ಎಂದು ಮಾರ್ಗಸೂಚಿ ಹೊರಡಿಸಿದೆ ಕಳೆದ ತಿಂಗಳು ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು ಅದರಂತೆಯೇ ಪೌರಾಡಳಿತ ನಿರ್ದೇಶನಾಲಯ ಹೊರಡಿಸಿದ ಆದೇಶದ ಅನುಸಾರ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅನುಮತಿ ನೀಡಲಾಗಿದ್ದು ಉಳಿದ ಅವಧಿಯಲ್ಲಿ ನಿಷೇಧ ಹೇರಲಾಗಿದೆ.
ಹಬ್ಬದ ಆಚರಣೆ ವೇಳೆ ನಿಗದಿತ ಗುಣ ಮಾಪನಗಳಿಗೆ ಸರಿಹೊಂದುವ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಯಾವುದೇ ಪ್ರಾಣಿ-ಪಕ್ಷಿ, ಮಕ್ಕಳು, ವೃದ್ಧರಿಗೆ ತೊಂದರೆಯಾಗದಂತೆ ಗಮನಿಸಬೇಕು. ಆಸ್ಪತ್ರೆ, ಶಿಕ್ಷಣ ಸಂಸ್ಥೆ, ನಿಷೇಧಿತ ಪ್ರದೇಶಗಳಲ್ಲಿ ಪಟಾಕಿ ಸಿಡಿಸುವಂತಿಲ್ಲ ಎಂದು ಹೇಳಲಾಗಿದೆ.