ಡೊನಾಲ್ಡ್ ಟ್ರಂಪ್ ಮತ್ತೆ ಅಮೇರಿಕಾ ಸಾರಥಿ!.
– ಕಮಲಾ ಹ್ಯಾರೀಸ್ ನಿರಾಸೆ+ ಟ್ರಂಪ್ ಭರ್ಜರಿ ಗೆಲುವು
– 2ನೇ ಬಾರಿಗೆ ಅಧಿಕಾರದ ಜೊತೆಗೆ 4 ವರ್ಷ ಅಮೆರಿಕಾ ಅಧ್ಯಕ್ಷ
– ಟ್ರಂಪ್ ಗೆಲುವಿಗೆ ಅಭಿನಂದಿಸಿದ ಪ್ರಧಾನಿ ಮೋದಿ
NAMMUR EXPRESS NEWS
ಇಡೀ ವಿಶ್ವವೇ ಭಾರೀ ಕುತೂಹಲದಿಂದ ಕಾಯುತ್ತಿದ್ದ ಬಹುನಿರೀಕ್ಷಿತ 2024ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ಬಹುಮತ ಪಡೆಯುವ ಮೂಲಕ ಗೆದ್ದು ಬೀಗಿದ್ದಾರೆ. ಈ ಮೂಲಕ ಅಮೆರಿಕಾದ 47ನೇ ಅಧ್ಯಕ್ಷರಾಗಿ ಟ್ರಂಪ್ ಆಯ್ಕೆಯಾಗಿದ್ದಾರೆಬೆಳಗ್ಗೆಯಿಂದಲೇ ಮತ ಎಣಿಕೆ ಬಿರುಸಿನಿಂದ ನಡೆದಿದ್ದು, ಆರಂಭಿಕ ಹಂತದಿಂದಲೇ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ಮುನ್ನಡೆ ಸಾಧಿಸಿದ್ರು. ಒಂದೆಡೆ ಡೊನಾಲ್ಡ್ ಟ್ರಂಪ್ ಮುನ್ನಡೆ ಸಾಧಿಸಿದ್ರೆ, ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರಿಗೆ ಭಾರೀ ಹಿನ್ನಡೆ ಆಗಿದೆ. ಡೊನಾಲ್ಡ್ ಟ್ರಂಪ್ 2ನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದಾರೆ. ಇನ್ನೂ ಮುಂದಿನ 4 ವರ್ಷಗಳ ಕಾಲ ಅಮೆರಿಕಾ ಅಧ್ಯಕ್ಷರಾಗಲಿದ್ದಾರೆ. ಅಮೆರಿಕಾದ ಪ್ರತಿಷ್ಠಿತ ಶ್ವೇತಭವನದಲ್ಲಿ ಅಧಿಕಾರ ಮಾಡಲಿದ್ದಾರೆ.
– ಟ್ರಂಪ್ ಗೆಲುವಿಗೆ ಅಭಿನಂದಿಸಿದ ಮೋದಿ
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಎಕ್ಸ್ನಲ್ಲಿ ಡೊನಾಲ್ಡ್ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್ ಮಾಡಿದ್ದು, ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತನಿಗೆ ಹೃತೂರ್ವಕ ಅಭಿನಂದನೆಗಳು.
ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂದಿದ್ದಾರೆ. ಹಿಂದಿನಂತೆಯೇ ಭಾರತ-ಯುಎಸ್ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಮ್ಮ ಸಹಕಾರವನ್ನು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ.
ಮತದಾನ ಹೇಗೆ?
ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಎಲೆಕ್ಟೋರಲ್ ಕಾಲೇಜ್ ಮತಗಳ ಎಣಿಕೆ ನಡೆಯುತ್ತಿದೆ. ಅಮೆರಿಕದಲ್ಲಿ ಒಟ್ಟು 538 ಚುನಾವಣಾ ಮತಗಳಿವೆ. ಇವು 50 ರಾಜ್ಯಗಳು ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ವಿಂಗಡಿಸಲ್ಪಟ್ಟಿವೆ. ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯದಲ್ಲಿ ಚುನಾವಣಾ ಮತಗಳ ಸಂಖ್ಯೆ ಹೆಚ್ಚು 270 ಅಥವಾ ಅದಕ್ಕಿಂತ ಹೆಚ್ಚು ಚುನಾವಣಾ ಮತಗಳನ್ನು ಪಡೆಯುವ ಅಭ್ಯರ್ಥಿಗೆ ಅಧ್ಯಕ್ಷರಾಗುವ ಅವಕಾಶ ಸಿಗುತ್ತದೆ. ಬುಧವಾರ ಮಧ್ಯಾಹ್ನದ ವೇಳೆಗೆ ಬಂದ ಫಲಿತಾಂಶಗಳ ಪ್ರಕಾರ ಟ್ರಂಪ್ 266 ಚುನಾವಣಾ ಮತಗಳನ್ನು ಗೆದ್ದಿದ್ದಾರೆ.