- ಮಂಗಳೂರಿನ ಲಾಡ್ಜ್ ಅಲ್ಲಿ ಮೈಸೂರು ಮೂಲದ ಕುಟುಂಬ ಆತ್ಮಹತ್ಯೆ
NAMMUR EXPRESS NEWS
ಮಂಗಳೂರು : ಮಂಗಳೂರಿನ ಕೆ.ಎಸ್.ರಾವ್ ರಸ್ತೆಯಲ್ಲಿರುವ ಲಾಡ್ಜ್ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.
ದಂಪತಿ ಸೇರಿದಂತೆ ಇಬ್ಬರು ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆ ಮಾಡಿಕೊಂಡವರು ಮೈಸೂರು ಮೂಲದವರು ಎಂದು ತಿಳಿದುಬಂದಿದೆ.
ಆತ್ಮಹತ್ಯೆ ಮಾಡಿಕೊಂಡವರು ಯಾರು? ಯಾಕೆ ಆತ್ಮಹತ್ಯೆಗೆ ಮಾಡಿಕೊಂಡ್ರು? ಎಂಬ ಮಾಹಿತಿ ತಿಳಿದುಬರಬೇಕಿದೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ.
ನಾಲ್ವರಲ್ಲಿ ಓರ್ವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿದ್ದರು.
ಇನ್ನು ಸ್ಥಳಕ್ಕೆ ಬಂದರು ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ.
ಎಂ.ಪಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲು
ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈ ಹಿನ್ನೆಲೆ ಬುಧವಾರ (ಮಾರ್ಚ್ 29)ರಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಆದರೂ ಕೂಡ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ತಮ್ಮ ಮನೆಯಲ್ಲೇ ಚೆಕ್ ವಿತರಣೆ ಮಾಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಘನೆ ಮಾಡಿದ್ದು, ಅವರ ವಿರುದ್ಧ ದೂರು ದಾಖಲಿಸಲಾಗಿದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಎಂ.ಪಿ.ಕುಮಾರಸ್ವಾಮಿ ವಿರುದ್ಧ ತಾಲೂಕು ಚುನಾವಣಾ ಅಧಿಕಾರಿ ಪಿ.ರಾಜೇಶ್ ದೂರು ದಾಖಲಿಸಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ ಎಂ.ಪಿ.ಕುಮಾರಸ್ವಾಮಿಯವರು ಜನರಿಗೆ ಚೆಕ್ ವಿತರಣೆ ಮಾಡಿದ್ದಾರೆ. ಆಗ ದಿಢೀರ್ ಭೇಟಿ ಕೊಟ್ಟ ಚುನಾವಣಾ ಅಧಿಕಾರಿಗಳು ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಮೂಡಿಗೆರೆ ಪೊಲೀಸರು ನೀತಿ ಸಂಹಿತೆ ಉಲ್ಲಂಘನೆಯಡಿ ಶಾಸಕರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.