ಗಣರಾಜ್ಯೋತ್ಸವ ಅಂಗವಾಗಿ ಲಾಲ್ಬಾಗ್ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನ!
– ರಾಮಾಯಣದ ಕತೃ ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ
– ಕ್ಯೂ.ಆರ್. ಕೋಡ್ ಮೂಲಕ ಪ್ರದರ್ಶನದ ಟಿಕೆಟ್ ಖರೀದಿಗೆ ಅವಕಾಶ!
– ಪ್ರದರ್ಶನದ ಪ್ರಮುಖ ಆಕರ್ಷಣೆಗಳು ಯಾವುವು?
– ಮುಖ್ಯಮಂತ್ರಿಯವರಿಂದ ಕಾರ್ಯಕ್ರಮ ಉದ್ಘಾಟನೆ!
NAMMUR EXPRESS NEWS
ಬೆಂಗಳೂರು: 76ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಪುಷ್ಪ ಕಾಶಿ ಎಂದೇ ಖ್ಯಾತಿ ಪಡೆದಿರುವ ಲಾಲ್ಬಾಗ್ ಗಾಜಿನ ಮನೆಯಲ್ಲಿ ರಾಮಾಯಣದ ಕತೃ ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಪ್ರದರ್ಶನಕ್ಕೆ ಬರುವವರಿಗೆ ಇದೇ ಮೊದಲ ಬಾರಿಗೆ ಕ್ಯೂಆರ್ ಕೋಡ್ನ ಮೂಲಕ ಟಿಕೆಟ್ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ.
* ಕ್ಯೂ.ಆರ್. ಕೋಡ್ ಮೂಲಕ ಪ್ರದರ್ಶನದ ಟಿಕೆಟ್ ಖರೀದಿಗೆ ಅವಕಾಶ!
ಫಲ ಪುಷ್ಪ ಪ್ರದರ್ಶನಕ್ಕೆ ಪ್ರತಿಯೊಂದು ಬಾರಿಯೂ ಒಂದೊಂದು ರೀತಿಯ ವಿಷಯಾಧಾರಿತ ವಸ್ತುನ್ನು ಆಯ್ಕೆ ಮಾಡಲಾಗುತ್ತಿದೆ. ಲಾಲ್ ಬಾಗ್ ಈವರೆಗೂ ನಡೆದ ಫಲಪುಷ್ಪ ಪ್ರದರ್ಶನಕ್ಕೆ ಆಫ್ ಲೈನ್ ಮತ್ತು ಆನ್ ಲೈನ್ನಲ್ಲಿ ಅವಕಾಶ ಕಲ್ಪಿಸಲಾಗಿತ್ತು. ನಾಲ್ಕು ದ್ವಾರಗಳಲ್ಲಿ ಟಿಕೆಟ್ ಕೌಂಟರ್ ಗಳನ್ನು ಳವಡಿಸ ಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿತ್ತು. ಆದರೆ ಇದೇ ಮೊದಲ ಬಾರಿಗೆ ಕ್ಯೂ.ಆರ್. ಕೋಡ್ ಮೂಲಕ ಪ್ರದರ್ಶನನಕ್ಕೆ ಟಿಕೆಟ್ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ.
ಅದರಂತೆ ನಗರದ ಬಸ್ ನಿಲ್ದಾಣಗಳು, ಮೆಟ್ರೋ ರೈಲು ನಿಲ್ದಾಣ ಸೇರಿದಂತೆ ವಿವಿಧ ಭಾಗಗಳಲ್ಲಿ ಕ್ಯೂ.ಆರ್.ಕೋಡ್ ಸ್ಟಿಕ್ಕರ್ ಅಂಟಿಸುವ ಮೂಲಕ ಟಿಕೆಟ್ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಲಾಗಿದೆ.
* ಪ್ರದರ್ಶನದ ಪ್ರಮುಖ ಆಕರ್ಷಣೆಗಳು ಯಾವುವು?
ಇಂಡೋ ಅಮೇರಿಕನ್ ಹೈ-ಬ್ರೀಡ್ ಸೀಡ್ಸ್ ಕಂಪೆನಿಯ ಆಕರ್ಷಕ ಹೂವುಗಳ ಜೋಡಣೆ ಮತ್ತು ವಾಲ್ಮೀಕಿ ಪುತ್ಥಳಿಯನ್ನು ಅನಾವರಣ ಮಾಡಲಾಗುತ್ತಿದೆ.
ಅಲ್ಲದೇ ವೈವಿಧ್ಯಮಯ 1.75 ಲಕ್ಷ ಹೂವುಗಳು ಮತ್ತು ಎಲೆ ಜಾತಿಯ ಗಿಡಗಳ ಪ್ರದರ್ಶನವೂ ಇರಲಿದೆ.
* ಬೃಹತ್ ಹುತ್ತದ ಅನಾವರಣ
ವಾಲ್ಮೀಕಿ ಎಂದರೆ ಬೃಹತ್ ಹುತ್ತ, ಸಂಸ್ಕೃತದಲ್ಲಿ ಹುತ್ತ ಎಂದರೆ ವಾಲ್ಮೀಕ ಎಂಬುದಾಗಿದೆ. ಇದನ್ನು ಆಕರ್ಷಣೆ ಮಾಡುವುದರ ಸಲುವಾಗಿ ಗಾಜಿನ ಮನೆಯ ಮಧ್ಯಭಾಗದಲ್ಲಿ ವಿವಿಧ ಜಾತಿಯ ಸುಮಾರು 1.5 ಲಕ್ಷ ಹೂವುಗಳಿಂದ ಬೃಹತ್ ಹುತ್ತವನ್ನು ಅನಾವರಣ ಮಾಡಲಾಗಿದ್ದು, ಇದು ಗಾಜಿನ ಮನೆಯ ಪ್ರಮುಖ ಆಕರ್ಷಣೆಯಾಗಿರಲಿದೆ.
* ರಾಮಾಯಣ ರಚನೆಗೆ ಮೂಲ ಕಾರಣವಾದ ಸನ್ನಿವೇಶದ ಪ್ರದರ್ಶನ!
ಗಾಜಿನ ಮನೆಯ ಎಡಬದಿಯಲ್ಲಿ ಪುಷ್ಮ ಮಾದರಿಯ ವಾಲ್ಮೀಕಿ ಆಶ್ರಮ ಮತ್ತು ರಾಮಾಯಣ ರಚನೆಗೆ ಮೂಲ ಕಾರಣವಾದ ಸನ್ನಿವೇಶದ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ವಿವಿಧ ರಾಜ್ಯಗಳಿಂದ ತರಿಸಿರುವ 2.75 ಲಕ್ಷ ರೂ.ಗಳನ್ನು ಬಳಸಲಾಗುತ್ತಿದೆ. ರಾಮಯಣ ಬಿಂಬಿಸುವ ಅಡಿ ಕಲಾಕೃತಿ ಪ್ರದರ್ಶನವನ್ನೂ ಮಾಡಲಾಗುತ್ತದೆ. ಗಾಜಿನ ಮನೆಯ ಕೇಂದ್ರ ಭಾಗದ ಹಿಂಬದಿಗೆ ರಾಮಾಯಣದ ಚಟುವಟಿಕೆಯನ್ನು ಬಿಂಬಿಸುವ 3 ಅಡಿ ಕಲಾಕೃತಿ ಹಾಗೂ ರಾಮಾಯಣದ ಸಾಂದರ್ಭಿಕ ಚಿತ್ರಗಳ ಅನಾವರಣವಿರಲಿದೆ.
* ಮಹಾಕಾವ್ಯದ ಓಲೆಗರಿ ಹಸ್ತಪ್ರತಿಗಳ ಪ್ರದರ್ಶನ
ಗಾಜಿನ ಮನೆಯ ಒಳಾಂಗಣದಲ್ಲಿ ಸೂಕ್ತ ಸ್ಥಳದಲ್ಲಿ ರಾಮಾಯಣ ಮಹಾಕಾವ್ಯದ ಓಲೆಗರಿ ಹಸ್ತಪ್ರತಿಗಳನ್ನು ಪ್ರದರ್ಶನ ಮಾಡಲಾಗುವುದು. ಇದರಲ್ಲಿ ಸಾಕಷ್ಟು ಮಾಹಿತಿ ನೀಡಲಾಗುತ್ತದೆ. ಇನ್ನುಳಿದಂತೆ ಹೊರಾಂಗಣದಲ್ಲಿ ಪುಷ್ಪಗಳಿಂದ ನ್ತಿುವ ರಾ್ಟ್ರಪಕ್ಷಿ ನವಿಲು, ಹೃದಯಾಕಾರದ ಹೂವಿನ ಕಮಾನುಗಳು, ಮೆಗಾ ಫ್ಲೋರಲ್ ಫ್ಲೋ, ತೂಗುವ ಹೂವುಗಳು, ಸಸ್ಯ ಸಂತೆ ಮತ್ತು ವಿಶೇಷಗಳು ಇರಲಿವೆ. ಅಲ್ಲದೆ, ಭದ್ರತೆಗಾಗಿ ಸಿಸಿ ಕ್ಯಾಮೆರಾಗಳು, ಪೊಲೀಸ್ ಔಟ್ ಪೋಸ್ಟ್, ಕುಡಿಯುವ ನೀರಿನ ಸೌಲಭ್ಯ ಇರಲಿದೆ.
ಪ್ರದರ್ಶನಕ್ಕೆ ಆಗಮಿಸುವವರಿಗೆ ಶಾಂತಿ ನಗರ ಬಹುಮಹಡಿ ಕಟ್ಟ, ಹಾಪ್ ಕಾಮ್ಸ್ ಆವರಣ, ಆಲ್ ಅಮೀನ್ ಕಾಲೇಜು ಆವರಣದಲ್ಲಿ ನಿಲುಗಡೆಗೆ ವ್ಯವಸ್ಥೆ ಇರಲಿದೆ.
* ಮುಖ್ಯಮಂತ್ರಿಗಳಿಂದ ಉದ್ಘಾಟನೆ!
ವಾಲ್ಮೀಕಿ ವಿಷಯಾಧಾರಿತ ಪಲಪುಷ್ಪ ಪ್ರದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜನ, ಸ್ಥಳೀಯ ಶಾಸಕ ಉದಯ್ ಗರುಡಾಚಾರ್ ಉಪಸ್ಥಿತರಿರಲಿದ್ದಾರೆ ಎಂದು ಡಿ.ಎಸ್.ರಮೇಶ್ ಮಾಹಿತಿ ನೀಡಿದರು.
