ಕರ್ನಾಟಕ ಟಾಪ್ ನ್ಯೂಸ್
* ಗದಗ:ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ ಜೀವಂತವಾಗಿ ಪತ್ತೆ!
– ಮೂರು ದಿನ ಬಾವಿಯಲ್ಲಿದ್ದ ಮಹಿಳೆ ಬದುಕಿದ್ದೇ ಪವಾಡ!
* ದಾವಣಗೆರೆ: ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥ: ಒಂದು ಸಾವು
* ಕೊಡಗು: ಆನೆ ದಾಳಿಗೆ ಮಹಿಳೆ ಬಲಿ: ಇನ್ನೊಂದು ಕಡೆ ಆನೆ ಸಾವು
* ಕಾರ್ಕಳ ರೇಪ್: ಡ್ರಗ್ಸ್ ನೀಡಿದ್ದ ಇಬ್ಬರು ಅರೆಸ್ಟ್!
* – ಕಾರವಾರ ಕಾರಾಗೃಹದಲ್ಲಿ ನಾಲ್ವರು ಕೈದಿಗಳ ನಡುವೆ ಮಾರಾಮಾರಿ
NAMMUR EXPRESS NEWS
ಗದಗ: ನಸುಕಿನ ಜಾವ ಮನೆ ಮುಂದೆ ಕೆಲಸ ಮಾಡುತ್ತಿದ್ದ ನವವಿವಾಹಿತೆಯನ್ನು ಹಿಂದಿನಿಂದ ಲಾಕ್ ಮಾಡಿದ ಅಪರಿಚಿತ ಮಹಿಳೆಯನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿದ್ದಾಳೆ. ಬಳಿಕ ಮನೆಯಿಂದ ಹೊಲಕ್ಕೆ ಎಳೆದೊಯ್ದು ನೀರಿಲ್ಲದ ಹಳೇ ಬಾವಿಗೆ ಬಿಸಾಡಿದ್ದಾಳೆ.
ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ ಜೀವಂತವಾಗಿ ಪತ್ತೆಯಾಗಿರುವ ವಿಚಿತ್ರ ಘಟನೆ ಗದಗ ಜಿಲ್ಲೆ ತೋಟಗಂಟಿ ಗ್ರಾಮದಲ್ಲಿ ನಡೆದಿದೆ. ಮೂರು ದಿನ ಬಾವಿಯಲ್ಲಿದ್ದ ಮಹಿಳೆ ಬದುಕಿದ್ದೇ ಪವಾಡವಾಗಿದೆ. ಘಟನೆ ಬಳಿಕ ೋಟಗಂಟಿ ಗ್ರಾಮಸ್ಥರು ಬಚ್ಚಿಬಿದ್ದಿದ್ದಾರೆ.
ಕಾಣೆಯಾಗಿದ್ದ ವಿವಾಹಿತೆಯೊಬ್ಬಳು ಅದೇ ಗ್ರಾಮದ ಹೊಲವೊಂದರಲ್ಲಿನ ನೀರಿಲ್ಲದ ಹಳೇ ಬಾವಿಯಲ್ಲಿ ಮೂರು ದಿನಗಳ ನಂತರ ಸಿಕ್ಕಿದ್ದಾಳೆ. ಅಸ್ವಸ್ಥಳಾಗಿದ್ದ ಮಹಿಳೆಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಇಲ್ಲಿ ವಿಚಿತ್ರ ಅಂದರೆ ಮಹಿಳೆ ಬಾವಿಗೆ ಬಿದ್ದಿದ್ದು ಹೇಗೆ ಎಂಬ ಮಾಹಿತಿ ಕೇಳಿ ಗ್ರಾಮದ ಜನರೇ ಶಾಕ್ ಆಗಿದ್ದಾರೆ.
ಯಾಕೆಂದರೆ ಯಾರೋ ನನ್ನ ಎಳೆದುಕೊಂಡು ಹೋದರು ಅಂತ ಹೇಳಿದ್ದಾಳೆ. ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಆಗಸ್ಟ್ 20 ರಂದು ನಸುಕಿನ ಜಾವ ಮನೆಯ ಅಂಗಳದಲ್ಲಿ ಕೆಲಸ ಮಾಡುತ್ತಿದ್ದಳು. ಅಲ್ಲಿಗೆ ಬಂದ ಅಪರಿಚಿತ ಮಹಿಳೆಯೊಬ್ಬಳು ನವವಿವಾಹಿತೆಯನ್ನು ಕಿಡ್ನಾಪ್ ಮಾಡಿದ್ದರಂತೆ.
* ಮೂರು ದಿನ ಬಾವಿಯಲ್ಲಿದ್ದ ಮಹಿಳೆ ಬದುಕಿದ್ದೇ ಪವಾಡ!
ನವವಿವಾಹಿತೆಯ ಕುತ್ತಿಗೆ ಭಾಗ ಹಿಡಿದು ಮನೆ ಬಿಟ್ಟು ಬರುವಂತೆ ಬಲವಂತ ಮಾಡಿದ್ದು,ಮಾತ್ರವಲ್ಲದೇ ನನ್ನ ಕೈಬಳೆ, ಕಾಲುಂಗರ ನೀಡುವಂತೆ ಅಪರಿಚಿತ ಮಹಿಳೆ ಒತ್ತಾಯ ಮಾಡಿದ್ದಳು. ನನ್ನ ಕಣ್ಣಿಗೆ ಕಾಣದಂತೆ ಮರೆ ಮಾಡಿ ಕುತ್ತಿಗೆ ಹಿಡಿದು ಭಯಪಡಿಸಿದ್ದಾಳೆ.
ಗೋವಿನ ಜೋಳ ಹೊಲದ ಮೂಲಕ ನನ್ನನ್ನು ಎಳೆದುಕೊಂಡು ಹೋಗಿ ನಂತರ ತಾಳಿ ಕೇಳಿ ನನ್ನನ್ನು ಬಾವಿಗೆ ತಳ್ಳಿದ್ದಳು. ಬಾವಿಗೆ ಬಿದ್ದ ಮಾರನೆ ದಿನ ನನಗೆ ಪ್ರಜ್ಞೆ ಬಂದಿತ್ತು. ಆಗ ಎಷ್ಟೇ ಕಿರುಚಿದರೂ ಸಹಾಯಕ್ಕೆ ಯಾರೂ ಬರಲಿಲ್ಲ. ಆ. 22 ರಂದು ಧ್ವನಿ ಕೇಳಿದ ಜನರು ನನ್ನನ್ನು ಕಾಪಾಡಿದ್ದಾರೆ. ಆದರೆ ಯಾರು ನನ್ನನ್ನ ಎಳೆದುಕೊಂಡು ಹೋದರು ಎನ್ನುವ ನಿಖರ ಮಾಹಿತಿ ಇಲ್ಲ ಎಂದಿದ್ದಾಳೆ. ಈ ವಿಚಿತ್ರ ರೀತಿಯ ಘಟನೆಗೆ ಗ್ರಾಮದ ಇತರೆ ಮಹಿಳೆಯರು ಆತಂಕಗೊಂಡಿದ್ದಾರೆ. ನಸುಕಿನ ಜಾವ ಓಡಾಡಲು ಹೆದರುವಂತಾಗಿದೆ. ಸದ್ಯ ಈ ಸಂಬಂಧ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಪೊಲೀಸರನ್ನು ಸಂಪರ್ಕ ಮಾಡಿರುವ ಬಗ್ಗೆ ಮಾಹಿತಿ ದೊರಕಿಲ್ಲ.
* ದಾವಣಗೆರೆ: ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥ!!
ದಾವಣಗೆರೆ: ಇತ್ತೀಚಿಗೆ ಹೊನ್ನಾಳಿ ತಾಲೂಕಿನ ಹುಣದಘಟ್ಟ ಗ್ರಾಮದ ವೃದ್ಧೆ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದರು. ಈ ಪ್ರಕರಣ ಮಾಸುವ ಮುನ್ನವೇ ಚನ್ನಿರ ತಾಲೂಕಿನ ಜೋಳದಾಳ ಗ್ರಾಮದ ಜನರು ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಗ್ರಾಮದಲ್ಲಿ ವೈದ್ಯರು ಬೀಡು ಬಿಟ್ಟಿದ್ದಾರೆ. ಗ್ರಾಮಸ್ಥರಿಗೆ ಸೂಚನೆಗಳನ್ನು ನೀಡುತ್ತಿದ್ದಾರೆ.
ಕಲುಷಿತ ನೀರು ಸೇವಿಸಿ ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮದ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. 14 ಜನರನ್ನು ಚನ್ನಗಿರಿ ಸರ್ಕಾರಿ ಆಸ್ಪತ್ರೆಗೆ ಮತ್ತು 6 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಐದು ಜನರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆ.28ರಂದು ರಾತ್ರಿಯಿಂದಲೇ ಕೆಲವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಮೊದಲು ನಾಲ್ಕು ಜನರರಲ್ಲಿ ವಾಂತಿ-ಬೇಧಿ ಕಂಡಿತು. ಬಳಿಕ ಗ್ರಾಮದ 25 ಜನರು ವಾತಿ-ಭೇದಿಯಿಂದ ಬಳಲಿದ್ದಾರೆ.
• ಕಲುಷಿತ ನೀರು ಸೇವಿಸಿ ಸಾವು
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಗ್ರಾಮದ ಏಳು ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಏಳು ಜನರಲ್ಲಿ ಚಂದ್ರಮ್ಮ (60) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆಗಸ್ಟ್ 21 ರಂದು ಆಸ್ಪಸ್ಥರಾಗಿ ಮೆಗ್ಗನ್ ಆಸ್ಪತ್ರೆಗೆ ಚಂದ್ರಮ್ಮ ದಾಖಲಾಗಿದ್ದರು. ವಾಂತಿ ಬೇಧಿ, ಜ್ವರದಿಂದ ಬಳಲುತ್ತಿದ್ದ ಚಂದ್ರಮ್ಮ ಅವರು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ.
– 15 ಕ್ಕೂ ಅಧಿಕ ಜನರಿಗೆ ವಾಂತಿ, ಭೇದಿ
ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಉಬ್ಬಲಗಂಡಿ ಗ್ರಾಮದಲ್ಲಿ ನೀರು ಸೇವನೆ ಬಳಿಕ 15ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಕಳೆದ ನಾಲ್ಕು ದಿನಗಳಿಂದ ವಾಂತಿ, ಭೇದಿ ಪ್ರಕರಣಗಳು ಹೆಚ್ಚುತ್ತಲೇ ಇವೆ. ಘಟನಾ ಸ್ಥಳಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ವಾಂತಿ, ಭೇದಿ ಕಾಣಿಸಿಕೊಂಡ ಗ್ರಾಮಸ್ಥರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಯಾವುದೇ ರೀತಿ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದಾಗಿ ಮಾಹಿತಿ ದೊರಕಿದೆ.
ಕಾಡಾನೆ ದಾಳಿಗೆ ಮಹಿಳೆ ಬಲಿ
ಕೊಡಗು: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಕೊಡಗಿನ ಸಿದ್ದಾಪುರ ಸಮೀಪದ ಚನ್ನಯ್ಯನಕೋಟೆ ಗ್ರಾಮದಲ್ಲಿ ಘಟನೆ ನಡೆದಿದೆ.
ಮನೆಯ ಸಮೀಪವೇ ಮಹಿಳೆ ಮೇಲೆ ದಾಳಿ ನಡೆಸಿ ಹಿಳೆ ಸಾವಣ್ಣಪ್ಪಿದ್ದಾರೆ. ಚನ್ನಯ್ಯನಕೋಟೆ ನಿವಾಸಿ ಕಾತಯಿ (72) ಮೃತ ದುರ್ದೈವಿ. ಮಗನ ಮನೆಯಿಂದ ಹೊರ ಬರುತ್ತಿದ್ದ ವೇಳೆ ರೊಚ್ಚಿಗೆದ್ದ ಕಾಡಾನೆಯೂ ದಾಳಿ ಮಾಡಿದೆ.ವೃದ್ಧೆಯಾಗಿರುವುದರಿಂದ ಆನೆಯಿಂದ ತಪ್ಪಿಸಿಕೊಳ್ಳಲು ಆಗದೆ ಮೃತಪಟ್ಟ ಘಟನೆ ನಡೆದಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆನೆ ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚನ್ನಯ್ಯನಕೋಟೆ ಘಟನೆ ನಡೆದಿದ್ದು,ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಡಿ ಅರಣ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.
• ಕೆಸರಿನಲ್ಲಿ ಸಿಲುಕಿ ಕಾಡಾನೆ ಸಾವು
ಕೆರೆಯ ಕೆಸರಿನಲ್ಲಿ ಸಿಲುಕಿ ಕಾಡಾನೆಯೊಂದು ಮೃತಪಟ್ಟಿದೆ. ಕೊಡಗು ಜಿಲ್ಲೆಯ ಅಮ್ಮತ್ತಿ ಬಳಿ ಘಟನೆ ನಡೆದಿದೆ. ಕನ್ನಡ ಮಠಕ್ಕೆ ಸೇರಿದ ಕೆರೆಯಲ್ಲಿ ಹತ್ತು ವರ್ಷದ ಆನೆ ಮೃತಪಟ್ಟಿದ್ದು,ಅರಣ್ಯ ಇಲಾಖೆಯು ಜೆಸಿಬಿ ಬಳಸಿ ಆನೆಯನ್ನು ಮೇಲೆತ್ತಿ ಅದೇ ಸ್ಥಳದಲ್ಲಿಯೇ ಅಂತ್ಯಕ್ರಿಯೆ ನಡೆಸಿದೆ. ಡಾ. ಚಿಟ್ಟಿಯಪ್ಪ ಅವರಿಂದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕಾಡಾನೆಯು ನೀರು ಕುಡಿಯಲು ಬಂದಾಗ ಸಿಲುಕಿಕೊಂಡಿದೆ ಎಂಬುಹುದಾಗಿ ಮಾಹಿತಿ ದೊರಕಿದೆ.
ಕಾರ್ಕಳ ರೇಪ್: ಡ್ರಗ್ಸ್ ನೀಡಿದ್ದ ಇಬ್ಬರು ಅರೆಸ್ಟ್!
ಕಾರ್ಕಳ:ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ದ್ರವ್ಯ ದಂಧೆ ನಡೆಸುತ್ತಿದ್ದ ಪ್ರಕರಣದಲ್ಲಿ ಮತ್ತಿಬ್ಬರನ್ನು ಬಂಧಿಸಲಾಗಿದೆ.
ಆಂಧ್ರಪ್ರದೇಶದ ಗೋವಿಂದಪಲ್ಲಿ ನಿವಾಸಿ ಗಿರಿರಾಜು ಜಗಾಧಾಬಿ (31), ಉಡುಪಿ ಜಿಲ್ಲೆ ಕಾಪು ತಾಲ್ಲೂಕಿನ ಶಂಕರಪುರದ ಜಾನ್ ನೊರೋನ್ಹಾ (30) ಎಂಬ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಪೊಲೀಸ್ ವಶಕ್ಕೆ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಲ್ತಾಫ್, ಕ್ಷೇವಿಯರ್ ರಿಚರ್ಡ್ ಕ್ವಾಡ್ರಸ್ ಮತ್ತು ಅಭಯ್ ಎಂಬುವವರನ್ನು ಪೊಲೀಸರು ಈ ಹಿಂದೆ ಬಂಧಿಸಿದದರು. ಈ ಪ್ರಕರಣಲ್ಲಿ ಈಗ ಐವರ ಬಂಧನವಾಗಿದೆ.
– ಕಾರವಾರ ಕಾರಾಗೃಹದಲ್ಲಿ ನಾಲ್ವರು ಕೈದಿಗಳ ನಡುವೆ ಮಾರಾಮಾರಿ
ಕಾರವಾರ: ಉತ್ತರ ಕನ್ನಡದ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಗಲಾಟೆಯಾಗಿದೆ. ನಾಲ್ವರು ಕೈದಿಗಳು ಹೊಡೆದಾಡಿಕೊಂಡಿದ್ದು, ಓರ್ವನ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ.
ನಾಲ್ವರು ಕೈದಿಗಳ ನಡುವಿನ ಗಲಾಟೆಯಲ್ಲಿ ಓರ್ವ ಕೈದಿಯ ತೆಲೆಗೆ ಗಂಭೀರ ಗಾಯವಾಗಿದ್ದು, ರಕ್ತಸ್ತಾವ ಉಂಟಾಗಿದ್ದು, ಆತನನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.ಈ ವಿಷಯ ತಿಳಿದು ಕಾರವಾರ ಜಿಲ್ಲಾ ಕಾರಾಗೃಹಕ್ಕೆ ಎಎಸ್ ಪಿ ಜಯಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.