ಗಣೇಶೋತ್ಸವ: ವಿದ್ಯುತ್ ಅವಘಡಗಳ ಬಗ್ಗೆ ಎಚ್ಚರ ಎಚ್ಚರ!
– ವಿದ್ಯುತ್ ಇಲಾಖೆಯಿಂದ ಸಹಾಯವಾಣಿ ಮಾರ್ಗಸೂಚಿ ಪ್ರಕಟ
– ಗಣೇಶೋತ್ಸವ ಆಚರಣೆಗೆ ವಿದ್ಯುತ್ ಬಳಕೆ ಬಗ್ಗೆ ಸೂಚನೆ
– ತುರ್ತು ಸಂದರ್ಭದಲ್ಲಿ 1912 ಸಹಾಯವಾಣಿಗೆ ಕರೆ ಮಾಡಿ..!
NAMMUR EXPRESS NEWS
ಗೌರಿ ಗಣೇಶ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೆ.7ರಂದು ಕರ್ನಾಟಕದಾದ್ಯಂತ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ.
ಈಗಾಗಲೇ ಸಾರ್ವಜನಿಕರು ಗಣೇಶೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದು, ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ, ಮೆರವಣಿಗೆ ವೇಳೆ ವಿದ್ಯುತ್ ಅವಘಡಗಳ ಬಗ್ಗೆ ಎಚ್ಚರ ವಹಿಸುವಂತೆ ವಿದ್ಯುತ್ ಇಲಾಖೆ ಮಾರ್ಗಸೂಚನೆಗಳನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬೆಸ್ಕಾಂ, ವಿದ್ಯುತ್ ಅವಘಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಬೇಕು.ಜಾಗರೂಕರಾಗಿರಿ, ಯಾವುದೇ ವಿದ್ಯುತ್ ಅವಘಡಗಳಿಗೆ ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ ಎಂದು ತಿಳಿಸಿದೆ.ಈ ಹಬ್ಬವನ್ನು ಸುರಕ್ಷಿತವಾಗಿ ಮತ್ತು ಸ್ಮರಣೀಯವಾಗಿಸೋಣ ಎಂದು ಬೆಸ್ಕಾಂ ತಿಳಿಸಿದೆ ಮಾರ್ಗಸೂಚಗಳು ಹೀಗಿೆ ಹಬ್ಬಕ್ಕೆ ತೋರಣ, ಪೆಂಡಾಲ್, ಸೀರಿಯಲ್ ಲೈಟ್ ಹಾಕುವಾಗ ವಿದ್ಯುತ್ ತಂತಿಗಳ ಬಗ್ಗೆ ಎಚ್ಚರವಹಿಸಬೇಕು. ಸೀರಿಯಲ್ ಲೈಟ್ ತಂತಿ ಸಮರ್ಪಕ ಇನ್ಸುಲೇಟ್ ಆಗಿರಬೇಕು. ವಿದ್ಯುತ್ ಕಂಬದಿಂದ ಸಂಪರ್ಕ ಪಡೆಯಬಾರದು. ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನ ಕಟ್ಟಬಾರದು. ಮೆರವಣಿಗೆ ವೇಳೆ ರಸ್ತೆ ಬದಿ ವಿದ್ಯುತ್ ತಂತಿಗಳನ್ನು ಮೇಲಕ್ಕೆತ್ತಲು ಪ್ರಯತ್ನಿಸಬಾರದು.
ಮೆರವಣಿಗೆ ಮಾರ್ಗವನ್ನ ಮುಂಚಿತ ಎಸಿ ಗಮನಕ್ಕೆ ತರಲು ಪ್ರಯತ್ನಿಸಬೇಕು. ತುಂಡಾದ ವೈರ್, ವಿದ್ಯುತ್ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಬೇಕು. ವಿದ್ಯುತ್ ಪರಿಕರಗಳಿರುವ ಸ್ಥಳಗಳಲ್ಲಿ ‘ಡೇಂಜರ್ ಜೋನ್ ಎಂದು ಸೂಚಿಸಬೇಕು ಅಂತ ಬೆಸ್ಕಾಂ ಸೂಚಿಸಿದೆ.