ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ!
– ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್ ಸಂಪರ್ಕ
– ವರ್ಷಕ್ಕೆ ಮೂರು ಉಚಿತ ಸಿಲಿಂಡರ್
NAMMUR EXPRESS NEWS
ನವದೆಹಲಿ: ಗ್ಯಾಸ್ ಉಚಿತವಾಗಿ ಸಿಗುವ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. 2016 ರಲ್ಲಿ, ಕೇಂದ್ರ ಸರ್ಕಾರವು ಅರಣ್ಯನಾಶವನ್ನು ತಡೆಗಟ್ಟುವುದರ ಜೊತೆಗೆ ಮನೆಯಲ್ಲಿ ಅಡುಗೆ ಮಾಡುವ ಪ್ರಕ್ರಿಯೆಯನ್ನ ಸುಲಭಗೊಳಿಸುವ ಉದ್ದೇಶದಿಂದ ಎಲ್ಲಾ ಅರ್ಹ ಜನರಿಗೆ ಉಚಿತ ಗ್ಯಾಸ್ ಸಂಪರ್ಕವನ್ನು ನೀಡಲು ಪ್ರಾರಂಭಿಸಿತು. ಇದರ ಭಾಗವಾಗಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ವರ್ಷಕ್ಕೆ 3 ಸಿಲಿಂಡರ್’ಗಳನ್ನ ನೀಡುವ ಯೋಜನೆಯನ್ನು ಪರಿಚಯಿಸಿದೆ. ಆದರೆ ಬಿಪಿಎಲ್ ಪಡಿತರ ಚೀಟಿದಾರರು ಮಾತ್ರ ಈ ಯೋಜನೆಯ ಮೂಲಕ 3 ಸಿಲಿಂಡರ್ ಪಡೆಯಲು ಅರ್ಹರಾಗಿರುತ್ತಾರೆ. 2016ರಲ್ಲಿ ಆರಂಭವಾದ ಈ ಯೋಜನೆ ಈಗಲೂ ಮುಂದುವರಿದಿದೆ. ಈ ಯೋಜನೆಯಿಂದ ಈಗಾಗಲೇ ಅನೇಕ ಅರ್ಹರು ಪ್ರಯೋಜನ ಪಡೆದಿದ್ದಾರೆ.
ಈ ಯೋಜನೆಯ ಮೂಲಕ ಪ್ರಯೋಜನಗಳನ್ನ ಪಡೆಯಲು, ನೀವು ಖಚಿತವಾಗಿ ಅರ್ಜಿ ಸಲ್ಲಿಸಬೇಕು. ಅಲ್ಲದೆ ಅರ್ಜಿದಾರರು ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಆಗ ಮಾತ್ರ ನೀವು ಈ ಯೋಜನೆಗೆ ಅರ್ಹರಾಗುತ್ತೀರಿ. ಆದ್ದರಿಂದ ಅರ್ಹ ಕುಟುಂಬಗಳು ಈ ಯೋಜನೆಯ ಪ್ರಯೋಜನಗಳನ್ನ ಪಡೆಯಲು ವೆಬ್ಸೈಟ್ www.pmuy.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಅಗತ್ಯ ದಾಖಲೆಗಳು.!
ಈ ಯೋಜನೆಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ವಿವರಗಳು ಮತ್ತು ಇತರ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಪ್ರತಿ ವರ್ಷ ಮೂರು ಉಚಿತ ಸಿಲಿಂಡರ್ಗಳನ್ನ ನೀಡುವ ಮೂಲಕ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಬೆಂಬಲ ನೀಡುವ ಗುರಿಯನ್ನ ಕೇಂದ್ರ ಸರ್ಕಾರ ಹೊಂದಿದೆ. .