ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್!!
* ಹುಬ್ಬಳ್ಳಿ- ಮಂಗಳೂರು ನಡುವೆ ಸ್ಪೇಷಲ್ ರೈಲು ಸಂಚಾರ!!
* ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧಾರ!
* ಯಾವೆಲ್ಲಾ ರೈಲು, ಎಲ್ಲೆಲ್ಲಿ ನಿಲುಗಡೆ?
NAMMUR EXPRESS NEWS
ಬೆಂಗಳೂರು: ದೀಪಾವಳಿ ಹಬ್ಬ ಮತ್ತು ವೀಕೆಂಡ್ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆ ನಿಭಾಯಿಸಲು ನೈಋತ್ಯ ರೈಲ್ವೆಯು ಎಸ್ಎಸ್ ಎಸ್ ಹುಬ್ಬಳ್ಳಿ-ಮಂಗಳೂರು ಜಂಕ್ಷನ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲು ನಿರ್ಧರಿಸಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
* ರೈಲು ಸಂಖ್ಯೆ 07311
ನವೆಂಬರ್ 2 ರಂದು ಶ್ರೀ ಸಿದ್ದಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು, ಮರುದಿನ ದಿನ ಬೆಳಗ್ಗೆ 11.25ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
* ರೈಲು ಸಂಖ್ಯೆ 07312
ನವೆಂಬರ್ 3 ರಂದು ಮಂಗಳೂರು ಜಂಕ್ಷನ್ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು, ಮರುದಿನ ನವೆಂಬರ್ 4 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ತಲುಪಲಿದೆ.
* ಎಲ್ಲೆಲ್ಲಿ ನಿಲುಗಡೆ?
ಈ ರೈಲು ಎರಡೂ ದಿಕ್ಕುಗಳಲ್ಲಿ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣೆ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲ್ಲುತ್ತದೆ.
ಈ ರೈಲು 1 ಎಸಿ ಟು ಟೈಯರ್ ಬೋಗಿಗಳು, 2 ಫಸ್ಟ್ ಎಸಿ ಕಮ್ ತ್ರಿ ಟೈಯರ್ ಬೋಗಿಗಳು, 3 ಎಸಿ ತ್ರಿ ಟೈಯರ್ ಬೋಗಿಗಳು, 5 ಸ್ವೀಪರ್ ಕ್ಲಾಸ್ ಬೋಗಿಗಳು, 2 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್/ ಬ್ರೇಕ್ ವ್ಯಾನ್ ಬೋಗಿಗಳು ಸೇರಿದಂತೆ 15 ಬೋಗಿಗಳನ್ನು ಹೊಂದಿದೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಚೆನ್ನೈ ನಿಲ್ದಾಣಗಳ ನಡುವೆ ಎರಡು ರೈಲು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ಸಂಚಾರ.
* ರೈಲು ಸಂಖ್ಯೆ 06209
ಅಕ್ಟೋಬರ್ 30 ಮತ್ತು ನವೆಂಬರ್ 3 ರಂದು ಬೆಳಿಗ್ಗೆ 8:05ಕ್ಕೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 2:30ಕ್ಕೆ ಚೆನ್ನ ಎನ್ನೋರ್ ನಿಲ್ದಾಣವನ್ನು ತಲುಪಲಿದೆ.
* ರೈಲು ಸಂಖ್ಯೆ 06210
ಚೆನ್ನೈ ಎಗೋರ್ ನಿಲ್ದಾಣದಿಂದ ಅಕ್ಟೋಬರ್ 30 ಮತ್ತು ನವೆಂಬರ್ 3 ರಂದು ಮಧ್ಯಾಹ್ನ 3:55ಕ್ಕೆ ಹೊರಟು, ಅದೇ ದಿನ ರಾತ್ರಿ 10:50ಕ್ಕೆ ಕೆಎಸ್ಆರ್ ಬೆಂಗಳೂರು ತಲುಪಲಿದೆ.
* ಎಲ್ಲೆಲ್ಲಿ ನಿಲುಗಡೆ?
ಈ ರೈಲು ಎರಡೂ ಯಶವಂತಪುರ, ದಿಕ್ಕುಗಳಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟಿ, ಕಟ್ಟಾಡಿ, ಅರಕ್ಕೋಣಂ ಮತ್ತು ಪೆರಂಬೂರು ನಿಲ್ದಾಣಗಳಲ್ಲಿ ನಿಲ್ಲುತ್ತದೆ.
ಈ ರೈಲು 1 ಎಸಿ ಟು ಟೈಯರ್, 1 ಎಸಿ ತ್ರಿ ಟೈಯರ್, 11 ಸ್ವೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ / ಬ್ರೇಕ್ ವ್ಯಾನ್ ಸೇರಿದಂತೆ 19 ಬೋಗಿಗಳನ್ನು ಒಳಗೊಂಡಿರುತ್ತದೆ.
ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳೆ ಆಗಮನ/ ನಿರ್ಗಮನ ಸಮಯ, ಇತರ ವಿವರಗಳನ್ನು ಪರಿಶೀಲಿಸಬಹುದು.