2024ಕ್ಕೆ ಗುಡ್ ಬೈ… 2025 ಹಾಯ್.. ಹಾಯ್..!
– ಕ್ಷಣಗಣನೆ ಶುರು: ಹೊಸ ವರ್ಷಕ್ಕೆ ಸ್ವಾಗತ
– ಪ್ರವಾಸಿ ತಾಣಗಳಲ್ಲಿ ಜನರಿಂದ ರಶ್ ರಶ್
– ಹೋಂ ಸ್ಟೇ, ರೆಸಾರ್ಟ್, ಹೋಟೆಲ್ ಫುಲ್ ಫುಲ್
NAMMUR EXPRESS NEWS
2024ಕ್ಕೆ ಗುಡ್ ಬೈ ಹೇಳಿ 2025ಕ್ಕೆ ಹಾಯ್ ಹೇಳುವುದಕ್ಕೆ ಕ್ಷಣಗಣನೆ ಶುರುವಾಗಿದೆ. ಇದಕ್ಕಾಗಿ ರಾಜ್ಯಾದ್ಯಂತ ಸಿದ್ದತೆಗಳು ಭರದಿಂದ ಸಾಗಿವೆ. ಕಡಲ ತೀರಗಳು, ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಿಗೆ ಜನ ಭೇಟಿ ನೀಡಿ ಹೊಸ ವರ್ಷವನ್ನು ಬರ ಮಾಡಿಕೊಳ್ಳುತ್ತಿದ್ದಾರೆ. ಕುಟುಂಬಸ್ಥರು, ಸ್ನೇಹಿತರೊಂದಿಗೆ ಮೋಜು ಮಸ್ತಿ ಮಾಡುತ್ತಾ ಹೊಸ ವರ್ಷದ ಆಚರಣೆಗೆ ಕಾತುರದಿಂದ ಕಾಯುತ್ತಿದ್ದಾರೆ.
ಬೆಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಆಚರಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಎಂಜಿ ರೋಡ್, ಬ್ರಿಗೇಡ್ ರೋಡ್ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಕಾವಲು ಇರಿಸಲಾಗಿದೆ. ಅಲ್ಲದೆ ಅಲ್ಲಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಇದರ ಮೇಲ್ವಿಚಾರಣೆಗೆ ನಾಲ್ಕು ಸಬ್ ಇನ್ಪೆಕ್ಟರ್ಗಳನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಹದ್ದಿನ ಕಣ್ಣು ಇಟ್ಟಿದೆ. ಇನ್ನೂ ಬಹುತೇಕ ಬೆಂಗಳೂರಿನ ಜನ ರಾಜ್ಯದ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಅಲ್ಲಿ ಹೊಸ ವರ್ಷದ ಆಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
– ಚಿಕ್ಕಮಗಳೂರಿನಲ್ಲಿ ಜೋರಾದ ಹೊಸ ವರ್ಷದ ಆಚರಣೆ
ಹೊಸ ವರ್ಷಾಚರಣೆಗೆ ಕಾಫಿನಾಡು ಚಿಕ್ಕಮಗಳೂರಿಗೆ ರಾಜ್ಯಾದ್ಯಂತ ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಹೀಗಾಗಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಇಂದು ಸಂಜೆ ಆರು ಗಂಟೆಯಿಂದ ಬೆಳಗ್ಗೆ ನಾಲ್ಕು ಗಂಟೆವರೆಗೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧ ವಿಧಿಸಲಾಗಿದೆ. ನೈತಿಕ ಪೊಲೀಸ್ ಗಿರಿ ವಿಧಿಸಲಾಗಿದೆ. ಬಾರ್ ಆಂಡ್ ರೆಸ್ಟೋರೆಂಟ್ ಗಳಿಗೆ ಎಚ್ಚರಿಕೆ ನೀಡಲಾಗಿದೆ. ರಾತ್ರಿ ಹತ್ತು ಗಂಟೆ ನಂತರ ಯಾವುದೇ ಡಿಜೆ ಸೌಂಡ್ ಬಳಸುವಂತಿಲ್ಲ. ಪ್ರವಾಸಿ ತಾಣಗಳಲ್ಲಿ ಆಚರಣೆ ಮಾಡುವಂತಿಲ್ಲ. ಹೀಗೆ ಹಲವಾರು ನಿರ್ಬಂಧವನ್ನು ಹೇರಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ನೂರಾರು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
– ಚಾಮುಂಡಿ ಬೆಟ್ಟದಲ್ಲಿ ಪ್ರವಾಸಿಗರಿಗೆ ನಿರ್ಬಂಧ
ಇನ್ನೂ ಮೈಸೂರು ಚಾಮುಂಡಿ ಬೆಟ್ಟದಲ್ಲಿ ಇಂದು ಸಂಜೆ ಏಳು ಗಂಟೆಯಿಂದ ಆರು ಗಂಟೆ ವರೆಗೂ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಹೊಸ ವರ್ಷದ ಸೆಲೆಬ್ರೇಷನ್ಗೆ ಬ್ರೇಕ್ ಹಾಕಲಾಗಿದೆ. ಬೆಟ್ಟಕ್ಕೆ ಹೋಗುವ ಪ್ರವಾಸಿಗರೂ ಬೇಗ ಹೊರಬರಬೇಕು ಎಂದು ಸೂಚನೆ ನೀಡಲಾಗಿದೆ. ಮೈಸೂರಿನಲ್ಲಿ ಹೊಸ ವರ್ಷ ಬರಮಾಡಿಕೊಳ್ಳಲು ತಯಾರಿ ಜೋರಾಗಿದೆ. ಸಾವಿರಾರು ಜನ ಒಂದೆಡೆ ಸೆರುವುದರಿಂದ ಸಾವಿರಾರು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೆ ಮೈಸೂರು ಪ್ರವಾಸಿ ತಾಣಗಳಲ್ಲೂ ಪೊಲೀಸ್ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಯೋಜನೆ ಮಾಡಲಾಗಿದೆ. ಮಧ್ಯರಾತ್ರಿ ಒಂದು ಗಂಟೆವರೆಗೂ ಮಾತ್ರ ಹೊಸ ವರ್ಷ ಆಚರಣೆಗೆ ಅವಕಾಶ ಇದೆ. ಒಂದು ಗಂಟೆ ನಂತರ ಆಚರಣೆಗೆ ಅವಕಾಶ ಇಲ್ಲ.