ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ
– ನಾಳೆ ಎಸ್ಎಂ ಕೃಷ್ಣ ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ
– ಇಂದು ಮಂಡ್ಯ ಜಿಲ್ಲೆಯಲ್ಲಿ ರಜೆ: ಎಲ್ಲಾ ಶಾಲೆ ಕಾಲೇಜಿಗೆ ರಜೆ
NAMMUR EXPRESS NEWS
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಕೊನೆಯುಸಿರೆಳೆದಿದ್ದಾರೆ. ಬುಧವಾರ ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇಂದು ಮಂಡ್ಯ ಜಿಲ್ಲೆಯಲ್ಲಿ ರಜೆ ಘೋಷಿಸಲಾಗಿದೆ. ಬುಧವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಿದ್ದಾರೆ. ನಾಳೆ ಸರ್ಕಾರಿ ಕಚೇರಿಗಳು, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಎಸ್ಎಂ ಕೃಷ್ಣ ಅವರಿಗೆ ಸಂತಾಪ ಸೂಚಿಸುವ ಉದ್ದೇಶದಿಂದ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಇರಲಿದೆ. ಇಂದಿನಿಂದ ಗುರುವಾರದವರೆಗೂ ರಾಜ್ಯದಲ್ಲಿ ಶೋಕಾಚರಣೆ ಇರಲಿದೆ. ನಾಳೆ ಶಾಲಾ-ಕಾಲೇಜುಗಳೂ ಸೇರಿದಂತೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ದೇಶ ಕಂಡ ಸಜ್ಜನ ರಾಜಕಾರಣಿ, ಕರ್ನಾಟಕದ ಮಾಜಿ ಸಿಎಂ ಎಸ್ಎಂ ಕೃಷ್ಣ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಸದಾಶಿವನಗರದ ನಿವಾಸದಲ್ಲಿ ನಿಧನರಾಗಿದ್ದಾರೆ. ವಿದೇಶಗಳಲ್ಲಿ ಎರಡು ಬಾರಿ (ವಿಶ್ವಸಂಸ್ಥೆಯಲ್ಲಿ ಒಮ್ಮೆ, ಮತ್ತು ಕಾಮನ್ ವೆಲ್ತ್ ಒಕ್ಕೂಟದಲ್ಲಿ ಒಮ್ಮೆ) ಭಾರತವನ್ನು ಪ್ರತಿನಿಧಿಸಿದ್ದಾರೆ. 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು.