- ಮುಂಬಡ್ತಿ, ವೇತನ ಹೆಚ್ಚಳ: ಇನ್ನಾದ್ರೂ ಕೆಲಸ ಪಕ್ಕಾ ಮಾಡ್ತಾರಾ..?
NAMMUR EXPRESS NEWS
ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯ್ತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಹಿರಿಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎಂದು ಉನ್ನತೀಕರಣ ಮಾಡಿದೆ. ಅಲ್ಲದೆ ಉತ್ತಮ ವೇತನ ನೀಡಿದೆ.
ಈ ಉನ್ನತೀಕರಣದಂತೆ ವೇತವನ್ನು ಹೆಚ್ಚಳ ಮಾಡಿ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ಇಲಾಖೆಯ ಅಡಿಯಲ್ಲಿ ಮಂಜೂರಾಗಿರುವ 6021 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿರಿಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎಂದು ಉನ್ನತೀಕರಣ ಮಾಡಲಾಗಿದೆ. ಅಲ್ಲದೇ ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ ಎಂದಿದ್ದಾರೆ. ಇನ್ನೂ ಪಿಡಿಓಗಳ ಉನ್ನತೀಕರಣ, ಪುನ ಪದನಾಮೀಕರಿಸಿದ ನಂತ್ರ ವೇತನ ಶ್ರೇಣಿಯನ್ನು ರೂ.37,900 ರಿಂದ 70,850 ಇದ್ದದ್ದನ್ನು ಗ್ರೂಪ್ ಸಿ ವೃಂದದ 1500 ಪಿಡಿಓಗಳಿಗೆ ತಕ್ಷಣದಿಂದ ಅನ್ವಯವಾಗುವಂತೆ ವೇತನ ಶ್ರೇಣಿ ರೂ.40,900 ರಿಂದ 78,2000ಕ್ಕೆ ಹೆಚ್ಚಿಸಲಾಗಿದೆ. ಇದಲ್ಲದೇ ಉಳಿದ 4521 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ವೇತನ ಶ್ರೇಣಿ ರೂ 37,900 ರಿಂದ 70,850 ಮುಂದುವರೆಸಲಾಗಿದೆ. ಹಿರಿಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವೃಂದಗಳಿಗೆ ನೇಮಕಾತಿ ಕಾರ್ಯವಿಧಾನವನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.