ಗಣೇಶ ಹಬ್ಬಕ್ಕೆ ಬರುತ್ತಾ ಗೃಹ ಲಕ್ಷ್ಮಿ ಹಣ?
– ಇನ್ನು 4 ದಿನದಲ್ಲಿ ಹಣ ಸಂದಾಯ: ಸಚಿವೆ
– ಜಿಎಸ್ ಟಿ, ಆದಾಯ ತೆರಿಗೆ ಕಟ್ಟುವವರಿಗೆ ಹಣ ಹಾಕಲ್ಲ
NAMMUR EXPRESS NEWS
ಬೆಂಗಳೂರು: ಮನೆ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹ ಲಕ್ಷ್ಮೀ ಹಣ ಇನ್ನೂ ನಾಲ್ಕು ದಿನಗಳಲ್ಲಿ ಒಟ್ಟಿಗೆ ಸಂದಾಯ ಮಾಡುತ್ತೇವೆ ಎಂದಿದ್ದಾರೆ.
ಎಲ್ಲಾ ಜಿಲ್ಲೆಗಳಿಗೂ 11 ನೇ ಕಂತು ಹಣ ಬಿಡುಗಡೆ ಆಗಿದ್ದು, ನಾಲ್ಕೈದು ದಿನಗಳಲ್ಲಿ 12ನೇ ಹಾಗೂ 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ, ಗೃಹಲಕ್ಷ್ಮೀ ಖಾತೆಗಳು ಡಿಲೀಟ್ ಆಗಿವೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇದುವರೆಗೂ ಒಂದೇ ಒಂದು ಕೂಡ ಡಿಲೀಟ್ ಆಗಿಲ್ಲ.ಯಾರು ಜಿಎಸ್ ಟಿ, ಆದಾಯ ತೆರಿಗೆ ಕಟ್ಟುತ್ತಿದ್ದಾರೆ, ಅಂತಹವರದ್ದು ಅವರು ಅಪ್ ಲೋಡ್ ಮಾಡಿದಾಗಲೇ ಡಿಲೀಟ್ ಮಾಡಿದ್ದೇವೆ. ನೋಂದಣಿ ಆದ ಬಳಿಕ ನಾವು ಡಿಲೀಟ್ ಮಾಡಿಲ್ಲ ಎಂದರು.