ಹೆಚ್.ಡಿ. ದೇವೇಗೌಡರ 91ನೇ ಜನ್ಮದಿನ..!
– ಗೌಡರ ನಿವಾಸಕ್ಕೆ ಬಂದ ಬಿಜೆಪಿ ನಾಯಕರು
– ಈ ಬಾರಿ ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ, ಇದ್ದಲ್ಲಿಂದಲೇ ಹಾರೈಸಿ
– ಕಾರ್ಯಕರ್ತರಿಗೆ ಮಾಜಿ ಪ್ರಧಾನಿ ಪತ್ರ
NAMMUR EXPRESS NEWS
ಬೆಂಗಳೂರು: ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು 91ನೇ ವಸಂತಕ್ಕೆ ಪದಾರ್ಪಣೆ ಮಾಡಿದ್ದು, ರಾಜಕೀಯ ಘಟಾನುಘಟಿ ನಾಯಕರು ಹುಟ್ಟು ಹಬ್ಬಕ್ಕೆ ಶುಭಕೋರಿದ್ದಾರೆ. ಗುರುವಾರ ಪದ್ಮನಾಭನಗರದ ನಿವಾಸಕ್ಕೆ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರ್ ಅಶೋಕ್, ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಭೇಟಿ ನೀಡಿ ದೇವೇಗೌಡರಿಗೆ ಶುಭಕೋರಿದ್ದಾರೆ. ಇನ್ನೂ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ರಾಷ್ಟ್ರ ಮತ್ತು ರಾಜ್ಯದ ಅನೇಕ ಗಣ್ಯರು ಶುಭ ಕೋರಿದ್ದಾರೆ.
ಈ ಬಾರಿ ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ, ಇದ್ದಲ್ಲಿಂದಲೇ ಹಾರೈಸಿ, ಕಾರ್ಯಕರ್ತರಿಗೆ ಮಾಜಿ ಪ್ರಧಾನಿ ಪತ್ರ:
ಕಾರಣಾಂತರಗಳಿಂದ ತಮ್ಮ 92ನೇ ವರ್ಷದ ಹುಟ್ಟುಹಬ್ಬವನ್ನು ಈ ಬಾರಿ ಆಚರಣೆ ಮಾಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಮನವಿ ಮೂಲಕ ತಿಳಿಸಿದ್ದಾರೆ. ಅಭಿಮಾನಿಗಳು ಹಾಗೂ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರಲ್ಲಿ ನನ್ನ ವಿನಂತಿ. ಇದೇ ತಿಂಗಳ 18 ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ.
ಪ್ರಸಕ್ತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕೋರುತ್ತೇನೆ. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.