ಬಿಗ್ ಬಾಸ್ ಆದ ಹನುಮಂತ!
– ಜವಾರಿ ಹುಡುಗನಿಗೆ ಒಲಿದ ಕಪ್: ಬಡವರ ಮಕ್ಕಳು ಬೆಳೆಸಿದ ಅಭಿಮಾನಿಗಳು
– 50 ಲಕ್ಷ ಬಹುಮಾನ: ಎಷ್ಟು ಕೈಗೆ ಸಿಗುತ್ತೆ..?
NAMMUR EXPRESS NEWS
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಹನುಮಂತ ಅವರು 5 ಕೋಟಿ ಮತಗಳನ್ನು ಪಡೆದು ವಿಜೇತರಾಗಿದ್ದಾರೆ. ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಗೆದ್ದ ಮೊದಲ ಸ್ಪರ್ಧಿ ಎಂಬ ದಾಖಲೆಯನ್ನು ಅವರು ಸೃಷ್ಟಿಸಿದ್ದಾರೆ. ತಮ್ಮ ಸರಳತೆ ಮತ್ತು ಬುದ್ಧಿವಂತಿಕೆಯಿಂದ ಜನರ ಮನ ಗೆದ್ದ ಹನುಮಂತ ಅವರ ಗೆಲುವು ಉತ್ತರ ಕರ್ನಾಟಕದ ಜನರ ಹರ್ಷಕ್ಕೆ ಕಾರಣವಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಯಾರು ಕಪ್ ಗೆಲ್ಲುತ್ತಾರೆ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬರೋಬ್ಬರಿ 5 ಕೋಟಿ ವೋಟ್ ಪಡೆದು ಹನುಮಂತ ಅವರು ಗೆದ್ದು ಬೀಗಿದ್ದಾರೆ. ಈ ಮೂಲಕ ಕರ್ನಾಟಕ ಜನರ ಫೇವರೇಟ್ ಎನಿಸಿಕೊಂಡಿದ್ದಾರೆ. ‘ಬಿಗ್ ಬಾಸ್ ಕನ್ನಡ’ ಇತಿಹಾಸದಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದು ಗೆದ್ದ ಮೊದಲ ಸ್ಪರ್ಧಿ ಹನುಮಂತ ಆಗಿದ್ದಾರೆ. ಈ ಮೂಲಕ ಅವರು ದಾಖಲೆ ಬರೆದಿದ್ದಾರೆ. ಬಿಗ್ ಬಾಸ್ನಲ್ಲಿ ಒಟ್ಟೂ 20 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಅವರಲ್ಲಿ 19 ಜನರನ್ನು ಹಿಂದಿಕ್ಕಿ ಹನುಮಂತ ಅವರು ಕಪ್ನ ಒಲಿಸಿಕೊಂಡಿದ್ದಾರೆ. ಜವಾರಿ ಹುಡುಗನಾಗಿ, ಜವಾರಿ ಹಾಡುಗಳನ್ನು ಹಾಡುತ್ತಾ ಗಮನ ಸೆಳೆದರು. ಯಾರೇ ನಾಮಿನೇಟ್ ಮಾಡಲಿ, ಯಾರು ಏನೇ ಕಾರಣ ಕೊಡಲಿ, ಅವರನ್ನು ಕಳಪೆಗೆ ಹಾಕಲಿ ಇದಕ್ಕೆಲ್ಲ ಅವರು ತಲೆಕೆಡಿಸಿಕೊಳ್ಳದೆ ಆಡಿದ್ದಾರೆ. ಅದಕ್ಕೆ ಕೊನೆಗೂ ಜಯ ಸಿಕ್ಕಂತೆ ಆಗಿದೆ. ‘ಒಳ್ಳೆಯತನಕ್ಕೆ ಜಯ ಇದೆ’ ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಹೇಳುತ್ತಿದ್ದಾರೆ. ಹನುಮಂತನ ಪರವಾಗಿ ಅನಕೇರು ವೋಟ್ ಮಾಡುವಂತೆ ಕೋರಿದ್ದರು. ಉತ್ತರ ಕರ್ನಾಟಕ ಮಂದಿ ಹನುಮಂತಗೆ ಭರ್ಜರಿ ವೋಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಉತ್ತರ ಕರ್ನಾಟಕ ಮಂದಿ ಮಾತ್ರ ಅಲ್ಲದೆ, ಎಲ್ಲಾ ಭಾಗದ ಜನರಿಗೂ ಅವರು ಇಷ್ಟ ಆಗಿದ್ದರು. ಈ ಕಾರಣಕ್ಕೆ ಅವರಿಗೆ 5 ಕೋಟಿ ವೋಟ್ ಬಿದ್ದಿದೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು ಜನರಿಗೆ ಇಷ್ಟವಾದ ಹನುಮಂತಗೆ ಎಲ್ಲರೂ ಶುಭ ಕೋರುತ್ತಿದ್ದಾರೆ.
ಹನುಮಂತ ಅವರಿಗೆ 50 ಲಕ್ಷ ರೂ. ನಗದು ಬಹುಮಾನ ಸಿಕ್ಕಿದೆ. 50 ಲಕ್ಷ ರೂ. ಬಹುಮಾನ ಸಿಕ್ಕಿದರೂ ಅವರಿಗೆ ಪೂರ್ಣ ಪ್ರಮಾಣದ ಹಣ ಕೈ ಸೇರುವುದಿಲ್ಲ. ನಗದು ಬಹುಮಾನ ಮೊತ್ತಕ್ಕೆ 30% ಗಿಫ್ಟ್ ಟ್ಯಾಕ್ಸ್ ವಿಧಿಸಲಾಗುತ್ತದೆ. ಹೀಗಾಗಿ ಸಿಗುವ ಬಹುಮಾನದಲ್ಲಿ 30% ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಬೇಕಾಗುತ್ತದೆ. ಈ ಹಣವನ್ನು ಸಂಸ್ಥೆಯವರು ಕಡಿತ ಮಾಡಿಯೇ ವಿಜೇತರಿಗೆ ನೀಡುತ್ತಾರೆ.
ರನ್ನರ್ ಅಪ್ ಆದ ಟಾಸ್ಕ್ ಕಿಂಗ್!
ಹನುಮಂತ ವಿನ್ನರ್ ಆಗಿ ಹೊರಹೊಮ್ಮಿದ್ರೆ, ತ್ರಿವಿಕ್ರಮ್ ರನ್ನರ್ ಅಪ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿಯಾಗಿ ಗುರುತಿಸಿಕೊಳ್ಳುತ್ತಿದ್ದರು. ಆದರೆ ಫಿನಾಲೆಯಲ್ಲಿ ತ್ರಿವಿಕ್ರಮ್ ಮುಗ್ಗರಿಸಿರೋದು ಫ್ಯಾನ್ಸ್ಗೆ ನಿರಾಸೆಯುಂಟು ಮಾಡಿದೆ. ಆದರೂ ಹನುಮಂತ ಅವರಿಗೆ ಗೆಲುವು ಸಿಕ್ಕಿರುವುದು ನನಗೆ ಖುಷಿ ಇದೆ ಅವರು ಅರ್ಹ ವ್ಯಕ್ತಿ ಹನುಮಂತ್ ಅವರಿಂದ ಕಲಿಯುವುದು ತುಂಬಾ ಇದೆ ಎಂದು ತ್ರಿವಿಕ್ರಮ್ ಅವರು ತಮ್ಮ ಮಾತಿನಲ್ಲಿ ತಿಳಿಸಿದ್ದಾರೆ.
ಸುದೀಪ್ ನಿರೂಪಣೆ ಮಾಡುತ್ತಿರುವ ಕೊನೆ ‘ಬಿಗ್ ಬಾಸ್ ಶೋ?
ಸುದೀಪ್ ನಿರೂಪಣೆಯಲ್ಲಿ ಬರುವ ಈ ಕಾರ್ಯಕ್ರಮ ತನ್ನದೇ ಆದ ಅಭಿಮಾನಿ ಬಳಗವನ್ನು ಸಂಪಾದಿಸಿದೆ. ಶನಿವಾರ ಮತ್ತು ಭಾನುವಾದ ಎಪಿಸೋಡ್ ನೋಡಲೆಂದೇ ಅಭಿಮಾನಿಗಳು ಕಾದು ಕುಳಿತಿರುತ್ತಾರೆ. ಅಷ್ಟರ ಮಟ್ಟಿಗೆ ಇವರ ನಿರೂಪಣಾ ಶೈಲಿ ಫೇಮಸ್ ಆಗಿದೆ. ವಾರದಲ್ಲಿ ನಡೆದಿರೋ ಸರಿ ತಪ್ಪುಗಳನ್ನು ಚರ್ಚಿಸಿ, ಸ್ಪರ್ಧಿಗಳನ್ನು ತಿದ್ದಿ ತೀಡೋ ಕೆಲಸವನ್ನು ಸುದೀಪ್ ಮಾಡ್ತಾ ಇದ್ರು, ಸೀಸನ್ 11 ಸುದೀಪ್ ಅವರ ಕೊನೆ ಸೀಸನ್ ಅನ್ನೋದು ಮಾತ್ರ ಅಭಿಮಾನಿಗಳಿಗೆ ಬೇಸರ ತರಿಸಿದೆ.