ರಾಜ್ಯದಲ್ಲಿ ಮೂರು ದಿನ ಭಾರೀ ಶೀತಗಾಳಿ
– ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
– ಡಿಸೆಂಬರ್ 18-22 ರವರೆಗೆ ರಾಜ್ಯಾ ದ್ಯಂತ ಶುಷ್ಕ ಹವಾಮಾನ
NAMMUR EXPRESS NEWS
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಬೆನ್ನಲ್ಲೇ ಇತ್ತ ಕರ್ನಾಟಕ ರಾಜ್ಯದಲ್ಲಿ ತಾಪಮಾನ ಕುಸಿತವಾಗಿದ್ದು, ಮುಂದಿನ 3 ದಿನಗಳ ಕಾಲ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ತಾಪಮಾನ ಗಣನೀಯವಾಗಿ ಕುಸಿತವಾಗಿದ್ದು, ಮುಂದಿನ ದಿನಗಳಲ್ಲಿ ತಾಪಮಾನ 2 ರಿಂದ 4 ಡಿಗ್ರಿಗಳ ವರೆಗೂ ಕುಸಿಯುವ ಸಾಧ್ಯತೆ ಇದೆ. ಮುಂದಿನ 3 ದಿನ ಶೀತಗಾಳಿ ಬೀಸುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನಗಳವರೆಗೆ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ‘ಸಾಮಾನ್ಯಕ್ಕಿಂತ ಕಡಿಮೆ’ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಪ್ರಮುಖವಾಗಿ ರಾಜ್ಯದ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶೀತಗಾಳಿ ಮುಂದುವರಿಯುವ ಸಾಧ್ಯತೆ ಇದ್ದು, ಡಿಸೆಂಬರ್ 18-22 ರವರೆಗೆ ರಾಜ್ಯಾದ್ಯಂತ ಶುಷ್ಕ ಹವಾಮಾನ ಮುಂದುವರಿಯುವ ಮುನ್ಸೂಚನೆ ಇದೆ. ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶೀತಗಾಳಿ ವಾತಾವರಣ ನಿರೀಕ್ಷಿಸಲಾಗಿದೆ. ಉತ್ತರ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುತ್ತದೆ. ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಡಿಸೆಂಬರ್ 20 ರವರೆಗೆ ಮಂಜು ಆವರಿಸಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
– ರೆಡ್ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ
ಇನ್ನು ಮುಂದಿನ ಮೂರ್ನಾಲ್ಕು ದಿನಗಳವರೆಗೆ ಬೀದರ್ ಜಿಲ್ಲೆಯಾದ್ಯಂತ ಶೀತಗಾಳಿ ಬೀಸಲಿದ್ದು, ಸಾಮಾನ್ಯ ತಾಪಮಾನಕ್ಕಿಂತ 5 ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರಲಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ. ಸೂರ್ಯೋದಯಕ್ಕಿಂತ ಮುಂಚೆ, ಸೂರ್ಯಾಸ್ತದ ನಂತರ ವಾಕಿಂಗ್ ಮಾಡುವವರು ಎಚ್ಚರ ವಹಿಸಬೇಕು. ದ್ವಿಚಕ್ರ ವಾಹನಗಳಲ್ಲಿ ಹೊರಗೆ ಓಡಾಡಬಾರದು ಎಂದು ಎಚ್ಚರದಿಂದ ಇರಬೇಕು ಎಂದು ತಿಳಿಸಿದ್ದಾರೆ.