Categories
ರಾಜ್ಯ

2 ದಿನ ರಾಜ್ಯದಲ್ಲಿ ಭಾರೀ ಮಳೆ ಅಲರ್ಟ್!

2 ದಿನ ರಾಜ್ಯದಲ್ಲಿ ಭಾರೀ ಮಳೆ ಅಲರ್ಟ್!
– ಯೆಲ್ಲೋ ಅಲರ್ಟ್ ಹವಾಮಾನ ಇಲಾಖೆ ಘೋಷಣೆ
– ಎಲ್ಲೆಡೆ ಮೋಡ ಕವಿದ ವಾತಾವರಣ

NAMMUR EXPRESS NEWS
ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಹಲವು ಕಡೆಗಳಲ್ಲಿ ಆರಂಭವಾಗಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಯುಗಾದಿ ಹಬ್ಬದ ದಿನವಾದ ಭಾನುವಾರ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿದ್ದು ಜನರ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಧಾರವಾಡ ಮತ್ತು ಬೆಳಗಾವಿ ಜಿಲ್ಲೆಯ ಹಲವು ಕಡೆಗಳಲ್ಲಿ ಭಾನುವಾರ ವ್ಯಾಪಕ ಮಳೆಯಾಗಿದೆ. ಭಾನುವಾರ ಸಂಜೆ ಹುಬ್ಬಳ್ಳಿ ನಗರದಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಿದ್ದು ರಸ್ತೆಗಳು ತುಂಬಿ ಹರಿದವು. ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವಂತಾಗಿತ್ತು.

ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಾರ್ಚ್ ಎರಡನೇ ವಾರದಿಂದಲೇ ರಾಜ್ಯದ ಹಲವು ಕಡೆಗಳಲ್ಲಿ ವಸಂತ ಮಳೆ ಆರಂಭವಾಗಿದೆ. ಕೊಡಗು, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಚಾಮರಾಜನಗರ, ತುಮಕೂರು ಜಿಲ್ಲೆಯ ಹಲವು ಕಡೆಗಳಲ್ಲಿ ಈಗಾಗಲೇ ಮಳೆಯಾಗಿದೆ. ಈ ಬಾರಿ ಪೂರ್ವ ಮುಂಗಾರು ಮಳೆ ಉತ್ತಮವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್‌ನಿಂದ ಜೂನ್‌ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದ್ದು, ಈ ಬಾರಿ ಹಿಂಗಾರು ಮಳೆ ದುರ್ಬಲವಾಗಿರಬಹುದು ಎಂದು ಅಂದಾಜಿಸಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.