ಕರ್ನಾಟಕದಲ್ಲಿಂದು ಭಾರೀ ಮಳೆಯ ಮುನ್ಸೂಚನೆ
* 3 ಜಿಲ್ಲೆಗಳಿಗೆ ಆರೆಂಜ್,27 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್
* ಮಳೆಯ ಜೊತೆ ಗಾಳಿಯೂ ಇರಲಿದೆ ಎಚ್ಚರ!
NAMMMUR EXPRESS NEWS
ಬೆಂಗಳೂರು: ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು ಅಕಾಲಿಕ ಮಳೆಗೆ ಜನಜೀವನ ಅಸ್ಥವ್ಯಸ್ಥವಾಗಿದೆ. ಇಂದೂ ಕೂಡ ಭಾರಿ ಮಳೆಯಾಗುವ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ರಾಜ್ಯದ 3 ಜಿಲ್ಲೆಗಳಿಗೆ ಆರೆಂಜ್ ಮತ್ತು 27 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಿದೆ.ಕರಾವಳಿಯಲ್ಲಿ ಮಳೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಗಾಳಿಯ ವೇಗ ಕೂಡ ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದ್ದು ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.
ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.







