ಹಿರಿಯ ಸಾಹಿತಿ ನಾ. ಡಿಸೋಜ ವಿಧಿವಶ
– ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನ
– ಜ.6ಕ್ಕೆ ಸಾಗರದ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ
NAMMUR EXPRESS NEWS
ಶಿವಮೊಗ್ಗ: ಹಿರಿಯ ಸಾಹಿತಿ ನಾ. ಡಿಸೋಜ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರ ಪುತ್ರ ನವೀನ್ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ತಮ್ಮ ತಂದೆಯ ನಿಧನದ ಬಗ್ಗೆ ಮಾಹಿತಿ ನೀಡಿದ್ದಾರೆ. ಜನವರಿ 5ರಂದು ಸಂಜೆ 7:30ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪೂಜ್ಯ ತಂದೆ ದೈವಾಧೀನರಾಗಿದ್ದಾರೆ.ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ತಿಳಿಸಿದ್ದಾರೆ.