ಸಂಚಾರಿ ನಿಯಮ ಪಾಲಿಸದಿದ್ದರೆ ಲೈಸೆನ್ಸ್ ರದ್ದು!
– 65 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಲೋಕಾರ್ಪಣೆ
– ಇಡೀ ರಾಜ್ಯಕ್ಕೆ ಬರಲಿದೆ ಆಧುನಿಕ ಆಂಬುಲೆನ್ಸ್
NAMMUR EXPRESS NEWS
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದ್ದಾರೆ.
ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ ಈ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆ್ಯಂಬುಲೆನ್ಸ್ ಗಳು ನೆರವಾಗುತ್ತವೆ ಎಂದು ಹೇಳಿದ್ದಾರೆ.
ಸದ್ಯ 65 ಆಧನಿಕ ಮತ್ತು ಪ್ರಾಥಮಿಕ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದರು.
ಸಂಚಾರಿ ನಿಯಮ ಪಾಲಿಸದಿದ್ದರೆ ಲೈಸೆನ್ಸ್ ರದ್ದು
ಮೊಬೈಲ್ ಬಳಸಿ ವಾಹನ ಓಡಿಸಿದರೆ ಅಪಘಾತಗಳಾಗದೆ ಇರಲು ಸಾಧ್ಯವಿಲ್ಲ,ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು.
ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು.