ದಕ್ಷಿಣ ರೈಲ್ವೆಯಲ್ಲಿ ಉದ್ಯೋಗಾವಕಾಶ.
– 2860 ಹುದ್ದೆಗಳ ಭರ್ತಿಗೆ ಅಧಿಸೂಚನೆ
– ಆನ್ಲೈನ್ ಅರ್ಜಿ ಆಹ್ವಾನ
NAMMUR EXPRESS NEWS
ದಕ್ಷಿಣ ರೈಲ್ವೆ ವಲಯದ, ರೈಲ್ವೆ ನೇಮಕಾತಿ ಕೋಶವು ವಲಯದ ಎಲ್ಲ ಡಿವಿಷನ್ಗಳಲ್ಲಿ ಅಗತ್ಯ ಹುದ್ದೆಗಳನ್ನು ಭರ್ತಿ ಮಾಡಲು ಉದ್ಯೋಗ ಪ್ರಕಟಣೆ ಹೊರಡಿಸಿದೆ. 1961 ರ ಅಪ್ರೆಂಟಿಸ್ ಕಾಯ್ದೆಯಡಿ, ಈ ಶಿಶಿಕ್ಷು ಹುದ್ದೆಗಳನ್ನು ಭರ್ತಿ ಮಾಡಲಿದ್ದು ಇಲ್ಲಿದೆ ಮಾಹಿತಿ ಅರ್ಜಿ ಸಲ್ಲಿಸಿ.
ಉದ್ಯೋಗ ರೈಲ್ವೆ ವಲಯ: ದಕ್ಷಿಣ ರೈಲ್ವೆ
ಹುದ್ದೆಗಳ ಹೆಸರು : ಅಪ್ರೆಂಟಿಸ್ (ತರಬೇತುದಾರರು)
ಹುದ್ದೆಗಳ ಸಂಖ್ಯೆ : 2860
ಫ್ರೆಶರ್ ಕೆಟಗರಿ ಅಡಿಯಲ್ಲಿ ಕೊಯಂಬತೂರು, ಪೆರಂಬೂರು ಡಿವಿಷನ್ಗಳ ವರ್ಕ್ಶಾಪ್ ಹಾಗೂ ಹಾಸ್ಪಿಟಲ್ಗಳಲ್ಲಿ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಮಾಜಿ- ಐಟಿಐ ಅಭ್ಯರ್ಥಿಗಳ ಕೆಟಗರಿ ಅಡಿಯಲ್ಲಿ ಸೇಲಂ, ಪಲಕ್ಕಾಡ್, ಪರೆಂಬೂರು, ಅರಕ್ಕೋನಂ, ಚೆನ್ನೈ ಡಿವಿಷನ್, ಅವಡಿ, ರೊಯಪುರಂ, ಪೊನ್ಮಲೈ, ಮಧುರೈ, ತಿರುಚನಾಪಲ್ಲಿ, ತಂಬರಂ, ಸೇರಿದಂತೆ ವಿವಿಧ ವರ್ಕ್ಶಾಪ್ ಹಾಗೂ ಡಿವಿಷನ್ಗಳಲ್ಲಿ ನೇಮಕ ಮಾಡಲಾಗುತ್ತದೆ.
ಅರ್ಹತೆಗಳು
ಅರ್ಜಿ ಸಲ್ಲಿಸಲು ಬಯಸುವವರು 10ನೇ ತರಗತಿ / ತತ್ಸಮಾನ ವಿದ್ಯಾರ್ಹತೆ ಜತೆಗೆ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಪಾಸ್ ಮಾಡಿರಬೇಕು. ವಿವಿಧ ಟ್ರೇಡ್ನಲ್ಲಿ ವ್ಯಾಸಂಗ ಮಾಡಿದವರು ಎನ್ಸಿವಿಟಿ / ಎಸ್ಸಿವಿಟಿ ಪ್ರಮಾಣ ಪತ್ರ ಹೊಂದಿದ್ದಲ್ಲಿ ಅರ್ಜಿ ಸಲ್ಲಿಸಬಹುದು. ಕಾರ್ಪೆಂಟರ್, ಮಷಿನಿಸ್ಟ್, ಪೇಂಟರ್, ಫಿಟ್ಟರ್, ವೆಲ್ಡರ್, ರೇಡಿಯಾಲಜಿ, ಎಂಎಂವಿ, ಇಲೆಕ್ಟ್ರೀಷಿಯನ್, ಟರ್ನರ್, ಅಡ್ವಾನ್ಸ್ಡ್ ವೆಲ್ಡರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಪಾಸ್ಸಾ, ವೈಯರ್ಮನ್, ಕಾರ್ಪೆಂಟರ್ ಟ್ರೇಡ್ಗಳಲ್ಲಿ ಐಟಿಐ ಓದಿರಬೇಕು.
ಕನಿಷ್ಠ 15 ವರ್ಷ ಆಗಿರುವ, ಗರಿಷ್ಠ 24 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ.
ಒಬಿಸಿಗೆ 3 ವರ್ಷ, ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 28-02-2024 ರ ಸಂಜೆ 05 ಗಂಟೆವರೆಗೆ.
ಆಯ್ಕೆ ವಿಧಾನ ಹೇಗಿರುತ್ತದೆ?
ಅಭ್ಯರ್ಥಿಗಳನ್ನು ಅವರು ಐಟಿಐ ಟ್ರೇಡ್ನಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ದಾಖಲೆಗಳ ಪರಿಶೀಲನೆ / ಮೆಡಿಕಲ್ ಟೆಸ್ಟ್ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.