ಜೋಗ ನೋಡಲು ಈಗ ಸುಂದರ ಸುಂದರ!
– ಪ್ರವಾಸಿಗರ ಸೆಳೆಯುತ್ತಿದೆ ಜೋಗ ಜಲಪಾತ
– ಪ್ರತಿ ದಿನ ಸಾವಿರಾರು ಜನರ ಭೇಟಿ
NAMMUR EXPRESS NEWS
ರಾಜ್ಯದ ಪ್ರಮುಖ ಪ್ರವಾಸಿ ತಾಣವಾದ ಜೋಗ ಜಲಪಾತವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿದೆ. ಶರಾವತಿ ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಹಾಲ್ನೊರೆಯಂತೆ ರಾಜ, ರಾಣಿ, ರೋರರ್, ರಾಕೆಟ್ ಕಂಗೊಳಿಸುತ್ತಿದೆ. ಈ ಜಲಪಾತವು ಸುಮಾರು 292 ಮೀ ಎತ್ತರದಿಂದ ಭೋರ್ಗರೆಯುತ್ತಾ ಶರಾವತಿ ನದಿಯು ನಾಲ್ಕು ಸೀಳಾಗಿ ಧುಮುಕುತ್ತದೆ. ಶರಾವತಿ ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ವಿಶ್ವವಿಖ್ಯಾತ ಜೋಗ ಜಲಪಾತ ಕಳೆಗಟ್ಟಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತದಲ್ಲಿ ಶರಾವತಿ ಧುಮ್ಮಿಕ್ಕಿ ಹರಿಯುತ್ತಿದ್ದು, ಹಾಲ್ನೊರೆಯಂತೆ ರಾಜ, ರಾಣಿ, ರೋರರ್, ರಾಕೆಟ್ ಕಂಗೊಳಿಸುತ್ತಿದೆ. ಇನ್ನು ಜೋಗದ ವೈಭೋಗ ಕಣ್ತುಂಬಿಕೊಳ್ಳಲು ರಾಜ್ಯದ ಹಲವೆಡೆಗಳಿಂದ ನೂರಾರು ಪ್ರವಾಸಿಗರು ಆಗಮಿಸಿದ್ದಾರೆ. ಜಲಪಾತದ ಎದುರು ಸೆಲ್ಪಿ ತೆಗೆದುಕೊಂಡು ಪ್ರವಾಸಿಗರು ಖುಷ್ ಆಗಿದ್ದಾರೆ. ಪ್ರಮುಖ ಪ್ರವಾಸಿ ತಾಣವಾದ ಜೋಗ ಜಲಪಾತವು ಸುಮಾರು 292 ಮೀ ಎತ್ತರದಿಂದ ಭೋರ್ಗರೆಯುತ್ತಾ ಶರಾವತಿ ನದಿಯು ನಾಲ್ಕು ಸೀಳಾಗಿ ಧುಮುಕುತ್ತದೆ. ನೀವೂ ಒಮ್ಮೆ ನೋಡಿ ಬನ್ನಿ ಜೋಗ ಜಲಪಾತ..!