ಕರ್ನಾಟಕ ಬಜೆಟ್ 2024..!
– ಪ್ರವಾಸೋದ್ಯಮಕ್ಕೆ ಬಜೆಟ್ನಲ್ಲಿ ಸರ್ಕಾರ ಬಂಪರ್ ಕೊಡುಗೆ.!
– ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನ!
– ಮದ್ಯಪ್ರಿಯರಿಗೆ ಬಿಕ್ ಶಾಕ್ : ಸಮುದ್ರ ಆಂಬುಲೆನ್ಸ್ ಖರೀದಿ
– ಮೀನುಗಾರಿಕೆಗೆ 3000 ಕೋಟಿ ರೂಪಾಯಿ ಮೀಸಲು
NAMMUR EXPRESS NEWS
ಬೆಂಗಳೂರು: ಪ್ರವಾಸೋದ್ಯಮಕ್ಕೆ ಬಜೆಟ್ನಲ್ಲಿ ಕರ್ನಾಟಕ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಅಂಜನಾದ್ರಿ ಬೆಟ್ಟದಲ್ಲಿನ ಸುತ್ತಮುತ್ತಲಿನ ಪ್ರದೇಶ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ನೀಡಿದೆ. ಜೊತೆಗೆ ರಾಜ್ಯದ ಪ್ರವಾಸಿ ತಾಣಗಳಲ್ಲಿ 10 ಕೇಬಲ್ ಕಾರ್ ರೋಪ್ ವೇ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಹಲವು ಇಂಟ್ರಪ್ರೇಷನ್ ಸೆಂಟರ್ ತೆರೆಯಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದರು. ಸಿಎಂ ಸಿದ್ದರಾಮಯ್ಯ ಅವರು 2024-2025ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದಲ್ಲಿ ಪ್ರವಾಸೋದ್ಯಮಕ್ಕೆ ಬಂಪರ್ ಕೊಡುಗೆ ನೀಡಿರುವ ಬಗ್ಗೆ ಪ್ರಸ್ತಾಪಿಸಿದರು. ಕೊಪ್ಪಳ ಜಿಲ್ಲೆಯ ಆಂಜನಾದ್ರಿ ಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಪೌರಾಣಿಕ ಮತ್ತು ಐತಿಹಾಸಿಕ ಮಹತ್ವವನ್ನು ಹೊಂದಿದ್ದು ಇದರ ಅಭಿವೃದ್ಧಿಗೆ 100 ಕೋಟಿ ಅನುದಾನವನ್ನು ನೀಡಲಾಗುವುದು ಎಂದು ಹೇಳಿದರು.
ಮದ್ಯಪ್ರಿಯರಿಗೆ ಬಿಕ್ ಶಾಕ್:
ಸಿಎಂ ಸಿದ್ದರಾಮಯ್ಯ 15ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿರುವರು. ಒಟ್ಟು 3,71, 383 ಕೋಟಿ ರೂ. ಮೊತ್ತದ ಬಜೆಟ್ ಇದಾಗಿದೆ. ಬಜೆಟ್ ಮಂಡನೆ ವೇಳೆ ಮದ್ಯದ ದರ ಮತ್ತೆ ಹೆಚ್ಚಿಸಲು ನಿರ್ಧಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಹೌದು.. ಬಿಯರ್ ಸೇರಿದಂತೆ ಎಲ್ಲಾ ಬ್ರಾಂಡ್ಗಳ ಬೆಲೆಯನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಬಿಗ್ ಶಾಕ್ ಕೊಟ್ಟಿದೆ. ನಿರೀಕ್ಷೆಯಂತೆ ಈ ಸಲ ಮೀನುಗಾರಿಕೆ ಕ್ಷೇತ್ರಕ್ಕೂ ಆದ್ಯತೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3,000 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ.
7 ಕೋಟಿ ರೂಪಾಯಿ ಸಮುದ್ರ ಆಂಬುಲೆನ್ಸ್ ಖರೀದಿ:
ಸಮುದ್ರ ಮೀನುಗಾರಿಕೆಗೆ ಹೋಗುವ ಮೀನುಗಾರರು ಅಪಾಯಕ್ಕೆ ಸಿಲುಕಿದಾಗ ಅವರನ್ನು ರಕ್ಷಿಸಲು ವಿಶೇಷ “ಸಮುದ್ರ ಆಂಬುಲೆನ್ಸ್” ಖರೀದಿಸಲಾಗುವುದು. ತುರ್ತು ಸಂದರ್ಭದಲ್ಲಿ ಅವರ ರಕ್ಷಣೆಗೆ ಅತ್ಯಾಧುನಿಕ ಸಮುದ್ರ ಅಂಬುಲೆನ್ಸ್ ಅಗತ್ಯವನ್ನು ಮನಗಂಡು ಈ ಕ್ರಮ ತೆಗೆದುಕೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮೀನುಗಾರಿಕೆಗೆ ಸಂಬಂಧಿಸಿದ ಸಂಶೋಧನೆ ಅಗತ್ಯವಾಗಿದ್ದು, ಇದಕ್ಕಾಗಿ ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪಿಸಲಾಗುತ್ತದೆ. ಹಾಗೆಯೇ, ಭದ್ರಾವತಿಯಲ್ಲಿ ಹೈಟೆಕ್ ಮೀನು ಮಾರುಕಟ್ಟೆ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.